ಶಿವಮೊಗ್ಗ ಲೈವ್.ಕಾಂ | SHIMOGA NEWS | 28 ಜೂನ್ 2020
ಬೆಂಗಳೂರಿಂದ ಹಿಂತಿರುಗಿದ್ದ ಮಹಿಳೆಯೊಬ್ಬರಿಗೆ ಕರೋನ ಸೋಂಕು ಕಾಣಿಸಿಕೊಂಡಿದೆ. ಇದರಿಂದ ಶಿರಾಳಕೊಪ್ಪದ ರಸ್ತೆಯೊಂದನ್ನು ಸೀಲ್ ಡೌನ್ ಮಾಡಲಾಗಿದೆ.
ಬೆಂಗಳೂರಿಗೆ ತೆರಳಿದ್ದ ಮಹಿಳೆ ಜೂ.23ರಂದು ಶಿರಾಳಕೊಪ್ಪಕ್ಕೆ ಕಾರಿನಲ್ಲಿ ಹಿಂತಿರುಗಿದ್ದರು. ಆರೋಗ್ಯ ಇಲಾಖೆ ಸಿಬ್ಬಂದಿ ಇವರ ಗಂಟಲು ದ್ರವ ಪರೀಕ್ಷೆ ನಡೆಸಿದ್ದರು. ಆಗ ಮಹಿಳೆಗೆ ಕರೋನ ಸೋಂಕು ತಗುಲಿರುವುದು ದೃಢವಾಗಿದೆ. ತಕ್ಷಣ ಅವರನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಪ್ರಾಥಮಿಕ ಸಂಪರ್ಕ ಪತ್ತೆ
ಮಹಿಳೆಯ ಕುಟುಂಬದ ಆರು ಮಂದಿಯ ಗಂಟಲು ದ್ರವ ಮಾದರಿಯನ್ನು ಸಂಗ್ರಹಿಸಿ ಲ್ಯಾಬ್‍ಗೆ ಕಳುಹಿಸಲಾಗಿದೆ. ಇನ್ನು ಕಾರಿನಲ್ಲಿ ಕರೆತಂದವರ ಪರಿಶೀಲನೆ ನಡೆಸಲಾಗುತ್ತಿದೆ. ಮಹಿಳೆಯ ಮನೆ ಇದ್ದ ನೂರು ಮೀಟರ್ ವ್ಯಾಪ್ತಿಯನ್ನು ಸೀಲ್ ಡೌನ್ ಮಾಡಲಾಗಿದೆ.
ಯಾವ ಏರಿಯಾ ಸೀಲ್ ಡೌನ್?
ಶಿರಾಳಕೊಪ್ಪ ಪಟ್ಟಣದ ಹಳ್ಳೂರು ಹಕ್ಕಲಗೇರಿಯ ನೂರು ಮೀಟರ್ ವ್ಯಾಪ್ತಿಯನ್ನು ಸೀಲ್ ಡೌನ್ ಮಾಡಲಾಗಿದೆ. ತಹಶೀಲ್ದಾರ್ ಕವಿರಾಜ್, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಹೇಮಂತ್, ವೈದ್ಯಾಧಿಕಾರಿ ಮೋಹನ್, ಇಂಜಿನಿಯರ್ ಶೇಖರ್ ನಾಯಕ್, ಹೆಲ್ತ್ ಇನ್ಸ್‍ಪೆಕ್ಟರ್ ನವಾಜ್, ಆರೋಗ್ಯ ನಿರೀಕ್ಷಕರು ಸ್ಥಳಕ್ಕೆ ಭೇಟಿ ಕೊಟ್ಟು, ಪರಿಶೀಲನೆ ನಡೆಸಿದರು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200