ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 13 ಜೂನ್ 2020
ರಾಜ್ಯ ಸರ್ಕಾರ ಭೂ ಸುಧಾರಣಾ ಕಾಯ್ದೆಗೆ ತಿದ್ದುಪಡಿ ತಂದಿರುವುದು ಖಂಡನೀಯ. ಬಂಡವಾಳಶಾಹಿಗಳಿಗೆ ಹಾಗೂ ಉಳ್ಳವರಿಗೆ ಭೂಮಿ ಖರೀದಿ ಮಾಡಲು ಅವಕಾಶ ಮಾಡಿಕೊಡುವ ಕಾಯ್ದೆಯನ್ನು ರಾಜ್ಯ ಸರ್ಕಾರ ಕೂಡಲೇ ಹಿಂಪಡೆಯಬೇಕು. ಇಲ್ಲವಾದಲ್ಲಿ ಉಗ್ರ ಹೋರಾಟ ನಡೆಸಬೇಕಾಗುತ್ತದೆ ಎಂದು ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಹೆಚ್.ಎಸ್. ಸುಂದರೇಶ್ ಎಚ್ಚರಿಸಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸುಂದರೇಶ್, ಭೂ ಸುಧಾರಣಾ ಕಾಯ್ದೆಗೆ ತಿದ್ದುಪಡಿ ತರುವುದರ ಮೂಲಕ ರಾಜ್ಯ ಸರ್ಕಾರ ಬಂಡವಾಳಶಾಹಿಗಳಿಗೆ ಅನುಕೂಲ ಮಾಡಿಕೊಡಲು ಹೊರಟಿದೆ. ಇದರಿಂದಾಗಿ ರೈತರು ತಮ್ಮ ಭೂಮಿಯನ್ನು ಮಾರಾಟ ಮಾಡಿಕೊಂಡು ಕೂಲಿ ಕೆಲಸಕ್ಕೆ ಹೋಗಬೇಕಾದ ಪರಿಸ್ಥಿತಿ ಎದುರಾಗುತ್ತದೆ ಎಂದು ಆತಂಕ ವ್ಯಕ್ತಪಡಿಸಿದರು.
ಈ ಹಿಂದೆ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಜಾರಿಗೆ ತರಲಾಗಿದ್ದ ಜನಪರ ಕಾಯ್ದೆಗಳಿಗೆ ಬಿಜೆಪಿ ಸರ್ಕಾರ ವ್ಯತಿರಿಕ್ತವಾದ ಕಾಯ್ದೆಗಳನ್ನು ಜಾರಿಗೊಳಿಸುತ್ತಿದೆ. ಬಿಜೆಪಿ ಈ ಹಿಂದೆ ಬಂಡವಾಳಶಾಹಿಗಳಿಂದ ಹಾಗೂ ದೊಡ್ಡ ದೊಡ್ಡ ಉದ್ದಿಮೆದಾರರಿಂದ ಹಣ ಪಡೆದಿದ್ದು ಆ ಹಣದಿಂದಲೇ ಶಾಸಕರನ್ನು ಖರೀದಿಸಿ ಸರ್ಕಾರ ರಚನೆ ಮಾಡಿಕೊಂಡಿದೆ. ಇದೀಗ ಅವರ ಋಣ ತೀರಿಸುವ ಸಲುವಾಗಿ ಭೂ ಸುಧಾರಣಾ ಕಾಯ್ದೆಗೆ ತಿದ್ದುಪಡಿ ತಂದಿದೆ. ಇದರಿಂದ ರೈತರು ಸಂಪೂರ್ಣ ಸರ್ವನಾಶ ಆಗಲಿದ್ದಾರೆ ಎಂದು ಆತಂಕ ವ್ಯಕ್ತಪಡಿಸಿದರು.
ಎಪಿಎಂಸಿ ಕಾಯ್ದೆ, ಕಾರ್ಮಿಕ ಕಾಯ್ದೆಗೂ ತಿದ್ದುಪಡಿ
ಈಗಾಗಲೇ ಎಪಿಎಂಸಿ ಕಾಯ್ದೆ, ಕಾರ್ಮಿಕ ಕಾಯ್ದೆಗಳಿಗೆ ತಿದ್ದುಪಡಿ ತರುವುದರ ಮೂಲಕ ಸರ್ಕಾರದ ಜನವಿರೋಧಿ ನೀತಿಯನ್ನು ಅನುಸರಿಸಿಕೊಂಡೇ ಬಂದಿದೆ. ಕಾಯ್ದೆ ತಿದ್ದುಪಡಿ ಮಾಡಿರುವುದಕ್ಕೆ ನ್ಯಾಯಾಲಯ ಛೀಮಾರಿ ಹಾಕಿದ್ದರೂ ಮತ್ತೆ ಇದೀಗ ಭೂಸುಧಾರಣಾ ಕಾಯ್ದೆಗೆ ತಿದ್ದುಪಡಿ ತಂದಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕರೋನ ಇಲ್ಲದಾಗ ಲಾಕ್ ಡೌನ್
ಕೊರೋನ ಸಂಕಷ್ಟದ ಹಿನ್ನೆಲೆಯಲ್ಲಿ ಲಾಕ್‍ಡೌನ್ ಜಾರಿ ಮಾಡಿದ್ದರಿಂದ ಶಾಲಾ-ಕಾಲೇಜುಗಳು ಇದುವರೆಗೂ ಆರಂಭಗೊಂಡಿಲ್ಲ. ಆದರೆ ಕೆಲವು ಖಾಸಗಿ ಶಿಕ್ಷಣ ಸಂಸ್ಥೆಗಳು ಪೋಷಕರಿಂದ ಹಣ ವಸೂಲಿಗೆ ಇಳಿದಿದೆ. ಇದಕ್ಕೆ ಸರ್ಕಾರ ಕಡಿವಾಣ ಹಾಕಬೇಕು ಎಂದು ಒತ್ತಾಯಿಸಿದರು. ಕೇಂದ್ರ ಸರ್ಕಾರ ಕೂಡ ಜನವಿರೋಧಿಯಾಗಿ ನಡೆದುಕೊಳ್ಳುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕರೋನ ಸೋಂಕು ಕಡಿಮೆ ಇದ್ದ ಅವಧಿಯಲ್ಲಿ ಲಾಕ್ ಡೌನ್ ಜಾರಿ ಮಾಡಿತ್ತು. ಆದರೆ ಕೊರೋನಾ ಸೋಂಕು ಹೆಚ್ಚಾಗುತ್ತಿರುವ ಕಾಲದಲ್ಲಿ ಸಡಿಲಿಕೆ ಮಾಡುವುದರ ಮೂಲಕ ಸೋಂಕು ಇನ್ನಷ್ಟು ಹೆಚ್ಚಾಗಲು ದಾರಿ ಮಾಡಿಕೊಟ್ಟಿದೆ. ಕೇಂದ್ರ ಸರ್ಕಾರದ ತಪ್ಪು ನಿರ್ಧಾರದಿಂದ ಸೋಂಕು ವ್ಯಾಪಕವಾಗಿ ಹರಡುತ್ತಿದೆ ಎಂದು ಆರೋಪಿಸಿದರು.
ಮಾಜಿ ಶಾಸಕ ಕೆ.ಬಿ. ಪ್ರಸನ್ನ ಕುಮಾರ್ , ಪಾಲಿಕೆ ಸದಸ್ಯರಾದ ರಮೇಶ್ ಹೆಗ್ಡೆ, ಆರ್.ಸಿ. ನಾಯ್ಕ, ಯಮುನಾ ರಂಗೇಗೌಡ, ಮೆಹಕ್ ಶರೀಫ್, ಕಾಂಗ್ರೆಸ್ ಮುಖಂಡ ವಿಶ್ವನಾಥ್ ಕಾಶಿ ಮತ್ತಿತರರು ಉಪಸ್ಥಿತರಿದ್ದರು
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
LATEST NEWS
- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

- ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

About The Editor
ನಿತಿನ್ ಆರ್.ಕೈದೊಟ್ಲು






