ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 12 ಜೂನ್ 2020
ಶಿವಮೊಗ್ಗದಲ್ಲಿ ಇವತ್ತೂ ಕೆಲವರಿಗೆ ಕರೋನ ಪಾಸಿಟಿವ್ ಕಾಣಿಸಿಕೊಂಡಿದೆ. ಆರು ಮಂದಿಗೆ ಸೋಂಕು ತಗುಲಿದೆ. ಮತ್ತೊಂದೆಡೆ ಇಂದು 12 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಜನರಲ್ಲಿ ತುಸು ನೆಮ್ಮದಿ ಮೂಡಿಸಿದೆ.
ಯಾರಿಗೆಲ್ಲ ಸೋಂಕು ತಗುಲಿದೆ?
ಪಿ6410 – 25 ವರ್ಷದ ಪುರುಷ – ಪಿ2830 ಸಂಪರ್ಕದಿಂದ ಸೋಂಕು ತಗುಲಿದೆ
ಪಿ6411 – 24 ವರ್ಷದ ಮಹಿಳೆ – ಸೋಂಕು ತಗುಲಿದ್ದು ಹೇಗೆ ಅನ್ನುವುದನ್ನು ಪತ್ತೆ ಹಚ್ಚಲಾಗುತ್ತಿದೆ
ಪಿ6412 – 21 ವರ್ಷದ ಪುರುಷ – ಪಿ2830 ಸಂಪರ್ಕದಿಂದ ಸೋಂಕು ತಗುಲಿದೆ
ಪಿ6413 – 21 ವರ್ಷದ ಪುರುಷ – ಪಿ2830 ಸಂಪರ್ಕದಿಂದ ಸೋಂಕು ತಗುಲಿದೆ
ಪಿ6414 – 34 ವರ್ಷದ ಪುರುಷ – ಮಹಾರಾಷ್ಟ್ರದಿಂದ ಹಿಂತಿರುಗಿದ್ದರು
ಪಿ6415 – 38 ವರ್ಷದ ಪುರುಷ – ಮಹಾರಾಷ್ಟ್ರದಿಂದ ಹಿಂತಿರುಗಿದ್ದರು
ಹನ್ನೆರಡು ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್
ಶಿವಮೊಗ್ಗದಲ್ಲಿ ಇವತ್ತು ಆರು ಮಂದಿಗೆ ಸೋಂಕು ತಗುಲಿದ್ದರೆ, ಹನ್ನೆರಡು ಮಂದಿ ಚಿಕಿತ್ಸೆ ಪಡೆದು ಗುಣವಾಗಿದ್ದಾರೆ. ಅವರನ್ನೆಲ್ಲ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ. ಹೋಂ ಕ್ವಾರಂಟೈನ್‍ಗೆ ಒಳಪಡಿಸಲಾಗಿದೆ.
ಒಟ್ಟು ಸೋಂಕಿತರೆಷ್ಟು? ಗುಣವಾದವರೆಷ್ಟು?
ಶಿವಮೊಗ್ಗ ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ ಈಗ 89ಕ್ಕೆ ಏರಿಕೆಯಾಗಿದೆ. ಈ ಪೈಕಿ ಇವತ್ತು 12 ಮಂದಿ ಡಿಸ್ಚಾರ್ಜ್ ಆಗಿದ್ದು, ಒಟ್ಟು 43 ಮಂದಿ ಗುಣವಾಗಿ ಆಸ್ಪತ್ರೆಯಿಂದ ಬಿಡುಗಡೆಯಾದಂತೆ ಆಗಿದೆ. ಇನ್ನು 46 ಮಂದಿಗೆ ಚಿಕಿತ್ಸೆ ಮುಂದುವರೆದಿದೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
LATEST NEWS
- ಸರ್ವೆಗೆ ಹೋದಾಗ ಇಂಜಿನಿಯರ್, ಸರ್ವೇಯರ್ ಮೇಲೆ ಕೋಲು, ಕಲ್ಲುಗಳಿಂದ ದಾಳಿ

- ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

- ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

- ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್ ವಿಚಾರ

- ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್ ಅಪ್‌ಡೇಟ್

About The Editor
ನಿತಿನ್ ಆರ್.ಕೈದೊಟ್ಲು
















