ಶಿವಮೊಗ್ಗ ಲೈವ್.ಕಾಂ | THIRTHAHALLI NEWS | 29 ಜೂನ್ 2020
ತೀರ್ಥಹಳ್ಳಿಯ ಗಾಂಧಿನಗರದ ರಸ್ತೆಯೊಂದನ್ನು ಸೀಲ್ ಡೌನ್ ಮಾಡಲಾಗಿದೆ. ಹೆಬ್ರಿಯ ಸಮುದಾಯ ಆರೋಗ್ಯ ಕೇಂದ್ರದ ನರ್ಸ್ ಒಬ್ಬರಲ್ಲಿ ಸೋಂಕು ಕಾಣಿಸಿಕೊಂಡ ಹಿನ್ನೆಲೆ, ಅವರ ಮನೆ ಸುತ್ತಲು ಕಂಟೈನ್ಮೆಂಟ್ ಜೋನ್ ಮಾಡಲಾಗಿದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಉಡುಪಿಯ ಹೆಬ್ರಿ ಸಮುದಾಯ ಆರೋಗ್ಯ ಕೇಂದ್ರದ ನರ್ಸ್ ಒಬ್ಬರು ಕುಟುಂಬದೊಂದಿಗೆ ತೀರ್ಥಹಳ್ಳಿ ಪಟ್ಟಣದ ಮನೆಯಲ್ಲಿ ವಾಸವಿದ್ದರು. 33 ವರ್ಷದ ನರ್ಸ್ ಪ್ರತಿ ದಿನ ಇಲ್ಲಿಂದಲೇ ಹೆಬ್ರಿಗೆ ಹೋಗಿ ಬರುತ್ತಿದ್ದರು.
ಉಡುಪಿಗೆ ಕೇಸ್ ಶಿಫ್ಟ್
ಕೆಲಸದ ಒತ್ತಡದಿಂದಾಗಿ ಈ ನರ್ಸ್ ಹೆಬ್ರಿಯಲ್ಲೇ ಉಳಿದುಕೊಂಡಿದ್ದರು. ಜೂ.8ರ ಬಳಿಕ ತೀರ್ಥಹಳ್ಳಿಯಿಂದ ಹೆಬ್ರಿಗೆ ಓಡಾಡುತ್ತಿದ್ದರು. ಇವರಿಗೆ ಸೋಂಕು ತಗುಲಿದ್ದು ಹೇಗೆ ಅನ್ನುವುದು ಇನ್ನೂ ಖಚಿತವಾಗಿಲ್ಲ. ಆದರೆ ಸೋಂಕು ತಗುಲಿರುವ ವಿಚಾರ ತಿಳಿಯುತ್ತಿದ್ದಂತೆ ಅವರನ್ನು ಉಡುಪಿಗೆ ಶಿಫ್ಟ್ ಮಾಡಲಾಗಿದೆ. ಉಡುಪಿಯ ಸರ್ಕಾರಿ ಆಸ್ಪತ್ರೆಗೆ ಅವರನ್ನು ದಾಖಲು ಮಾಡಲಾಗಿದೆ.
ಗಾಂಧಿನಗರದಲ್ಲಿ ಕಂಟೈನ್ಮೆಂಟ್ ಜೋನ್
ತೀರ್ಥಹಳ್ಳಿಯ ಗಾಂಧಿನಗರದಲ್ಲಿ 8 ಮನೆಗಳನ್ನು ಕಂಟೈನ್ಮೆಂಟ್ ಜೋನ್ ಮಾಡಲಾಗಿದೆ. 81 ಮನೆಗಳನ್ನು ಬಫರ್ ಜೋನ್ ಎಂದು ಘೋಷಿಸಲಾಗಿದೆ. ಈ ಜೋನ್‍ನಲ್ಲಿರುವ ಎಲ್ಲರ ಆರೋಗ್ಯದ ಕುರಿತು ಮಾಹಿತಿ ಸಂಗ್ರಹಿಸಲಾಗಿದೆ. ಅಲ್ಲದೆ ನಿಯಮಿತವಾಗಿ ಆರೋಗ್ಯ ತಪಾಸಣೆ ನಡೆಸಲಾಗುತ್ತದೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]