ಶಿವಮೊಗ್ಗ ಲೈವ್.ಕಾಂ | SHIMOGA NEWS | 12 ಜೂನ್ 2020
ವ್ಯಕ್ತಿಯೊಬ್ಬರಲ್ಲಿ ಕರೋನ ಸೋಂಕು ಕಾಣಿಸಿಕೊಂಡ ಹಿನ್ನೆಲೆ ನಗರದ ಕುಂಬಾರ ಕೇರಿ ರಸ್ತೆಯನ್ನು ಸೀಲ್ ಡೌನ್ ಮಾಡಲಾಗಿದೆ. ವ್ಯಕ್ತಿ ಜೊತೆಗಿನ ಪ್ರಾಥಮಿಕ ಸಂಪರ್ಕವನ್ನು ಪತ್ತೆ ಹಚ್ಚಿ ಅವರನ್ನು ಪರೀಕ್ಷೆಗೆ ಒಳಪಡಿಸಲಾಗಿದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಮಹಾರಾಷ್ಟ್ರ ಲಿಂಕ್
ಸೋಂಕಿತ ವ್ಯಕ್ತಿ ಮಹಾರಾಷ್ಟ್ರದಿಂದ ಶಿವಮೊಗ್ಗಕ್ಕೆ ಹಿಂತಿರುಗಿದ್ದರು. ಇವರಲ್ಲಿ ಕರೋನ ಸೋಂಕು ಕಾಣಿಸಿಕೊಂಡಿದೆ. ಹಾಗಾಗಿ ಇವರ ಮನೆ ಇರುವ ಕುಂಬಾರ ಕೇರಿ ಬೀದಿ ರಸ್ತೆಯನ್ನು ಬಂದ್ ಮಾಡಲಾಗಿದೆ. ಸಂಪೂರ್ಣ ಸ್ಯಾನಿಟೈಸ್ ಮಾಡಲಾಗಿದೆ.
ಮಣಿಪಾಲದಲ್ಲಿ ಚಿಕಿತ್ಸೆ
ಸೋಂಕಿತ ವ್ಯಕ್ತಿಗೆ ಬೇರೆ ಆರೋಗ್ಯ ಸಮಸ್ಯೆಗಳಿವೆ. ಹಾಗಾಗಿ ರೋಗ ನಿರೋಧಕ ಶಕ್ತಿ ಕಡಿಮೆ ಎಂದು ಹೇಳಲಾಗುತ್ತಿದೆ. ಇದೆ ಕಾರಣಕ್ಕೆ ಸೋಂಕು ತಗುಲಿರುವ ಸಾದ್ಯತೆ ಇದೆ. ಸದ್ಯ ಬೇರೆ ಆರೋಗ್ಯ ಸಮಸ್ಯೆಯ ಕಾರಣಕ್ಕೆ ಮಣಿಪಾಲದ ಆಸ್ಪತ್ರೆಯಲ್ಲಿ ವ್ಯಕ್ತಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅಲ್ಲಿ ಅವರನ್ನು ಕ್ವಾರಂಟೈನ್‍ನಲ್ಲಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಹೆಂಡ್ತಿ, ಮಕ್ಕಳು, ಸಹೋದರನಿಗೆ ಕ್ವಾರಂಟೈನ್
ವ್ಯಕ್ತಿಯ ಜೊತೆಗೆ ಪ್ರಾಥಮಿಕ ಸಂಪರ್ಕವಿದ್ದವರನ್ನು ಈಗಾಗಲೇ ಪತ್ತೆ ಹಚ್ಚಿ ಕ್ವಾರಂಟೈನ್ ಮಾಡಲಾಗಿದೆ. ಹೆಂಡತಿ, ಮಕ್ಕಳು ಮತ್ತು ವ್ಯಕ್ತಿಯ ಸಹೋದರನನ್ನು ಪ್ರಾಥಮಿಕ ಸಂಪರ್ಕ ಎಂದು ಗುರುತಿಸಲಾಗಿದೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]