ಶಿವಮೊಗ್ಗ ಲೈವ್.ಕಾಂ | SAGARA NEWS | 10 ಜೂನ್ 2020
ಮುಂಬೈನಿಂದ ಬಂದಿದ್ದ ಯುವಕನೊಬ್ಬನಿಗೆ ಕರೋನ ಪಾಸಿಟಿವ್ ಬಂದ ಹಿನ್ನೆಲೆ, ಸಾಗರ ತಾಲೂಕಿನಲ್ಲಿ ಆತಂಕ ಮೂಡಿದೆ. ಮುಂಬೈನಿಂದ ರೈಲಿನಲ್ಲಿ ಬಂದಿದ್ದ ಈತ ಬೈಕ್ನಲ್ಲಿ ಮನೆ ಸೇರಿದ್ದ ಎಂದು ತಿಳಿದು ಬಂದಿದೆ. ಆ ಬಳಿಕ ಈತನಲ್ಲಿ ಸೋಂಕು ಕಾಣಿಸಿಕೊಂಡಿದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಸಾಗರ ತಾಲೂಕಿನ ಚನ್ನಗೊಂಡ ಗ್ರಾಮ ಪಂಚಾಯಿತಿ ವ್ಯಾಪ್ತಿಯ 25 ವರ್ಷದ ಯುವಕನಲ್ಲಿ ಕರೋನ ಸೋಂಕು ಕಾಣಿಸಿಕೊಂಡಿದೆ. ಈತ ಮುಂಬೈನ ಹೊಟೇಲ್ ಒಂದರಲ್ಲಿ ಕೆಲಸ ಮಾಡುತ್ತಿದ್ದ. ಮಹಾರಾಷ್ಟ್ರದಿಂದ ರೈಲಿನ ಮೂಲಕ ಬೈಂದೂರಿಗೆ ಆಗಮಿಸಿದ್ದ. ಅಲ್ಲಿಂದ ಸಹೋದರನ ಬೈಕ್ನಲ್ಲಿ ಮನೆಗೆ ಬಂದಿದ್ದ.
ಆರೋಗ್ಯ ಇಲಾಖೆ ಅಧಿಕಾರಿಗಳು ದೌಡು
ಜೂನ್ 5ರಂದು ಯುವಕ ಊರಿಗೆ ಬಂದಿದ್ದ. ಮುಂಬೈನಿಂದ ಯುವಕನೊಬ್ಬ ಗ್ರಾಮಕ್ಕೆ ಬಂದಿರುವ ವಿಚಾರ ತಿಳಿದು ಮರುದಿನವೇ ಆರೋಗ್ಯ ಇಲಾಖೆ ಸಿಬ್ಬಂದಿ ಯುವಕನ ಮನೆಗೆ ದೌಡಾಯಿಸಿದ್ದರು. ಕೂಡಲೇ ಆತನನ್ನು ಶಿವಮೊಗ್ಗಕ್ಕೆ ಕರೆತಂದು ಕ್ವಾರಂಟೈನ್ಗೆ ಒಳಪಡಿಸಿ, ಗಂಟಲು ದ್ರವ ಪರೀಕ್ಷೆ ನಡೆಸಿದ್ದರು. ಇದರ ವರದಿ ಬಂದಿದ್ದು ಯುವಕನಿಗೆ ಕರೋನ ಪಾಸಿಟಿವ್ ಕಾಣಿಸಿಕೊಂಡಿದೆ.
ಮನೆಯವರೆಲ್ಲ ಕ್ವಾರಂಟೈನ್ಗೆ
ಇನ್ನು, ಯುವಕನಿಗೆ ಸೋಂಕು ತಗುಲಿರುವುದು ದೃಢವಾಗುತ್ತಿದ್ದಂತೆ ಕುಟುಂಬದ ಐವರನ್ನು ಹೋಂ ಕ್ವಾರಂಟೈನ್ನಲ್ಲಿ ಇರುವಂತೆ ಸೂಚಿಸಲಾಗಿದೆ. ಇಡೀ ಮನೆಯನ್ನು ಅಧಿಕಾರಿಗಳು ಸ್ಯಾನಿಟೈಸ್ ಮಾಡಿದ್ದಾರೆ. ಆರೋಗ್ಯ ಸಮಸ್ಯೆ ಎದುರಾದರೆ ತಕ್ಷಣ ತಿಳಿಸುವಂತೆ ಸೂಚಿಸಿದ್ದಾರೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]