ಶಿವಮೊಗ್ಗ ಲೈವ್.ಕಾಂ | SHIMOGA NEWS | 28 ಜೂನ್ 2020
ಮೃತ ವೃದ್ಧೆಯ ಸಂಪರ್ಕದಲ್ಲಿದ್ದ ಮತ್ತಷ್ಟು ಮಂದಿಗೆ ಜಿಲ್ಲೆಯಲ್ಲಿ ಸೋಂಕು ಕಾಣಿಸಿಕೊಂಡಿದೆ. ಇದು ಶಿಕಾರಿಪುರ ತಾಲೂಕಿನಲ್ಲಿ ತೀವ್ರ ಆತಂಕ ಸೃಷ್ಟಿಸಿದೆ.
ತಾಲೂಕಿನ ಖವಾಸಪುರ ಗ್ರಾಮದ ವೃದ್ಧೆಯ ಸಂಬಂಧಿಕರು, ಅಕ್ಕಪಕ್ಕದ ಮನೆಯವರಲ್ಲಿ ಕರೋನ ಸೋಂಕು ಕಾಣಿಸಿಕೊಂಡಿದೆ. ಜೂ.27ರ ವರದಿಯಲ್ಲಿ 13 ಮಂದಿಗೆ ಸೋಂಕು ತಗುಲಿದೆ ಎಂದು ತಿಳಿಸಲಾಗಿದೆ. ಈ ಪೈಕಿ 9 ಮಂದಿಗೆ ಕರೋನ ಬರಲು ಕಾರಣ ವೃದ್ಧೆಯ ಸಂಪರ್ಕ ಎಂದು ತಿಳಿದು ಬಂದಿದೆ.
ಒಟ್ಟು 11 ಸೋಂಕಿತರು
ಜೂ.26ರಂದು ಬಿಡುಗಡೆಯಾದ ಹೆಲ್ತ್ ಬುಲೆಟಿನ್ನಲ್ಲಿ ಪಿ9546 ಸಂಪರ್ಕದಿಂದ ಇಬ್ಬರಿಗೆ ಕರೋನ ಸೋಂಕು ಕಾಣಿಸಿಕೊಂಡಿದೆ ಎಂದು ತಿಳಿಸಲಾಗಿತ್ತು. ಈಗ ಒಂಭತ್ತು ಮಂದಿಗೆ ಸೋಂಕು ತಗುಲಿದ್ದು, ವೃದ್ಧೆಯ ಸಂಪರ್ಕದಿಂದ ಸೋಂಕಿತರಾದವರ ಸಂಖ್ಯೆ 11ಕ್ಕೆ ಏರಿಕೆಯಾಗಿದೆ.
75 ವರ್ಷದ ಪಿ9546 ಜೂನ್ 22ರಂದು ಮೃತಪಟ್ಟಿದ್ದಾರೆ. ವೃದ್ಧೆ ಮೃತಪಟ್ಟ ಬಳಿಕ ಸ್ವ್ಯಾಬ್ ಟೆಸ್ಟ್ ಮಾಡಲಾಗಿತ್ತು. ಆಗ ಅವರಿಗೆ ಕರೋನ ಇರುವುದು ದೃಢವಾಗಿತ್ತು. ಸದ್ಯ ಖವಾಸಪುರ ಗ್ರಾಮವನ್ನು ಸೀಲ್ ಡೌನ್ ಮಾಡಿ ಎಲ್ಲರ ಆರೋಗ್ಯ ತಪಾಸಣೆ ನಡೆಸಲಾಗುತ್ತಿದೆ. ಈ ಬೆಳವಣಿಗೆ ಜಿಲ್ಲೆಯಲ್ಲಿ ಕರೋನ ಸಂಬಂಧ ಆತಂಕ ಹೆಚ್ಚಿಸಿದೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
LATEST NEWS
- ಮನೆಯನ್ನೇ ಬಂದೂಕು ಕಾರ್ಖಾನೆ ಮಾಡಿಕೊಂಡಿದ್ದ ಕಾರ್ಪೆಂಟರ್, ಎಲ್ಲಿ? ಎಷ್ಟು ಬಂದೂಕು ಸಿಕ್ತು?

- ಕಾಂಗ್ರೆಸ್ನದ್ದು ‘3-C ಸರ್ಕಾರ’, ಮಿನಿಸ್ಟರ್ ರಾಜೀನಾಮೆಗೆ ಶಿವಮೊಗ್ಗದಲ್ಲಿ ಆಗ್ರಹ, ಏನಿದು ಮೂರು C?

- ಶಿವಮೊಗ್ಗ ಸಿಟಿಯ ವಿವಿಧೆಡೆ ಫೆಬ್ರವರಿ 6, 7ರಂದು ಕರೆಂಟ್ ಇರಲ್ಲ, ಎಲ್ಲೆಲ್ಲಿ? ಕಾರಣವೇನು?

- ಶಿವಮೊಗ್ಗ, ಭದ್ರಾವತಿಯಲ್ಲಿ ತುಸು ತಗ್ಗಿದ ತಾಪಮಾನ, ಉಳಿದ ತಾಲೂಕುಗಳಲ್ಲಿ ಹೇಗಿರಲಿದೆ?

- ಪೂಜಾ ಗೌಡ ನಂಬಿ ಅರ್ಧ ಕೋಟಿ ಹಣ ಕಳೆದುಕೊಂಡ ಶಿವಮೊಗ್ಗದ ಸೇಲ್ಸ್ಮನ್, ಆಗಿದ್ದೇನು?

About The Editor
ನಿತಿನ್ ಆರ್.ಕೈದೊಟ್ಲು





