ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 18 ಜೂನ್ 2020
ಶಿವಮೊಗ್ಗ ನಗರದ ಮತ್ತೊಂದು ರಸ್ತೆಯನ್ನು ಮಹಾನಗರ ಪಾಲಿಕೆ ಸೀಲ್ ಡೌನ್ ಮಾಡಿದೆ. ವಾರ್ಡ್ ನಂಬರ್ 30ರ ತುಮಕೂರು ಶ್ಯಾಮರಾವ್ ರಸ್ತೆಯಲ್ಲಿ (ಟಿಎಸ್‍ಆರ್ ರಸ್ತೆ) ನೂರು ಮೀಟಿರ್ ಸೀಲ್ ಡೌನ್ ಮಾಡಲಾಗಿದೆ.
ಸೀಲ್ ಡೌನ್‍ಗೆ ಕಾರಣ ಏನು?
ಕುಂಬಾರ ಬೀದಿಯ ಸೋಂಕಿತ ವ್ಯಕ್ತಿಯೊಂದಿಗೆ ಪ್ರಾಥಮಿಕ ಸಂಪರ್ಕದಲ್ಲಿದ್ದ ಇಬ್ಬರಿಗೆ ಸೋಂಕು ತಗುಲಿದೆ. ಮುಂಜಾಗ್ರತಾ ಕ್ರಮವಾಗಿ, ಅವರ ಮನೆಯ ಸುತ್ತಮುತ್ತ ನೂರು ಮೀಟಿರ್ ವ್ಯಾಪ್ತಿಯಲ್ಲಿ ಸೀಲ್ ಡೌನ್ ಮಾಡಲಾಗಿದೆ.
ಯಾರಿಗೆ ಸೋಂಕು ತಗುಲಿದೆ?
ಕುಂಬಾರ ಬೀದಿಯ ಪಿ6149 ಪ್ರಾಥಮಿಕ ಸಂಪರ್ಕದಲ್ಲಿದ್ದ ಪಿ7571 ಮತ್ತು ಪಿ7572ಗೆ ಕರೋನ ಸೋಂಕು ಕಾಣಿಸಿಕೊಂಡಿದೆ. ಇದಕ್ಕೂ ಮೊದಲು ಪಿ6149 ಪ್ರಾಥಮಿಕ ಸಂಪರ್ಕದಲ್ಲಿದ್ದ ಮತ್ತಿಬ್ಬರಲ್ಲಿ ಸೋಂಕು ಪತ್ತೆಯಾಗಿತ್ತು.
ಬೀಡು ಬಿಟ್ಟ ಅಧಿಕಾರಿಗಳು
ಟಿಎಸ್‍ಆರ್ ರಸ್ತೆಯ ನೂರು ಮೀಟರ್ ಸೀಲ್ ಡೌನ್ ಮಾಡಿರುವ ಅಧಿಕಾರಿಗಳು, ಸ್ಥಳದಲ್ಲೇ ಬೀಡು ಬಿಟ್ಟಿದ್ದಾರೆ. ಪೊಲೀಸರನ್ನು ನಿಯೋಜಿಸಲಾಗಿದೆ. ಆರೋಗ್ಯ ಇಲಾಖೆ, ಮಹಾನಗರ ಪಾಲಿಕೆ ಅಧಿಕಾರಿಗಳು, ತಹಶೀಲ್ದಾರ್ ಅವರು ಆಗಾಗ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
LATEST NEWS
- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

- ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

About The Editor
ನಿತಿನ್ ಆರ್.ಕೈದೊಟ್ಲು





