ತರಾತುರಿಯಲ್ಲಿ ತಿದ್ದುಪಡಿ ಏಕೆ, ಸರ್ಕಾರದ ವಿರುದ್ಧ ಅನ್ನದಾತರ ಆಕ್ರೋಶ, ಶಿವಮೊಗ್ಗದಲ್ಲಿ ರಸ್ತೆ ತಡೆ

Published On : ಜೂನ್ 20, 2020

Published By : ನಿತಿನ್‌ ಆರ್‌.ಕೈದೊಟ್ಲು 

ಶಿವಮೊಗ್ಗ ಲೈವ್.ಕಾಂ | SHIMOGA NEWS | 20 ಜೂನ್ 2020

https://www.facebook.com/liveshivamogga/videos/1120811768306137/?t=1

ಭೂ ಸುಧಾರಣೆ ಕಾಯ್ದೆಗೆ ತಿದ್ದುಪಡಿ ತರಲು ಮುಂದಾಗಿರುವ ರಾಜ್ಯ ಸರ್ಕಾರದ ಕ್ರಮ ಖಂಡಿಸಿ ಶಿವಮೊಗ್ಗದಲ್ಲಿ ಇವತ್ತು ರೈತರು ರಸ್ತೆ ತಡೆ ನಡೆಸಿದರು. ರಾಜ್ಯ ಸರ್ಕಾರ ಮತ್ತು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ನೇತೃತ್ವದಲ್ಲಿ ರಸ್ತೆ ತಡೆ ನಡೆಸಲಾಯಿತು. ಭೂ ಸುಧಾರಣೆ ಕಾಯ್ದೆಗೆ ತಿದ್ದುಪಡಿ ತರುವ ಮೂಲಕ, ರಾಜ್ಯ ಸರ್ಕಾರ ರೈತರಲ್ಲಿ ಆತಂಕ ಮೂಡಿಸುತ್ತಿದೆ. ಬಂಡವಾಳಶಾಹಿಗಳ ಕೈಗೆ ರೈತರ ಜಮೀನು ಹೋಗುವಂತೆ ಮಾಡಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

104482535 892687271211184 4465237221016306746 o.jpg? nc cat=101& nc sid=110474& nc ohc=YSw3P6UA8IoAX9t2IOt& nc ht=scontent.fblr11 1

ತರಾತರಿಯಲ್ಲಿ ಕಾಯ್ದೆಗೆ ತಿದ್ದುಪಡಿ ತರಲಾಗಿದೆ. ಇಷ್ಟು ಅವಸರವೇಕೆ ಎಂದು ಪ್ರಶ್ನಿಸಿದರು. ಅಲ್ಲದೆ ಕೂಡಲೆ ತಿದ್ದುಪಡಿಯನ್ನು ಹಿಂಪಡೆಯಬೇಕು ಎಂದು ಒತ್ತಾಯಿಸಿದರು.

ಪ್ರಮುಖರಾದ ಕೆ.ಟಿ.ಗಂಗಾಧರ್ ಅವರ ನೇತೃತ್ವದಲ್ಲಿ ರಸ್ತೆ ತಡೆ ನಡೆಸಲಾಯಿತು. ಜಿಲ್ಲೆಯ ವಿವಿಧೆಡೆ ರೈತ ಮುಖಂಡರು ಪ್ರತಿಭಟನೆಯಲ್ಲಿ ಭಾಗವಹಿಸಿದರು.  

104171942 892019767944601 6440612529489965117 o.jpg? nc cat=110& nc sid=110474& nc ohc=X5toOr79KEMAX9tBliO& nc ht=scontent.fblr1 4

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : ಜೂನ್ 20, 2020

Leave a Comment