ಶಿವಮೊಗ್ಗ ಲೈವ್.ಕಾಂ | SHIMOGA NEWS | 10 ಜೂನ್ 2020
ನಗರದ ಎನ್.ಟಿ.ರಸ್ತೆ ಮೊದಲನೆ ತಿರುವು, ದುರ್ಗಿಗುಡಿಯಲ್ಲಿ ಸರ್ಕಾರಿ ಕಚೇರಿ, ವಾಣಿಜ್ಯ ಮಳಿಗೆಗಳು ಇರುವುದರಿಂದ ವಾಹನ ದಟ್ಟಣೆ ಹೆಚ್ಚುತ್ತಿದೆ. ಮತ್ತೊಂದೆಡೆ ಸಾರ್ವಜನಿಕರು ಎಲ್ಲೆಂದರಲ್ಲಿ ವಾಹನ ನಿಲ್ಲಿಸುವುದರಿಂದ ಟ್ರಾಫಿಕ್ ಜಾಮ್ ಆಗುತ್ತಿದೆ. ಇದನ್ನು ತಪ್ಪಿಸುವ ಸಲುವಾಗಿ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಪರ್ಯಾಯ ವ್ಯವಸ್ಥೆ ಮಾಡಿ ಆದೇಶ ನೀಡಿದ್ದಾರೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಎನ್.ಟಿ.ರಸ್ತೆ ಕೆಲವೆಡೆ ವಾಹನ ನಿಲುಗಡೆ ನಿಷೇಧ
ಎನ್.ಟಿ.ರಸ್ತೆಯ ಮೊದಲನೇ ತಿರುವಿನಲ್ಲಿ ಅಶೋಕ ಹೋಟೆಲ್ ನಿಂದ ಬಲಿಜ ಸೊಸೈಟಿಯವರೆಗೆ ರಸ್ತೆಯ ಎರಡೂ ಬದಿಯಲ್ಲಿ ವಾಹನ ನಿಲುಗಡೆ ನಿಷೇಧಿಸಿದ್ದು, ಬಿ.ಹೆಚ್.ರಸ್ತೆಯ ಮೊದಲನೇ ಕ್ರಾಸ್ನಲ್ಲಿ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸಲಾಗಿದೆ.
ದುರ್ಗಿಗುಡಿಯ ಕೆಲವೆಡೆ ಪಾರ್ಕಿಂಗ್ ಇಲ್ಲ
ದುರ್ಗಿಗುಡಿ ಮುಖ್ಯರಸ್ತೆಯಲ್ಲಿ ಎಲ್.ಟಿ.ಕಾಂಪ್ಲೆಕ್ಸ್‍ನಿಂದ ಪ್ರತಾಪ್ ಆರ್ಕೇಡ್‍ವರೆಗಿನ ರಸ್ತೆಯ ಎರಡೂ ಬದಿಯಲ್ಲಿ ವಾಹನಗಳ ನಿಲುಗಡೆ ನಿಷೇಧಿಸಲಾಗಿದೆ. ಪ್ರತಾಪ್ ಆರ್ಕೇಡ್ ಪಕ್ಕದಲ್ಲಿ ಕನ್ಸವರ್‍ವೆನ್ಸಿ ರಸ್ತೆ ಮತ್ತು ಅಪೋಲೋ ಮೆಡಿಕಲ್ ಪಕ್ಕದ ಕನ್ಸವರ್‍ವೆನ್ಸಿ ರಸ್ತೆಗಳಲ್ಲಿ ವಾಹನಗಳ ನಿಲುಗಡೆಗೆ ಸ್ಥಳಾವಕಾಶ ಕಲ್ಪಿಸಲಾಗಿದೆ.
ಭಾರಿ ವಾಹನ ಸಂಚಾರ ಬಂದ್
ಶಿವಮೊಗ್ಗ ನಗರದ ವಿನೋಬನಗರ 40 ಅಡಿ ರಸ್ತೆ, 2ನೇ ಮುಖ್ಯ ರಸ್ತೆ, 1ನೇ ಹಂತ, 2ನೇ ಬ್ಲಾಕ್ (ಪೊಲೀಸ್ ಚೌಕಿಯಿಂದ ರೈಲ್ವೆ ಟ್ರ್ಯಾಕ್) ಕಡೆಗೆ ಹೋಗುವ ರಸ್ತೆ ನಿರ್ಮಾಣ ಕಾರ್ಯ ನಡೆಯುತ್ತಿರುವುದರಿಂದ ಈ ರಸ್ತೆಯಲ್ಲಿ ಭಾರಿ ವಾಹನಗಳ ಸಂಚಾರವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]