BREAKING NEWS | ಶಿವಮೊಗ್ಗದಲ್ಲಿ ಕರೋನಾಗೆ ಮತ್ತೊಬ್ಬ ವ್ಯಕ್ತಿ ಸಾವು, ಮೂರಕ್ಕೆ ಏರಿದ ಸಾವಿನ ಸಂಖ್ಯೆ

No.1 News Website
 ಶಿವಮೊಗ್ಗ ಲೈವ್‌ 
ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್‌ ಹೊಂದಿರುವ ವೆಬ್‌ಸೈಟ್‌. ನೀವು ನಮ್ಮ ವಾಟ್ಸಪ್‌ ಗ್ರೂಪ್‌ ಸೇರಲು » ಇಲ್ಲಿ ಕ್ಲಿಕ್‌ ಮಾಡಿ.

shivamogga-live-logo-with-120-by-650-pixel-size.webp

ಶಿವಮೊಗ್ಗ ಲೈವ್.ಕಾಂ | SHIMOGA NEWS | 2 ಜುಲೈ 2020

ಶಿವಮೊಗ್ಗದಲ್ಲಿ ಕರೋನಾಗೆ ಮತ್ತೊಬ್ಬ ವ್ಯಕ್ತಿ ಬಲಿಯಾಗಿದ್ದಾರೆ. ಇದರಿಂದ ಜಿಲ್ಲೆಯಲ್ಲಿ ಈವರೆಗೂ ಸೋಂಕಿಗೆ ಮೃತಪಟ್ಟವರ ಸಂಖ್ಯೆ ಮೂರಕ್ಕೆ ಏರಿಕೆಯಾಗಿದೆ.

ಯಾರು ಮೃತರು? ಸೋಂಕು ತಗುಲಿದ್ದು ಹೇಗೆ?

ಅಂದಾಜು 50 ವರ್ಷದ ಶಿಕ್ಷಕರೊಬ್ಬರು ಕರೋನದಿಂದ ಮೃತರಾಗಿದ್ದಾರೆ. ಇವರು ಕಡೂರು ಮೂಲದವರು ಎಂದು ತಿಳಿದು ಬಂದಿದೆ. ಅನಾರೋಗ್ಯಕ್ಕೆ ತುತ್ತಾಗಿದ್ದ ಶಿಕ್ಷಕರನ್ನು ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಈ ವೇಳೆ ಅವರ ಗಂಟಲು ದ್ರವ ಪರೀಕ್ಷೆ ನಡೆಸಲಾಗಿತ್ತು.

300420 Corona Test in Shimoga Mc Gann Hospital 1 1

ವರದಿಯಲ್ಲಿ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಜಿಲ್ಲೆಯ ಕೋವಿಡ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಶಿಕ್ಷಕ ಮೃತರಾಗಿದ್ದಾರೆ.

ಶಿವಮೊಗ್ಗಕ್ಕೇ ಸೇರುತ್ತೆ ಸಾವಿನ ಲೆಕ್ಕ

ಮೃತ ಶಿಕ್ಷಕ ಚಿಕ್ಕಮಗಳೂರು ಜಿಲ್ಲೆಯವರು. ಆದರೆ ಅವರು ಶಿವಮೊಗ್ಗದ ಆಸ್ಪತ್ರೆಯಲ್ಲಿ ಮೃತರಾಗಿದ್ದರಿಂದ, ಲೆಕ್ಕವನ್ನು ಶಿವಮೊಗ್ಗ ಜಿಲ್ಲೆಗೆ ಸೇರಿಸಲಿದ್ದಾರೆ. ಈ ಹಿಂದೆ ದಾವಣಗೆರೆ ಜಿಲ್ಲೆಯ ಕರೋನ ಸೋಂಕಿತ ವೃದ್ಧೆಯೊಬ್ಬರು ಶಿವಮೊಗ್ಗದ ಆಸ್ಪತ್ರೆಯಲ್ಲಿ ಮೃತರಾಗಿದ್ದರು. ಆಗ ಅದನ್ನು ಶಿವಮೊಗ್ಗ ಜಿಲ್ಲೆಯ ಪಟ್ಟಿಗೆ ಸೇರಿಸಲಾಗಿತ್ತು. ಈಗಲೂ ಅದೇ ರೀತಿ ಆಗುವ ಸಾದ್ಯತೆ ಇದೆ.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

 

ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್‌ಲೈನ್‌ ಮೇಲೆ ಕ್ಲಿಕ್‌ ಮಾಡಿ, ಸುದ್ದಿ ಓದಿ.

Number 1 News Website in shimoga - Shivamogga Live

 

Leave a Comment