ಶಿವಮೊಗ್ಗ ಲೈವ್.ಕಾಂ | SHIMOGA NEWS | 27 ಜೂನ್ 2020
ಶಿವಮೊಗ್ಗ ನಗರದಲ್ಲಿ ಇವತ್ತು ಮತ್ತೆ ಎರಡು ರಸ್ತೆಗಳನ್ನು ಇವತ್ತು ಸೀಲ್ ಡೌನ್ ಮಾಡಲಾಗಿದೆ. ಇಬ್ಬರಿಗೆ ಸೋಂಕು ತಗುಲಿರುವ ಹಿನ್ನೆಲೆಯಲ್ಲಿ ಅವರ ಮನೆಗಳಿರುವ ರಸ್ತೆಗಳಲ್ಲಿ ಜನ ಸಂಚಾರ ನಿರ್ಬಂಧಿಸಲಾಗಿದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಗೋಪಾಲಗೌಡ ಬಡಾವಣೆ
ಗೋಪಾಲಗೌಡ ಬಡಾವಣೆಯ ಮತ್ತೊಂದು ರಸ್ತೆಯನ್ನು ಇವತ್ತು ಸೀಲ್ ಡೌನ್ ಮಾಡಲಾಗಿದೆ. ಇಲ್ಲಿನ ಡಿ ಬ್ಲಾಕ್ನ ರಸ್ತೆಯನ್ನು ಬ್ಯಾರಿಕೇಡ್ ಹಾಕಿ ಸೀಲ್ ಡೌನ್ ಮಾಡಲಾಗಿದೆ. ನಿವಾಸಿಯೊಬ್ಬರಲ್ಲಿ ಸೋಂಕು ಕಾಣಿಸಿಕೊಂಡ ಹಿನ್ನೆಲೆ, ಬ್ಯಾರಿಕೇಡ್ ಹಾಕಿ ರಸ್ತೆಯನ್ನು ಬಂದ್ ಮಾಡಲಾಗಿದೆ.
ಪಾಲಿಟೆಕ್ನಿಕ್ ಮಂದಿನ ರಸ್ತೆ
ಗೋಪಾಳದ ಮಹಿಳಾ ಪಾಲಿಟೆಕ್ನಿಕ್ ಕಾಲೇಜು ಎದುರಿನ ವಿವೇಕಾನಂದ ಬಡಾವಣೆಯ ರಸ್ತೆಯನ್ನು ಸೀಲ್ ಡೌನ್ ಮಾಡಲಾಗಿದೆ. ಇಲ್ಲಿನ ನಿವಾಸಿಯೊಬ್ಬರಲ್ಲೂ ಸೋಂಕು ಕಾಣಿಸಿಕೊಂಡಿದೆ ಎಂದು ಹೇಳಲಾಗುತ್ತಿದೆ. ಇದರಿಂದ ಈ ರಸ್ತೆಯನ್ನು ಸೀಲ್ ಡೌನ್ ಮಾಡಲಾಗಿದೆ.
ರಸ್ತೆಯಲ್ಲಿ ಸ್ಯಾನಿಟೈಸೇಷನ್
ಸೀಲ್ ಡೌನ್ ಮಾಡಿರುವ ರಸ್ತೆಗಳನ್ನು ಸಂಪೂರ್ಣ ಸ್ಯಾನಿಟೈಸೇಷನ್ ಮಾಡಲಾಗಿದೆ. ಇನ್ನು ಇಲ್ಲಿರುವ ಮನೆಗಳಲ್ಲಿ ಯಾರೆಲ್ಲ ಇದ್ದಾರೆ, ಅವರ ಆರೋಗ್ಯದ ಸ್ಥಿತಿಗತಿಯೇನು ಅನ್ನುವ ಮಾಹಿತಿ ಸಂಗ್ರಹಿಸಲಾಗುತ್ತಿದೆ. ಎಲ್ಲರಿಗೂ ನಿರಂತರ ಆರೋಗ್ಯ ತಪಾಸಣೆ ನಡೆಸಲಾಗುತ್ತದೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]