ಶಿವಮೊಗ್ಗ ಜಿಲ್ಲೆಯಲ್ಲಿ ಪಿಯುಸಿ ಇಂಗ್ಲೀಷ್ ಪರೀಕ್ಷೆ ಶುರು, ವಿದ್ಯಾರ್ಥಿಗಳಿಗೆ ಥರ್ಮಲ್ ಸ್ಕ್ಯಾನ್, ಸ್ಯಾನಿಟೈಸರ್, ಮಾಸ್ಕ್

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 18 ಜೂನ್ 2020

ಕರೋನ ಲಾಕ್‍ ಡೌನ್‍ನಿಂದಾಗಿ ಮುಂದೂಡಲ್ಪಟ್ಟಿದ್ದ ದ್ವಿತೀಯ ಪಿಯುಸಿ ಇಂಗ್ಲೀಷ್ ಪರೀಕ್ಷೆ ಇವತ್ತು ನಡೆಸಲಾಗುತ್ತಿದೆ. ರಾಜ್ಯ ಸರ್ಕಾರದ ಸೂಚನೆಯಂತೆ ಪರೀಕ್ಷೆ ನಡೆಸಲಾಗುತ್ತಿದೆ.

ಸಾಮಾಜಿಕ ಅಂತರ, ಕಡ್ಡಾಯ ಮಾಸ್ಕ್

ಪರೀಕ್ಷಾ ಕೇಂದ್ರಕ್ಕೆ ಬರುವ ವಿದ್ಯಾರ್ಥಿಗಳಿಗೆ ಸಾಮಾಜಿಕ ಅಂತರ ಕಡ್ಡಾಯಗೊಳಿಸಲಾಗಿದೆ. ಕೇಂದ್ರದಲ್ಲಿ ಸಾಮಾಜಿಕ ಅಂತರದ ಬಾಕ್ಸ್‍ಗಳನ್ನು ಹಾಕಲಾಗಿದೆ. ಬಾಕ್ಸ್‍ನಲ್ಲಿ ನಿಂತುಕೊಂಡೇ ಒಳಗೆ ಪ್ರವೇಶ ಮಾಡಬೇಕು. ಅಲ್ಲದೆ ಪರೀಕ್ಷಾ ಕೇಂದ್ರದ ಒಳಗೆ ಬರುವ ಪ್ರತಿ ವಿದ್ಯಾರ್ಥಿಯು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು.

https://www.facebook.com/liveshivamogga/videos/259402442056841/?t=0

ಥರ್ಮಲ್ ಸ್ಕ್ಯಾನ್, ಸ್ಯಾನಿಟೈಸರ್

ಪರೀಕ್ಷಾ ಕೇಂದ್ರದ ಒಳಗೆ ಪ್ರವೇಶ ಪಡೆಯುವ ಪ್ರತಿ ವಿದ್ಯಾರ್ಥಿಯನ್ನು ಥರ್ಮಲ್ ಸ್ಕ್ಯಾನ್ ಮಾಡಲಾಗುತ್ತಿದೆ. ಇದಕ್ಕಾಗಿ ಜಿಲ್ಲೆಯ ಎಲ್ಲಾ ಪರೀಕ್ಷಾ ಕೇಂದ್ರದಲ್ಲಿ ಆರೋಗ್ಯ ಇಲಾಖೆ ಮತ್ತು ಆಶಾ ಕಾರ್ಯಕರ್ತೆಯರನ್ನು ನಿಯೋಜಿಸಲಾಗುತ್ತಿದೆ. ಇನ್ನು, ಎಲ್ಲಾ ವಿದ್ಯಾರ್ಥಿಗಳಿಗೂ ಸ್ಯಾನಿಟೈಸರ್ ಒದಗಿಸಲಾಗುತ್ತಿದೆ.

ಪರೀಕ್ಷಾ ಕೇಂದ್ರದ ಸುತ್ತಲು ನಿಷೇಧಾಜ್ಞೆ

ಪರೀಕ್ಷಾ ಕೇಂದ್ರದ ಸುತ್ತಲು ಜನರು ಹೆಚ್ಚಿನ ಸಂಖ್ಯೆಯಲ್ಲಿ ಜಮಾವಣೆ ಆಗುವುದನ್ನು ತಪ್ಪಿಸಲು 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಘೋಷಿಸಲಾಗಿದೆ. ಕೆಲವು ಪರೀಕ್ಷಾ ಕೇಂದ್ರದ ಬಳಿ ಬ್ಯಾರಿಕೇಡ್‍ಗಳನ್ನು ಹಾಕಲಾಗಿದೆ. ಇನ್ನು, ಪರೀಕ್ಷಾ ಕೊಠಡಿಯೊಳಗೆ ಯಾರಂದರೆ ಅವರಿಗೆ ಪ್ರವೇಶ ಇಲ್ಲ. ಉಪನ್ಯಾಸಕರು ಕಡ್ಡಾಯವಾಗಿ ಮಾಸ್ಕ್, ಹ್ಯಾಂಡ್ ಗ್ಲೌಸ್ ಹಾಕಿಯೇ ಕಾರ್ಯನಿರ್ವಹಿಸಬೇಕಿದೆ.

104163732 1146316959063056 6112870954935851437 o.jpg? nc cat=106& nc sid=110474& nc ohc=jBJ00FT2gxQAX8JFu2V& nc ht=scontent.fblr11 1

KSRTC ಬಸ್ಸುಗಳಲ್ಲಿ ವಿದ್ಯಾರ್ಥಿಗಳು

ಶಿವಮೊಗ್ಗ ಜಿಲ್ಲೆಯಲ್ಲಿ 18,799 ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ. ಎಲ್ಲ ವಿದ್ಯಾರ್ಥಿಗಳನ್ನು ಪರೀಕ್ಷಾ ಕೇಂದ್ರಕ್ಕೆ ತಲುಪಿಸಲು 129 ರೂಟ್‍ಗಳಲ್ಲಿ 133 ಬಸ್‍ಗಳ ವ್ಯವಸ್ಥೆ ಮಾಡಲಾಗಿದೆ. ಬಸ್ಸಿನಲ್ಲಿ ವಿದ್ಯಾರ್ಥಿಗಳನ್ನು ಸಾಮಾಜಿಕ ಅಂತರದಲ್ಲಿ ಸೀಟಿಂಗ್ ವ್ಯವಸ್ಥೆ ಮಾಡಲಾಗಿದೆ.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : June 18, 2020

ಇವತ್ತು ಸರಕು ಅಡಿಕೆ ಎಷ್ಟಿದೆ? ರಾಶಿ, ಗೊರಬಲು ಧಾರಣೆ ಹೇಗಿದೆ? – 23 ಮಾರ್ಚ್‌ 2026

ಇವತ್ತು ಸರಕು ಅಡಿಕೆ ಎಷ್ಟಿದೆ? ರಾಶಿ, ಗೊರಬಲು ಧಾರಣೆ ಹೇಗಿದೆ? – 23 ಮಾರ್ಚ್‌ 2026

ಗಾಂಧಿ ಬಜಾರ್‌ ಉದ್ಯಮಿಗೆ ಬೆದರಿಕೆ ಕರೆ, ₹5,00,000 ಹಣಕ್ಕೆ ಡಿಮಾಂಡ್‌, ಏನಿದು ಕೇಸ್‌?

ಗಾಂಧಿ ಬಜಾರ್‌ ಉದ್ಯಮಿಗೆ ಬೆದರಿಕೆ ಕರೆ, ₹5,00,000 ಹಣಕ್ಕೆ ಡಿಮಾಂಡ್‌, ಏನಿದು ಕೇಸ್‌?

ಸೋಮಿನಕೊಪ್ಪದಲ್ಲಿ ಕಣ್ಮನ ಸೆಳೆದ ಜಾನಪದ ಸಮ್ಮೇಳನ, ಹೇಗಿತ್ತು? ಯಾರೆಲ್ಲ ಭಾಗವಹಿಸಿದ್ದರು?

ಸೋಮಿನಕೊಪ್ಪದಲ್ಲಿ ಕಣ್ಮನ ಸೆಳೆದ ಜಾನಪದ ಸಮ್ಮೇಳನ, ಹೇಗಿತ್ತು? ಯಾರೆಲ್ಲ ಭಾಗವಹಿಸಿದ್ದರು?

ಅಧಿಕಾರಿಗಳು, ಪೊಲೀಸರ ಜಂಟಿ ಕಾರ್ಯಾಚರಣೆ, ಶಿವಮೊಗ್ಗದ ಮಂಡ್ಲಿಯಲ್ಲಿ ದಾಳಿ, ದಾಖಲಾಯ್ತು ಕೇಸ್‌

ಅಧಿಕಾರಿಗಳು, ಪೊಲೀಸರ ಜಂಟಿ ಕಾರ್ಯಾಚರಣೆ, ಶಿವಮೊಗ್ಗದ ಮಂಡ್ಲಿಯಲ್ಲಿ ದಾಳಿ, ದಾಖಲಾಯ್ತು ಕೇಸ್‌

ಶಿವಮೊಗ್ಗ ಸಿಟಿಯಲ್ಲಿ ಶೆಟ್ಟರ ಸಂತೆ, ಶ್ರೀನಿವಾಸ ಕಲ್ಯಾಣೋತ್ಸವ, ಯಾವಾಗ? ಎಲ್ಲಿ ನಡೆಯಲಿದೆ?

ಶಿವಮೊಗ್ಗ ಸಿಟಿಯಲ್ಲಿ ಶೆಟ್ಟರ ಸಂತೆ, ಶ್ರೀನಿವಾಸ ಕಲ್ಯಾಣೋತ್ಸವ, ಯಾವಾಗ? ಎಲ್ಲಿ ನಡೆಯಲಿದೆ?

ರಾತ್ರಿ 11:45ಕ್ಕೆ ಅಮೀರ್‌ ಅಹಮದ್‌ ಸರ್ಕಲ್‌ಗೆ ಬಂದ ವ್ಯಕ್ತಿಗೆ ಕಾದಿತ್ತು ಆಘಾತ, ಆಗಿದ್ದೇನು?

ರಾತ್ರಿ 11:45ಕ್ಕೆ ಅಮೀರ್‌ ಅಹಮದ್‌ ಸರ್ಕಲ್‌ಗೆ ಬಂದ ವ್ಯಕ್ತಿಗೆ ಕಾದಿತ್ತು ಆಘಾತ, ಆಗಿದ್ದೇನು?

ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್‌ | 20 ಮಾರ್ಚ್‌ 2026 | ಅಡಿಕೆ ಧಾರಣೆ

ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್‌ | 20 ಮಾರ್ಚ್‌ 2026 | ಅಡಿಕೆ ಧಾರಣೆ

ಕಾರು, ಬೈಕ್‌ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

ಕಾರು, ಬೈಕ್‌ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

Leave a Comment