ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 4 ಜುಲೈ 2020
ಶಿವಮೊಗ್ಗ ನಗರದ ವಿವಿಧೆಡೆ ಇವತ್ತು ಪುನಃ ಕೆಲವು ರಸ್ತೆಗಳನ್ನು ಸ್ಯಾನಿಟೈಸ್ ಮಾಡಿ, ಸೀಲ್ ಡೌನ್ ಮಾಡಲಾಗಿದೆ. ಇವತ್ತು ಜಿಲ್ಲೆಯಲ್ಲಿ 30ಕ್ಕೂ ಹೆಚ್ಚು ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ ಎಂದು ಹೇಳಲಾಗುತ್ತಿದೆ.
ಸಿಟಿಯ ಹೊಸನಮನೆ, ಅಶೋಕ ನಗರದ ಕೆಲವು ರಸ್ತೆಗಳನ್ನು ಸೀಲ್ ಡೌನ್ ಮಾಡಲಾಗಿದೆ. ರವಿ ವರ್ಮಾ ಬೀದಿಯಲ್ಲಿ ಒಂದೇ ಮನೆಯಲ್ಲಿ ಏಳು ಮಂದಿಗೆ ಕರೋನ ಪಾಸಿಟಿವ್ ಬಂದಿದೆ ಎಂದು ಹೇಳಲಾಗುತ್ತಿದೆ. ಪ್ರತಿಷ್ಠಿತ ಹೊಟೇಲ್ ಒಂದರಲ್ಲಿ ಇದ್ದ ವ್ಯಕ್ತಿಯೊಬ್ಬರಲ್ಲಿ ಸೋಂಕು ಕಾಣಿಸಿಕೊಂಡಿದೆ. ಈಗ ಪ್ರತಿಷ್ಠಿತ ಹೊಟೇಲ್ ಒಂದನ್ನು ಸೀಲ್ ಮಾಡುವಂತಾಗಿದೆ.
ಜಿಲ್ಲೆಯಲ್ಲಿ ಕರೋನ ಸೋಂಕಿತರ ಸಂಖ್ಯೆ ದಿನೆ ದಿನೆ ಹೆಚ್ಚಾಗುತ್ತಿದ್ದು, ಸೀಲ್ ಡೌನ್ ಪ್ರದೇಶಗಳ ಸಂಖ್ಯೆಯಲ್ಲೂ ಏರಿಕೆಯಾಗಿದೆ. ಜುಲೈ 3ರ ವರದಿ ಪ್ರಕಾರ 38 ಕಂಟೈನ್ಮೆಂಟ್ ಜೋನ್‍ಗಳಿವೆ. ಇವತ್ತು ಜಿಲ್ಲೆಯಲ್ಲಿ ವಿವಿಧೆಡೆ ಕಂಟೈನ್ಮೆಂಟ್ ಜೋನ್‍ಗಳ ಸಂಖ್ಯೆ ಮತ್ತಷ್ಟು ಏರಿಕೆಯಾಗುವ ಸಂಭವ ಇದೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
LATEST NEWS
- ಆಗುಂಬೆ ಘಾಟಿಯಲ್ಲಿ ರಸ್ತೆಗೆ ಬಿದ್ದ ಮರ, ಕೆಲ ಹೊತ್ತು ಟ್ರಾಫಿಕ್ ಜಾಮ್

- ಕುಟುಂಬದ ಜೊತೆ ಊಟ ಮುಗಿಸಿ, ಮಾತನಾಡಿ ಮಲಗಲು ತೆರಳಿದ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

- ಶಿವಮೊಗ್ಗದಲ್ಲಿ ಶ್ರೀಕಾಂತಣ್ಣ ಕಪ್ ಕ್ರಿಕೆಟ್ ಪಂದ್ಯಾವಳಿ, ಟ್ರೋಫಿ, ಟೀ ಶರ್ಟ್ಗಳ ಅನಾವರಣ

- ಸರ್ವೆಗೆ ಹೋದಾಗ ಇಂಜಿನಿಯರ್, ಸರ್ವೇಯರ್ ಮೇಲೆ ಕೋಲು, ಕಲ್ಲುಗಳಿಂದ ದಾಳಿ

- ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

About The Editor
ನಿತಿನ್ ಆರ್.ಕೈದೊಟ್ಲು
















