ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 23 ಜೂನ್ 2020
ಶಿವಮೊಗ್ಗದಲ್ಲಿ ಇವತ್ತು ಮತ್ತೆ ಐವರಿಗೆ ಕರೋನ ಸೋಂಕು ತಗುಲಿರುವುದು ದೃಢವಾಗಿದೆ. ಇದರಿಂದ ಸೋಂಕಿತರ ಸಂಖ್ಯೆ 116ಕ್ಕೆ ಏರಿಕೆಯಾಗಿದೆ.

ಯಾರಿಗೆಲ್ಲ ಸೋಂಕು ತಗುಲಿದೆ?
ಪಿ9546 – 75 ವರ್ಷದ ಮಹಿಳೆ – ತೀವ್ರ ಉಸಿರಾಟದ ಸಮಸ್ಯೆ (SARI)
ಪಿ9547 – 27 ವರ್ಷದ ಪುರುಷ – ಪಿ6414 ಸಂಪರ್ಕ
ಪಿ9548 – 21 ವರ್ಷದ ಪುರುಷ – ಪಿ7802 ಸಂಪರ್ಕ
ಪಿ9549 – 35 ವರ್ಷದ ಮಹಿಳೆ – ಮಹಾರಾಷ್ಟ್ರದಿಂದ ಹಿಂತಿರುಗಿದ್ದಾರೆ
ಪಿ9550 – 21 ವರ್ಷದ ಪುರುಷ – ಪಿ8063 ಸಂಪರ್ಕ
ಮೂವರು ಆಸ್ಪತ್ರೆಯಿಂದ ಬಿಡುಗಡೆ
ಈ ನಡುವೆ ಇವತ್ತು ಕರೋನದಿಂದ ಗುಣವಾಗಿ ಮೂವರು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಪಿ6410, ಪಿ6413 ಮತ್ತು ಪಿ6859 ಅವರು ಸೋಂಕಿನಿಂದ ಗುಣವಾಗಿದ್ದಾರೆ.
ಇನ್ನೆಷ್ಟು ಮಂದಿಗೆ ಚಿಕಿತ್ಸೆ ಆಗ್ತಿದೆ?
ಇವತ್ತು ಐವರು ಸೋಂಕಿತರನ್ನು ಸೇರಿ ಶಿವಮೊಗ್ಗ ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 116ಕ್ಕೆ ಏರಿಕೆ ಆಗಿದೆ. ಈ ಪೈಕಿ ಇವತ್ತು ಮೂವರು ಡಿಸ್ಚಾರ್ಜ್ ಆಗಿದ್ದು, ಗುಣವಾದವರ ಒಟ್ಟು ಸಂಖ್ಯೆ 88ಕ್ಕೆ ಏರಿಕೆಯಾಗಿದೆ. 27 ಮಂದಿಗೆ ಚಿಕಿತ್ಸೆ ನಡೆಯುತ್ತಿದೆ. ಒಬ್ಬರು ಮಾತ್ರ ಮೃತರಾಗಿದ್ದಾರೆ ಎಂದು ಸರ್ಕಾರ ತಿಳಿಸಿದೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು






