ಒಂದು ಗಂಟೆ ಕಾದರೂ ಬರಲಿಲ್ಲಿ ಬಿಜೆಪಿ ಸದಸ್ಯರು, ಸಾಮಾನ್ಯ ಸಭೆ ಮುಂದಕ್ಕೆ ಹೋಯ್ತು, ಕುತೂಹಲ ಮೂಡಿಸುತ್ತಿದೆ ಬಿಜೆಪಿ ನಡೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 30 ಜೂನ್ 2020

ಕೋರಂ ಕೊರತೆಯಿಂದಾಗಿ ಶಿವಮೊಗ್ಗ ಜಿಲ್ಲಾ ಪಂಚಾಯಿತಿಯಲ್ಲಿ ಇವತ್ತು ನಡೆಯಬೇಕಿದ್ದ ಸಾಮಾನ್ಯ ಸಭೆಯನ್ನು ಮುಂದೂಡಲಾಗಿದೆ. ಜುಲೈ 3ರಂದು ಸಾಮಾನ್ಯ ಸಭೆ ನಡೆಯಲಿದ್ದು, ತೀವ್ರ ಕುತೂಹಲ ಕೆರಳಿಸಿದೆ.

104940135 1155701961457889 3017016311209190690 n.jpg? nc cat=108& nc sid=8024bb& nc ohc=H tfn7o9zH8AX 3uDbh& nc ht=scontent.fblr11 1

ಬಿಜೆಪಿ ಸದಸ್ಯರೆಲ್ಲ ಗೈರು

ಪೂರ್ವ ನಿಗದಿಯಂತೆ ಇವತ್ತು ಬೆಳಗ್ಗೆ 11 ಗಂಟಗೆ ಸಾಮಾನ್ಯ ಸಭೆ ಆರಂಭವಾಯಿತು. ಆದರೆ ಕೋರಂ ಕೊರತೆಯಿಂದಾಗಿ ಸುಮಾರು ಒಂದು ಗಂಟೆ ಸಭೆ ಮುಂದೂಡಲಾಯಿತು. ಆ ಬಳಿಕ ಸಭೆ ಸೇರಿದಾಗಲೂ ಕೋರಂ ಕೊರತೆ ಉಂಟಾಯಿತು. ಬಿಜೆಪಿ ಸದಸ್ಯರು ಸಾಮೂಹಿಕವಾಗಿ ಗೈರಾಗಿದ್ದರಿಂದ ಕೋರಂ ಕೊರತೆ ಕಂಡು ಬಂದಿದೆ.

ಸಭೆ ಮುಂದೂಡಿದ ಅಧ್ಯಕ್ಷರು

ಶಾಸಕರು, ವಿಧಾನ ಪರಿಷತ್ ಸದಸ್ಯರು ಮತ್ತು ಜಿಲ್ಲಾ ಪಂಚಾಯಿತಿ ಸದಸ್ಯರು ಸೇರಿ ಒಟ್ಟು 50 ಮಂದಿ ಸಭೆಯಲ್ಲಿ ಇರಬೇಕಿತ್ತು. ಆದರೆ 19 ಮಂದಿಯಷ್ಟೇ ಸಭೆಯಲ್ಲಿದ್ದರು. ಹಾಗಾಗಿ ಸಭೆಯನ್ನು ಮುಂದೂಡಲಾಗಿದೆ ಎಂದು ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಜ್ಯೋತಿ ಎಸ್.ಕುಮಾರ್ ತಿಳಿಸಿದರು. ಜುಲೈ 3ರಂದು ಸಾಮಾನ್ಯ ಸಭೆ ನಡೆಯಲಿದೆ.

ಕುತೂಹಲ ಕೆರಳಿಸಿದ ನಡೆ

ಜಿಲ್ಲಾ ಪಂಚಾಯಿತಿ ಸಾಮಾನ್ಯ ಸಭೆ ಇರುವ ಕುರಿತು ಶಾಸಕರು, ವಿಧಾನ ಪರಿಷತ್ ಸದಸ್ಯರು ಮತ್ತು ಜಿಲ್ಲಾ ಪಂಚಾಯಿತಿ ಸದಸ್ಯರಿಗೆ ಮುಂಚಿತವಾಗಿಯೇ ಮಾಹಿತಿ ನೀಡಲಾಗುತ್ತದೆ. ಮಾಹಿತಿ ಇದ್ದರೂ ಸದಸ್ಯರು ಗೈರಾಗಿರುವುದು ತೀವ್ರ ಕುತೂಹಲ ಕೆರಳಿಸಿದೆ. ಜಿಲ್ಲಾ ಪಂಚಾಯಿತಿ ಅಧ್ಯಕ್ಷರ ಬದಲಾವಣೆ ವಿಚಾರದಲ್ಲಿ ಮುಸುಕಿನ ಗುದ್ದಾಟ ನಡೆಯುತ್ತಿದೆ. ಇವತ್ತು ಬಿಜೆಪಿ ಸದಸ್ಯರು ಸಾಮೂಹಿಕವಾಗಿ ಗೈರಾಗಿರುವುದು ಇದೇ ಕಾರಣಕ್ಕೆ ಎಂದು ಹೇಳಲಾಗುತ್ತಿದೆ. ಹಾಗಾಗಿ ಜುಲೈ 3ರಂದು ನಡೆಯಲಿರುವ ಸಭೆ ತೀವ್ರ ಕುತೂಹಲ ಮೂಡಿಸಿದೆ.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : June 30, 2020

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

ಭದ್ರಾವತಿಯಲ್ಲಿ 20 ವರ್ಷದ ಯುವಕ ಅರೆಸ್ಟ್‌, ಈತನ ಮೇಲಿವೆ 11 ಕೇಸ್‌, ಏನೇನು?

ಭದ್ರಾವತಿಯಲ್ಲಿ 20 ವರ್ಷದ ಯುವಕ ಅರೆಸ್ಟ್‌, ಈತನ ಮೇಲಿವೆ 11 ಕೇಸ್‌, ಏನೇನು?

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ

ಇಂದಿನ ಪಂಚಾಂಗ – ಇವತ್ತು ಷಷ್ಠಿ, ರೋಹಿಣಿ ನಕ್ಷತ್ರದ ದಿನ, ಯಾವ್ಯಾವ ಸಮಯ ಯಾವಾಗಿದೆ?

ಇಂದಿನ ಪಂಚಾಂಗ – ಇವತ್ತು ಷಷ್ಠಿ, ರೋಹಿಣಿ ನಕ್ಷತ್ರದ ದಿನ, ಯಾವ್ಯಾವ ಸಮಯ ಯಾವಾಗಿದೆ?

Leave a Comment