ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA NEWS | 20 ಜೂನ್ 2020
ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಜನವಿರೋಧಿ ನೀತಿ ಖಂಡಿಸಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಇವತ್ತು ಬೃಹತ್ ಪ್ರತಿಭಟನೆ ಆಯೋಜಿಸಲಾಗಿತ್ತು. ಜಿಲ್ಲಾ ಕಾಂಗ್ರೆಸ್ ಕಚೇರಿಯಿಂದ ಜಿಲ್ಲಾಧಿಕಾರಿ ಕಚೇರಿವರೆಗೂ ಪ್ರತಿಭಟನಾ ಮೆರವಣಿಗೆ ನಡೆಯಿತು.
ಏನೆಲ್ಲ ಬೇಡಿಕೆ ಇತ್ತು?
ಭೂ ಸುಧಾರಣಾ ಕಾಯ್ದೆಗೆ ತಿದ್ದುಪಡಿ ತಂದಿರುವುದು, ಪೆಟ್ರೋಲ್ ಡೀಸೆಲ್ ದರ ನಿರಂತರ ಏರಿಕೆ, ಕಾರ್ಮಿಕ ವಿರೋಧ ನೀತಿಗಳು ಸೇರಿದಂತೆ ಹಲವು ವಿಚಾರದಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜನವಿರೋಧಿಯಾಗಿ ನಡೆದುಕೊಳ್ಳುತ್ತಿವೆ. ಇದನ್ನು ಖಂಡಿಸಿ ಬೃಹತ ಪ್ರತಿಭಟನೆ ಆಯೋಜಿಸಲಾಗಿತ್ತು.
ಪ್ರತಿಭಟನಾ ಸಭೆಯಲ್ಲಿ ಯಾರೆಲ್ಲ ಏನೆಂದರು?
ಜನ ವಿರೋಧಿಯಾಗಿರುವ ಈ ಸರ್ಕಾರ ಯಾವುದೆ ಕಾರಣಕ್ಕೂ ಆಡಳಿತದಲ್ಲಿ ಇರಬಾರದು. ಇದನ್ನು ಕಿತ್ತೊಗೆಯಬೇಕು ಎಂದು ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಆಗ್ರಹಿಸಿದರು. ಇನ್ನು, ಜಿಲ್ಲಾಧ್ಯಕ್ಷ ಹೆಚ್.ಎಸ್.ಸುಂದರೇಶ್ ಮಾತನಾಡಿ, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸಂಪೂರ್ಣ ಜನ ವಿರೋಧಿಯಾಗಿವೆ ಎಂದು ಆರೋಪಿಸಿದರು.
ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು. ವಿಧಾನ ಪರಿಷತ್ ಸದಸ್ಯ ಪ್ರಸನ್ನಕುಮಾರ್, ಮಾಜಿ ಶಾಸಕರಾದ ಹೆಚ್.ಎಂ.ಚಂದ್ರಶೇಖರಪ್ಪ, ಬೇಳೂರು ಗೋಪಾಲಕೃಷ್ಣ, ಪ್ರಸನ್ನಕುಮಾರ್ ಸೇರಿದಂತೆ ಹಲವರು ಪ್ರತಿಭಟನೆಯಲ್ಲಿದ್ದರು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422