ಶಿವಮೊಗ್ಗ ಜಿಲ್ಲೆಯಲ್ಲಿ 2225 ಬೆಡ್‌ಗಳ ಕೋವಿಡ್ ಕೇರ್ ಸೆಂಟರ್‌ಗಳು ರೆಡಿ, ಖಾಸಗಿ ಆಸ್ಪತ್ರೆ ವೈದ್ಯರಿಗೂ ರಜೆ ಕಟ್

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 29 ಜೂನ್ 2020

ರಾಜ್ಯಾದ್ಯಂತ ಕರೋನ ಆತಂಕ ಹೆಚ್ಚುತ್ತಿದೆ. ಈ ಹಿನ್ನಲೆಯಲ್ಲಿ ಕೋವಿಡ್ ಕೇರ್ ಸೆಂಟರ್ ತೆರೆಯುವಂತೆ ರಾಜ್ಯ ಸರ್ಕಾರ ಸೂಚಿಸಿದೆ. ಅದರಂತೆ ಶಿವಮೊಗ್ಗ ಜಿಲ್ಲೆಯಲ್ಲಿ 2225 ಬೆಡ್‌ಗಳ ಕೋವಿಡ್ ಕೇರ್ ಸೆಂಟರ್‌ಗಳನ್ನು ಗುರುತಿಸಲಾಗಿದೆ.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲೆಯ ಪ್ರಮುಖ ಖಾಸಗಿ ಆಸ್ಪತ್ರೆಯ ಪ್ರತಿನಿಧಿಗಳು ಹಾಗೂ ವೈದ್ಯಾಧಿಕಾರಿಗಳೊಂದಿಗೆ ಸಭೆಯಲ್ಲಿ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ ಈ ವಿಚಾರ ತಿಳಿಸಿದ್ದಾರೆ.
ಸರ್ಕಾರದ ಮಾರ್ಗಸೂಚಿ ಪ್ರಕಾರ ಯಾವುದೇ ರೋಗ ಲಕ್ಷಣಗಳಿಲ್ಲದ ಕರೋನಾ ಪಾಸಿಟಿವ್ ವ್ಯಕ್ತಿಗಳಿಗೆ ಚಿಕಿತ್ಸೆ ನೀಡಲು ಹಾಸ್ಟೆಲ್‍ಗಳು ಒಳಗೊಂಡಂತೆ ಕೋವಿಡ್ ಕೇರ್ ಸೆಂಟರ್‌ಗಳನ್ನು ಈಗಾಗಲೇ ಗುರುತಿಸಲಾಗಿದೆ. ಒಟ್ಟು 2225 ಬೆಡ್ ಸೌಲಭ್ಯಗಳಿರುವ ಕೋವಿಡ್ ಕೇರ್ ಸೆಂಟರ್‌ಗಳನ್ನು ಗುರುತಿಸಿ ಸಜ್ಜುಗೊಳಿಸಲಾಗಿದೆ ಎಂದರು.

ಖಾಸಗಿ ಆಸ್ಪತ್ರೆ ವೈದ್ಯರಿಗೆ ದೀರ್ಘಕಾಲದ ರಜೆ ಕಟ್

ಜಿಲ್ಲೆಯಲ್ಲಿ ಪ್ರಸ್ತುತ ಕರೋನಾ ನಿಯಂತ್ರಣದಲ್ಲಿದೆ. ಯಾವುದೇ ಪರಿಸ್ಥಿತಿಯನ್ನು ಎದುರಿಸಲು ಜಿಲ್ಲಾಡಳಿತ ಸಿದ್ಧತೆಗಳನ್ನು ಕೈಗೊಳ್ಳುತ್ತಿದೆ. ಅಗತ್ಯ ಬಿದ್ದರೆ ಖಾಸಗಿ ವೈದ್ಯರ ಸೇವೆಯನ್ನು ಪಡೆದುಕೊಳ್ಳಲಾಗುವುದು. ಯಾವುದೇ ಆಸ್ಪತ್ರೆಗಳು ವೈದ್ಯರು ಹಾಗೂ ವೈದ್ಯಕೀಯ ಸಿಬ್ಬಂದಿಗೆ ದೀರ್ಘ ಕಾಲದ ರಜೆ ನೀಡಬಾರದು. ರಜೆ ನೀಡುವ ಕುರಿತು ಜಿಲ್ಲಾಡಳಿತಕ್ಕೆ ಮಾಹಿತಿಯನ್ನು ಒದಗಿಸಬೇಕು.

ಮೆಗ್ಗಾನ್‌ನಲ್ಲಿಯೇ ಚಿಕಿತ್ಸೆಗೆ ಆದ್ಯತೆ

ಕರೋನಾ ಪಾಸಿಟಿವ್ ವ್ಯಕ್ತಿಗಳಿಗೆ ಚಿಕಿತ್ಸೆಯನ್ನು ಮೆಗ್ಗಾನ್‍ನಲ್ಲಿಯೇ ನೀಡಲು ಆದ್ಯತೆ ನೀಡಲಾಗುವುದು. ಖಾಸಗಿ ಆಸ್ಪತ್ರೆಗಳಿಗೆ ಪಾಸಿಟಿವ್ ವ್ಯಕ್ತಿಯನ್ನು ಕಳುಹಿಸುವ ಮೊದಲು ತಜ್ಞ ಸಮಿತಿಯಿಂದ ಅಭಿಪ್ರಾಯ ಪಡೆದುಕೊಳ್ಳಲಾಗುವುದು ಎಂದು ಅವರು ಹೇಳಿದರು.

ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಕೆ.ಎಂ.ಶಾಂತರಾಜು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಎಲ್.ವೈಶಾಲಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರಾಜೇಶ ಸುರಗಿಹಳ್ಳಿ, ಶಿಮ್ಸ್ ನಿರ್ದೇಶಕ ಡಾ.ಸಿದ್ಧಪ್ಪ ಸೇರಿದಂತೆ ವಿವಿಧ ಆಸ್ಪತ್ರೆಗಳ ತಜ್ಞ ವೈದ್ಯರು ಸಭೆಯಲ್ಲಿ ಉಪಸ್ಥಿತರಿದ್ದರು.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : June 29, 2020

ಆಗುಂಬೆ ಘಾಟಿಯಲ್ಲಿ ರಸ್ತೆಗೆ ಬಿದ್ದ ಮರ, ಕೆಲ ಹೊತ್ತು ಟ್ರಾಫಿಕ್‌ ಜಾಮ್

ಆಗುಂಬೆ ಘಾಟಿಯಲ್ಲಿ ರಸ್ತೆಗೆ ಬಿದ್ದ ಮರ, ಕೆಲ ಹೊತ್ತು ಟ್ರಾಫಿಕ್‌ ಜಾಮ್

ಕುಟುಂಬದ ಜೊತೆ ಊಟ ಮುಗಿಸಿ, ಮಾತನಾಡಿ ಮಲಗಲು ತೆರಳಿದ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಕುಟುಂಬದ ಜೊತೆ ಊಟ ಮುಗಿಸಿ, ಮಾತನಾಡಿ ಮಲಗಲು ತೆರಳಿದ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಶಿವಮೊಗ್ಗದಲ್ಲಿ ಶ್ರೀಕಾಂತಣ್ಣ ಕಪ್‌ ಕ್ರಿಕೆಟ್‌ ಪಂದ್ಯಾವಳಿ, ಟ್ರೋಫಿ, ಟೀ ಶರ್ಟ್‌ಗಳ ಅನಾವರಣ

ಶಿವಮೊಗ್ಗದಲ್ಲಿ ಶ್ರೀಕಾಂತಣ್ಣ ಕಪ್‌ ಕ್ರಿಕೆಟ್‌ ಪಂದ್ಯಾವಳಿ, ಟ್ರೋಫಿ, ಟೀ ಶರ್ಟ್‌ಗಳ ಅನಾವರಣ

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

Leave a Comment