ಶಿವಮೊಗ್ಗ ಲೈವ್.ಕಾಂ | BHADRAVATHI NEWS | 11 ಜೂನ್ 2020
ಭದ್ರಾವತಿ ರಂಗಪ್ಪ ಸರ್ಕಲ್ ಸಮೀಪದ ರಸ್ತೆಯೊಂದನ್ನು ಸೀಲ್ ಡೌನ್ ಮಾಡಲಾಗಿದೆ. ಇವತ್ತು ಬೆಳಗ್ಗೆ ರಸ್ತೆಯ ಎರಡು ಕಡೆಯಲ್ಲಿ ಬ್ಯಾರಿಕೇಡ್ ಹಾಕಲಾಗಿದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ರಂಗಪ್ಪ ಸರ್ಕಲ್ನಿಂದ ಹೊಳೆಹೊನ್ನೂರು ಕಡೆಗೆ ಹೋಗುವ ರಸ್ತೆಯನ್ನು ಬಂದ್ ಮಾಡಿ, ಸ್ಯಾನಿಟೈಸ್ ಮಾಡಲಾಗಿದೆ. ಈ ರಸ್ತೆಯಲ್ಲಿ ಜನ ಮತ್ತು ವಾಹನ ಸಂಚಾರವನ್ನು ನಿರ್ಬಂಧಿಸಲಾಗಿದೆ.
ಅಗತ್ಯ ವಸ್ತುಗಳ ಪೂರೈಕೆಗೆ ಕ್ರಮ
ಇನ್ನು 14 ದಿನ ಈ ರಸ್ತೆಯನ್ನು ಕಂಟೈನ್ಮೆಂಟ್ ಜೋನ್ ಎಂದು ಘೋಷಿಸಲಾಗಿದೆ. ಇಲ್ಲಿನ ನಿವಾಸಿಗಳಿಗೆ ನಗರಸಭೆ ವತಿಯಿಂದ ಅಗತ್ಯ ವಸ್ತುಗಳನ್ನು ಪೂರೈಕೆ ಮಾಡಲಾಗುತ್ತದೆ. ಜನರು ಹಣ ಕೊಟ್ಟು ಖರೀದಿಸಬಹುದಾಗಿದೆ.
ಸದ್ಯಕ್ಕೆ ಇಡೀ ಪ್ರದೇಶದಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ. ಆರೋಗ್ಯ ಇಲಾಖೆ ಅಧಿಕಾರಿಗಳು ಸ್ಥಳದಲ್ಲಿ ಮೊಕ್ಕಾಂ ಹೂಡಿದ್ದಾರೆ. ಮನೆಯಿಂದ ಯಾರೂ ಹೊರ ಬಾರದಂತೆ ಮೈಕ್ ಮೂಲಕ ಅನೌನ್ಸ್ ಮಾಡಲಾಗುತ್ತಿದೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]