ಶಿವಮೊಗ್ಗ ಲೈವ್.ಕಾಂ | SHIMOGA NEWS | 27 ಜೂನ್ 2020
ಕರೋನಾದಿಂದ ಮೃತಪಟ್ಟ ವೃದ್ಧೆಯ ಸಂಪರ್ಕದಲ್ಲಿದ್ದ ಕುಟುಂಬದ ಇಬ್ಬರಿಗೆ ಸೋಂಕು ಕಾಣಿಸಿಕೊಂಡಿದೆ. ಇದು ಶಿಕಾರಿಪುರ ತಾಲೂಕಿನಲ್ಲಿ ತೀವ್ರ ಆತಂಕ ಸೃಷ್ಟಿಸಿದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಜೂ.೨೨ರಂದು ೭೫ ವರ್ಷದ ವೃದ್ಧೆ ಮೃತಪಟ್ಟಿದ್ದರು. ಮೃತ ಮಹಿಳೆಗೆ ಕರೋನದ ಒಂದು ಬಗೆಯಾದ ಸಾರಿ (SARI) ಇತ್ತು ಎಂದು ವರದಿಯಲ್ಲಿ ತಿಳಿಸಲಾಗಿತ್ತು. ಈಗ ಅವರ ಸಂಪರ್ಕದಲ್ಲಿದ್ದ ಕುಟುಂಬದ ಇಬ್ಬರಲ್ಲೇ ಸೋಂಕು ಕಾಣಿಸಿಕೊಂಡಿದೆ.
ವೃದ್ಧೆಯ ಕುಟುಂಬದ 40 ವರ್ಷದ ಪುರುಷ ಪಿ10829 ಮತ್ತು ೨೦ ವರ್ಷದ ಯುವತಿ ಪಿ10831ಗೆ ಸೋಂಕು ತಗುಲಿದೆ. ಇದು ಶಿಕಾರಿಪುರದಲ್ಲಿ ತೀವ್ರ ಆತಂಕಕ್ಕೆ ಕಾರಣವಾಗಿದೆ.
ಇಡೀ ಊರು ಬಂದ್
ವೃದ್ಧೆ ಸಾವನ್ನಪ್ಪಿದ ಬೆನ್ನಿಗೆ ಗ್ರಾಮದ 20 ಮನೆಗಳನ್ನು ಮಾತ್ರ ಸೀಲ್ ಡೌನ್ ಮಾಡಲಾಗಿತ್ತು. ಈಗ ಮತ್ತಿಬ್ಬರಲ್ಲಿ ಸೋಂಕು ಕಾಣಿಸಿಕೊಂಡ ಹಿನ್ನೆಲೆ, ಖವಾಸಪುರ ಗ್ರಾಮವನ್ನು ಸಂಪೂರ್ಣವಾಗಿ ಸೀಲ್ ಡೌನ್ ಮಾಡಲಾಗಿದೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]