ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA NEWS | 25 ಜೂನ್ 2020
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಶಿವಮೊಗ್ಗ ಜಿಲ್ಲೆಯಾದ್ಯಂತ ಎಸ್ಸೆಸ್ಸೆಲ್ಸಿ ಪರೀಕ್ಷೆ ಆರಂಭವಾಗಿದೆ. ಕರೋನ ಹಿನ್ನೆಲೆ ಸರ್ಕಾರ ಸೂಚಿಸಿರುವ ಮಾರ್ಗಸೂಚಿ ಅಡಿ ಪರಿಶೀಲನೆ ಬಳಿಕ ವಿದ್ಯಾರ್ಥಿಗಳನ್ನು ಪರೀಕ್ಷ ಕೇಂದ್ರದ ಒಳಗೆ ಬಿಡಲಾಗುತ್ತಿದೆ.
ಸ್ಯಾನಿಟೈಸರ್, ಸಾಮಜಿಕ ಅಂತರ, ಮಾಸ್ಕ್
ಎಲ್ಲಾ ಪರೀಕ್ಷ ಕೇಂದ್ರದಲ್ಲೂ ಸ್ಯಾನಿಟೈಸರ್, ಸಾಮಾಜಿಕ ಅಂತರ, ಥರ್ಮಲ್ ಸ್ಕ್ಯಾನಿಂಗ್ ಮತ್ತು ಮಾಸ್ಕ್ ಕಡ್ಡಾಯಗೊಳಿಸಲಾಗಿದೆ. ಆಶಾ ಕಾರ್ಯಕರ್ತೆಯರು ಮತ್ತು ಆರೋಗ್ಯ ಇಲಾಖೆ ಸಿಬ್ಬಂದಿ ಪ್ರತಿ ವಿದ್ಯಾರ್ಥಿಗೆ ಸ್ಯಾನಿಟೈಸರ್ ಕೊಡುತ್ತಿದ್ದಾರೆ. ಅಲ್ಲದೆ ಥರ್ಮಲ್ ಸ್ಕ್ಯಾನ್ ಮಾಡಲಾಗುತ್ತಿದೆ. ಪ್ರತಿ ವಿದ್ಯಾರ್ಥಿಗು ಶಿಕ್ಷಣ ಇಲಾಖೆ ಮಾಸ್ಕ್ ಪೂರೈಸುತ್ತಿದೆ.
ಸ್ವಯಂ ಚಾಲಿತ ಸ್ಯಾನಿಟೈಸರ್ ಯಂತ್ರ
ರಾಷ್ಟ್ರೀಯ ಶಿಕ್ಷಣ ಸಂಸ್ಥೆಯಲ್ಲಿ ಸ್ವಯಂ ಚಾಲಿತ ಸ್ಯಾನಿಟೈಸರ್ ಯಂತರ ಬಳಕೆ ಮಾಡಲಾಗುತ್ತಿದೆ. ಶಿವಮೊಗ್ಗದ ಏಕತ್ವ ಫೌಂಡೇಶನ್ ರೂಪಿಸಿರುವ ಈ ಯಂತ್ರದ ಮೂಲಕ ವಿದ್ಯಾರ್ಥಿಗಳಿಗೆ ಸ್ಯಾನಿಟೈಸರ್ ಒದಗಿಸಲಾಗುತ್ತಿದೆ. ವಿದ್ಯಾರ್ಥಿಗಳು ಕೈ ಹಿಡಿದರೆ ಸಾಕು, ಒಮ್ಮೆಗೆ ಒಂದು ಎಂ.ಎಲ್ನಷ್ಟು ಸ್ಯಾನಿಟೈಸರ್ ಹೊರಬರುತ್ತದೆ.
ಎಷ್ಟು ವಿದ್ಯರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ?
ಶಿವಮೊಗ್ಗ ಜಿಲ್ಲೆಯಲ್ಲಿ 84 ಕೇಂದ್ರದಲ್ಲಿ ಪರೀಕ್ಷೆ ನಡೆಯುತ್ತಿದೆ. 24,904 ವಿದ್ಯಾರ್ಥಿಗಳು ಪರೀಕ್ಷೆ ಬರೆಯತ್ತಿದ್ದಾರೆ. ವಿದ್ಯಾರ್ಥಿಗಳನ್ನು ಪರೀಕ್ಷಾ ಕೇಂದ್ರಕ್ಕೆ ಕರೆತರಲು 142 ಖಾಸಗಿ ಬಸ್, 56 ಸರ್ಕಾರಿ ಬಸ್ ವ್ಯವಸ್ಥೆ ಮಾಡಲಾಗಿದೆ. ಒಂದು ವೇಳೆ ಯಾವುದೇ ವಿದ್ಯಾರ್ಥಿ ಬಸ್ ತಪ್ಪಿಸಿಕೊಂಡರೆ, ಅವರನ್ನು ಪರೀಕ್ಷಾ ಕೇಂದ್ರಕ್ಕೆ ಕರೆತರಲು ಪ್ರತಿ ತಾಲೂಕಿಗೆ 5 ಜೀಪ್ ವ್ಯವಸ್ಥೆ ಮಾಡಲಾಗಿದೆ.
200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ
ಪರೀಕ್ಷಾ ಕೇಂದ್ರದ ಸುತ್ತಲು 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ವಿಧಿಸಲಾಗಿದೆ. ಶಾಲೆಗಳ ಬಳಿ ಪೋಷಕರು ಬಂದು ಮಕ್ಕಳನ್ನು ಬಿಟ್ಟು ಅಲ್ಲಿಯೇ ನಿಲ್ಲುವಂತಿಲ್ಲ. ಮಕ್ಕಳನ್ನು ಪರೀಕ್ಷಾ ಕೇಂದ್ರಕ್ಕೆ ಬಿಡುವ ಪೋಷಕರು ಕೇಂದ್ರದ ಮುಂದೆ ನಿಲ್ಲಲು ಅವಕಾಶವಿಲ್ಲ. ಎಲ್ಲಾ ಪರೀಕ್ಷಾ ಕೇಂದ್ರದ ಬಳಿ ಪೊಲೀಸರನ್ನು ನಿಯೋಜಿಸಲಾಗಿದೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]