ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA NEWS | 22 ಜೂನ್ 2020
ಟ್ರಾವಲ್ ಹಿಸ್ಟರಿ ಇಲ್ಲದೆ ಇದ್ದರೂ ಶಿವಮೊಗ್ಗ ನಗರದ ವ್ಯಕ್ತಿಯೊಬ್ಬರಲ್ಲಿ ಕರೋನ ಸೋಂಕು ಕಾಣಿಸಿಕೊಂಡಿದೆ. ಇದರಿಂದ ನಗರದ ಮತ್ತೊಂದು ಬಡಾವಣೆಯಲ್ಲಿ ಸೀಲ್ ಡೌನ್ ಮಾಡಲಾಗಿದೆ.
ಯಾರಲ್ಲಿ ಸೋಂಕು ಕಾಣಿಸಿಕೊಂಡಿದೆ?
ಶಿವಮೊಗ್ಗದ ಷೋ ರೂಂ ಒಂದರಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಯೊಬ್ಬರಿಗೆ ಕರೋನ ಸೋಂಕು ಕಾಣಿಸಿಕೊಂಡಿದೆ. ಇವರಿಗೆ ಯಾವುದೇ ಟ್ರಾವಲ್ ಹಿಸ್ಟರಿ ಇಲ್ಲ. ಶೀತ, ಕೆಮ್ಮು ಎಂಬ ಕಾರಣಕ್ಕೆ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. ಈ ವೇಳೆ ಸ್ವ್ಯಾಬ್ ಟೆಸ್ಟ್ ಮಾಡಲಾಗಿತ್ತು.
ಪರಾರಿಯಾಗಿದ್ದಾನೆ ಎಂದು ಗಾಳಿ ಸುದ್ದಿ
ಸ್ವ್ಯಾಬ್ ಟೆಸ್ಟ್ ಮಾಡಿಸಿ ಹಿಂತಿರುಗಿದ್ದ 35 ವರ್ಷದ ವ್ಯಕ್ತಿಯ ಮೊಬೈಲ್ ಸ್ವಿಚ್ಡ್ ಆಫ್ ಆಗಿತ್ತು. ಹಾಗಾಗಿ ಈತ ನಾಪತ್ತೆಯಾಗಿದ್ದಾನೆ ಎಂದು ಸುದ್ದಿ ವಾಹಿನಿಗಳಲ್ಲಿ ಪ್ರಕಟವಾಗಿತ್ತು. ಇದರಿಂದ ಮತ್ತಷ್ಟು ಆತಂಕ ಮೂಡಿತ್ತು. ಆದರೆ ಈ ಕುರಿತು ಸ್ಪಷ್ಟನೆ ನೀಡಿರುವ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್, ಆತ ಎಲ್ಲೂ ನಾಪತ್ತೆಯಾಗಿಲ್ಲ. ಮನೆಯಲ್ಲಿಯೇ ಇದ್ದರು. ಅವರನ್ನು ಆಸ್ಪತ್ರೆಗೆ ಕರೆತಂದು ದಾಖಲಿಸಲಾಗಿದೆ ಎಂದಿದ್ದಾರೆ.
ಬಡಾವಣೆಯೇ ಸೀಲ್ ಡೌನ್
ಸೋಂಕಿತ ವ್ಯಕ್ತಿಯ ಮನೆ ಇರುವ ಸ್ವಾಮಿ ವಿವೇಕಾನಂದ ಬಡಾವಣೆಯಲ್ಲಿ ಸೀಲ್ ಡೌನ್ ಮಾಡಲಾಗಿದೆ. ಬಡಾವಣೆಯ ಎ ಬ್ಲಾಕ್ನ 6ನೇ ತಿರುವಿನಲ್ಲಿ ಸೋಂಕಿತನ ಮನೆ ಇರುವ ನೂರು ಮೀಟರ್ ವ್ಯಾಪ್ತಿಯನ್ನು ಕಂಟೈನ್ಮೆಂಟ್ ಜೋನ್ ಎಂದು ಪರಿವರ್ತಿಸಲಾಗಿದೆ. ಸೋಂಕಿತನ ಪ್ರಾಥಮಿಕ ಸಂಪರ್ಕದಲ್ಲಿ ಇರುವವರನ್ನು ಪತ್ತೆ ಹಚ್ಚಲಾಗುತ್ತಿದೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422