ಶಿವಮೊಗ್ಗ ಜಿಲ್ಲೆಯಲ್ಲಿ ಕಂಟೈನ್ಮೆಂಟ್ ಜೋನ್ಗಳ ಸಂಖ್ಯೆಯಲ್ಲಿ ಏರಿಕೆ, ಈಗೆಷ್ಟು ರಸ್ತೆಗಳು ಸೀಲ್ ಡೌನ್ ಆಗಿವೆ ಗೊತ್ತಾ?

No.1 News Website
 ಶಿವಮೊಗ್ಗ ಲೈವ್‌ 
ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್‌ ಹೊಂದಿರುವ ವೆಬ್‌ಸೈಟ್‌. ನೀವು ನಮ್ಮ ವಾಟ್ಸಪ್‌ ಗ್ರೂಪ್‌ ಸೇರಲು » ಇಲ್ಲಿ ಕ್ಲಿಕ್‌ ಮಾಡಿ.

shivamogga-live-logo-with-120-by-650-pixel-size.webp

ಶಿವಮೊಗ್ಗ ಲೈವ್.ಕಾಂ | SHIMOGA NEWS | 3 ಜುಲೈ 2020

ಸೋಂಕಿತರ ಸಂಖ್ಯೆ ಏರಿಕೆಯಾದಂತೆ ಶಿವಮೊಗ್ಗ ಜಿಲ್ಲೆಯಲ್ಲಿ ಕಂಟೈನ್ಮೆಂಟ್ ಜೋನ್‍ಗಳ ಸಂಖ್ಯೆಯು ಹೆಚ್ಚಳವಾಗುತ್ತಿದೆ. ಈಗ ಒಟ್ಟು ಕಂಟೈನ್ಮೆಂಟ್ ಜೋನ್‍ಗಳ ಸಂಖ್ಯೆ 40ಕ್ಕೆ ಏರಿಕೆಯಾಗಿದೆ.

300620 Gandhi Nagara Seal Down in Sanitization 1 1

ವ್ಯಕ್ತಿಯೊಬ್ಬರಲ್ಲಿ ಸೋಂಕು ಕಾಣಿಸಿಕೊಂಡ ಹಿನ್ನೆಲೆ ಶಿವಮೊಗ್ಗದ ಪೆನ್ಷನ್ ಮೊಹಲ್ಲಾದಲ್ಲಿ ರಸ್ತೆಯೊಂದನ್ನು ಸ್ಯಾನಿಟೈಸ್ ಮಾಡಿ, ಸೀಲ್ ಡೌನ್ ಮಾಡಲಾಗಿದೆ. ಇನ್ನು, ಅಶೋಕನಗರದ 1ನೇ ಅಡ್ಡರಸ್ತೆ ಮತ್ತು ಗೋಪಾಳದ ಆದಿ ರಂಗನಾಥ ಸ್ವಾಮಿ ದೇವಸ್ಥಾನವನ್ನು ಸೀಲ್ ಡೌನ್ ಮಾಡಲಾಗಿದೆ.

ಎಲ್ಲೆಡೆ ಸ್ಯಾನಿಟೈಸರ್

ಸೀಲ್ ಡೌನ್ ಆದ ರಸ್ತೆಗಳಲ್ಲಿ ಸಂಪೂರ್ಣ ಸ್ಯಾನಿಟೈಸ್ ಮಾಡಲಾಗಿದೆ. ಮನೆ, ಮಳಿಗೆ ಬಾಗಿಲುಗಳು, ಗೋಡೆಗೆ ಸ್ಯಾನಿಟೈಸ್ ಮಾಡಲಾಗಿದೆ. ಅಲ್ಲದೆ ಮನೆಯಿಂದ ಯಾರೂ ಹೊರ ಬಾರದಂತೆ ಸೂಚನೆ ನೀಡಲಾಗಿದೆ.

ಒಂದೇ ದಿನ 23 ಕೇಸ್

ಶಿವಮೊಗ್ಗ ಜಿಲ್ಲೆಯಲ್ಲಿ ಒಂದೇ ದಿನ 23 ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ. ಹೊಸನಗರದಲ್ಲಿ 6, ಶಿವಮೊಗ್ಗದಲ್ಲಿ 4, ಭದ್ರಾವತಿಯಲ್ಲಿ 5, ಸೊರಬದಲ್ಲಿ 3 ಕೇಸ್ 23 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ. ಇದರಿಂದ ಶಿವಮೊಗ್ಗ ಜಿಲ್ಲೆಯಲ್ಲಿ ಒಟ್ಟು ಪ್ರಕರಣ ಸಂಖ್ಯೆ 199ಕ್ಕೆ ಏರಿಕೆಯಾಗಿದೆ.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

 

ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್‌ಲೈನ್‌ ಮೇಲೆ ಕ್ಲಿಕ್‌ ಮಾಡಿ, ಸುದ್ದಿ ಓದಿ.

Number 1 News Website in shimoga - Shivamogga Live

 

Leave a Comment