ಶಿವಮೊಗ್ಗದಲ್ಲಿ ಮತ್ತೊಬ್ಬರಿಗೆ ಕರೋನ, ಸೋಂಕು ತಗುಲಿದ್ದು ಯಾರಿಗೆ? ಎಲ್ಲಿಯವರು?

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

ಶಿವಮೊಗ್ಗ ಲೈವ್.ಕಾಂ | SHIMOGA NEWS | 19 ಜೂನ್ 2020

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಜಿಲ್ಲೆಯ ಮತ್ತೊಬ್ಬರಲ್ಲಿ ಕರೋನ ಸೋಂಕು ಕಂಡು ಬಂದಿದೆ. ಮಾಚೇನಹಳ್ಳಿಯ ಕೆಎಸ್‍ಆರ್‍ಪಿಯ ಪೊಲೀಸ ಸಿಬ್ಬಂದಿಯೊಬ್ಬರಲ್ಲಿ ಸೋಂಕು ಕಾಣಿಸಿಕೊಂಡಿದೆ.

ಸೋಂಕು ತಗುಲಿದ್ದು ಹೇಗೆ?

23 ವರ್ಷದ ಪಿ7802ಗೆ ಕರೋನ ಕಾಣಿಸಿಕೊಂಡಿದೆ. ಇವರಿಗೆ ಪಿ2830 ಕಡೆಯಿಂದ ಸೋಂಕು ತಗುಲಿದೆ ಎಂದು ರಾಜ್ಯ ಸರ್ಕಾರದ ಹೆಲ್ತ್ ಬುಲೆಟಿನ್‍ನಲ್ಲಿ ಪ್ರಕಟಿಸಲಾಗಿದೆ.

ಕ್ವಾರಂಟೈನ್‍ನಲ್ಲಿದ್ದ ಕಾನ್ಸ್‍ಟೇಬಲ್

ಬೆಂಗಳೂರನಲ್ಲಿ ಬಂದೋಬಸ್ತ್ ಡ್ಯೂಟಿಗೆ ಹೋಗಿದ್ದ ಕೆಎಸ್‍ಆರ್‍ಪಿ ಪೊಲೀಸರಲ್ಲಿ ಸೋಂಕು ಕಾಣಿಸಿಕೊಂಡಿತ್ತು. ಹಾಗಾಗಿ ಹಲವರಿಗೆ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಮಾಡಲಾಗಿತ್ತು. ಪ್ರಾಥಮಿಕ ಸಂಪರ್ಕದಲ್ಲಿದ್ದವರನ್ನು ಕ್ವಾರಂಟೈನ್‍ನಲ್ಲಿ ಇರಿಸಲಾಗಿತ್ತು. ಪಿ7802 ಕೂಡ ಕ್ವಾರಂಟೈನ್‍ನಲ್ಲಿ ಇದ್ದರು. ಪರೀಕ್ಷೆ ವೇಳೆ ಇವರಿಗೆ ಸೋಂಕು ತಗುಲಿರುವುದು ದೃಢವಾಗಿದೆ.

106ಕ್ಕೆ ಏರಿದ ಸೋಂಕಿತರ ಸಂಖ್ಯೆ

ಶಿವಮೊಗ್ಗ ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ ಈಗ 106ಕ್ಕೆ ಏರಿಕೆಯಾಗಿದೆ. ಈ ಪೈಕಿ 69 ಮಂದಿ ಗುಣಮುಖವಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 36 ಮಂದಿಗೆ ಇನ್ನೂ ಚಿಕಿತ್ಸೆ ನಡೆಯುತ್ತಿದೆ. ಒಬ್ಬ ಮಹಿಳೆ ಸೋಂಕಿನಿಂದ ಮೃತರಾಗಿದ್ದಾರೆ.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment