ಶಿವಮೊಗ್ಗದಲ್ಲಿ ಭಾನುವಾರ ಕರ್ಫ್ಯೂ, ಹೇಗಿದೆ? ಜನ, ವಾಹನ ಸಂಚಾರ ಇದೆಯಾ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 5 ಜುಲೈ 2020

ಸಂಡೆ ಕರ್ಫ್ಯೂ ಹಿನ್ನೆಲೆಯಲ್ಲಿ ಶಿವಮೊಗ್ಗದ ಪ್ರಮುಕ ರಸ್ತೆಗಳು ಜನ ಮತ್ತು ವಾಹನ ಸಂಚಾರವಿಲ್ಲದೆ ಬಿಕೋ ಅನ್ನುತ್ತಿವೆ. ನಗರದ ಪ್ರಮುಖ ರಸ್ತೆಗಳಲ್ಲಿ ಬ್ಯಾರಿಕೇಡ್ ಹಾಕಿದ್ದರಿಂದ ವಾಹನ ಸಂಚಾರ ಕಡಿಮೆಯಿದೆ.

106989820 1159139831114102 8587642953311291735 n.jpg? nc cat=100& nc sid=110474& nc ohc=b0S 6X0KKrQAX9OAy7F& nc ht=scontent.fblr11 1

ಯಾವ್ಯಾವ ರಸ್ತೆಯಲ್ಲಿ ಹೇಗಿದೆ?

ಬಿ.ಹೆಚ್.ರೋಡ್ | ನಗರದ ಪ್ರಮುಖ ರಸ್ತೆ. ವಾಹನ ಮತ್ತು ಜನ ಸಂಚಾರ ವಿರಳ. ಅಗತ್ಯ ಸೇವೆಗಳನ್ನು ಪೂರೈಸುವ ಸಿಲಿಂಡರ್ ಲಾರಿಗಳು, ಹಾಲಿನ ವಾಹನಗಳು ನಿರಂತರ ಸಂಚರಿಸುತ್ತಿವೆ. ಕೆಲವು ಕಾರುಗಳು, ದ್ವಿಚಕ್ರ ವಾಹನಗಳು ಸಂಚರಿಸುತ್ತವೆ.

ಸಾಗರ ರಸ್ತೆ | ಸದಾ ವಾಹನ ದಟ್ಟಣೆಯಿಂದ ಕೂಡಿರುತ್ತಿದ್ದ ಸಾಗರ ರಸ್ತೆಯಲ್ಲಿ ಬೆರಳಣಿಕೆಯಷ್ಟು ವಾಹನಗಳು ಮಾತ್ರ ಸಂಚರಿಸುತ್ತಿದ್ದವು. ಅನಗತ್ಯವಾಗಿ ಓಡಾಡುವವರನ್ನು ಪೊಲೀಸರು ತಪಾಸಣೆ ನಡೆಸುತ್ತಿದ್ದಾರೆ.

https://www.facebook.com/liveshivamogga/videos/2572458796339448/?t=0

ಗಾಂಧಿ ಬಜಾರ್ | ಪ್ರಮುಖ ವಹಿವಾಟು ಕ್ಷೇತ್ರ. ಕೆಲವು ತರಕಾರಿ ಅಂಗಡಿಗಳು, ದಿನಸಿ ಅಂಗಡಿಗಳು ಬಾಗಿಲು ತೆಗೆಯಲಾಗಿತ್ತು.

ಹೂವಿನ ಮಾರುಕಟ್ಟೆ | ಕೆಲವು ವ್ಯಾಪಾರಿಗಳು ಹೂವಿನ ವ್ಯಾಪಾರ ನಡೆಸಿದರು. ಬೆಳಗ್ಗೆಯಿಂದಲೇ ವ್ಯಾಪಾರ ನಡೆಯುತ್ತಿತ್ತು.

106013857 1159134471114638 6455464285955500411 n.jpg? nc cat=105& nc sid=110474& nc ohc=AvV3ONOID74AX 9MiuI& nc ht=scontent.fblr11 1

ನೆಹರೂ ರೋಡ್ | ಇಲ್ಲಿ ಯಾವುದೇ ಅಂಗಡಿಗಳ ಬಾಗಿಲು ತೆಗೆದಿಲ್ಲ. ಎಲ್ಲವೂ ಬಂದ್ ಮಾಡಲಾಗಿದೆ.

ದುರ್ಗಿಗುಡಿ | ಬೆಳಗ್ಗೆಯಿಂದಲೂ ಬಹುತೇಕ ಅಂಗಡಿಗಳು ಬಂದ್ ಆಗಿವೆ. ತರಕಾರಿ, ಮಟನ್ ಅಂಗಡಿಗಳು ಮಾತ್ರ ತೆಗೆದಿದ್ದವು. ಹೊಟೇಲ್‍ಗಳಲ್ಲಿ ಪಾರ್ಸೆಲ್ ವ್ಯವಸ್ಥೆ ಇತ್ತು.

https://www.facebook.com/liveshivamogga/videos/591513685105891/?t=0

ಜೈಲ್ ರೋಡ್ | ಬೆಳಗ್ಗೆಯಿಂದಲೂ ಜನ ಮತ್ತು ವಾಹನ ಸಂಚಾರ ಹೆಚ್ಚಿತ್ತು. ಈ ರಸ್ತೆಯಲ್ಲಿ ಹಲವು ಮಟನ್ ಮತ್ತು ಚಿಕನ್ ಸ್ಟಾಲ್‍ಗಳಿವೆ. ಹಾಗಾಗಿ ಜನ ದಟ್ಟಣೆ ಹೆಚ್ಚಿದೆ.

ಹಂಡ್ರೆಡ್ ಫೀಟ್ ರೋಡ್ | ವಿನೋಬಗರದ ನೂರು ಅಡಿ ರಸ್ತೆಯಲ್ಲೂ ಜನ ಮತ್ತು ವಾಹನ ಸಂಚಾರ ನಿರಂತರವಾಗಿತ್ತು. ಇಲ್ಲಿಯೂ ಕೆಲವು ಅಗತ್ಯ ವಸ್ತು ಮಾರಾಟ ಮಾಡುವ ಅಂಗಡಿ ಬಾಗಿಲು ತೆಗೆದಿದ್ದವು.

ಸವಳಂಗ ರಸ್ತೆ | ಜನ, ವಾಹನ ಸಂಚಾರವಿತ್ತು. ಬಾಲರಾಜ್ ಅರಸ್ ರಸ್ತೆಗೆ ಸಂಪರ್ಕ ಕಲ್ಪಿಸುವ ಮಾರ್ಗದಲ್ಲಿ ಬ್ಯಾರಿಕೆಡ್ ಹಾಕಲಾಗಿದೆ. ರಸ್ತೆಯ ಕೆಲವು ಕಡೆ ಬ್ಯಾರಿಕೇಡ್ ಹಾಕಿ ಪೊಲೀಸರನ್ನು ನಿಯೋಜಿಸಲಾಗಿದೆ.

ಬಾಗಿಲು ಬಂದ್ ಮಾಡಿಸಿದ ಪೊಲೀಸ್

ಜನ ಸಂಚಾರ ನಿಯಂತ್ರಿಸಲು ಪೊಲೀಸರು ಫೀಲ್ಡಿಗಿಳಿದು ಅಂಗಡಿಗಳನ್ನು ಬಂದ್ ಮಾಡಿಸಿದರು. ಜೀಪ್‍ನಲ್ಲಿ ಮೈಕ್ ಮೂಲಕ ಅನೌನ್ಸ್ ಮಾಡಿ ಅಂಗಡಿಗಳ ಬಾಗಿಲು ಹಾಕಿಸಿದರು. ನಗರದ ವಿವಿಧೆಡೆ ಪೊಲೀಸರು ರಸ್ತೆಗಳನ್ನು ಬಂದ್ ಮಾಡಿ, ಅನಗತ್ಯವಾಗಿ ಓಡಾಡುವವರಿಗೆ ಕಡಿವಾಣ ಹಾಕುತ್ತಿದ್ದಾರೆ.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : July 5, 2020

ಆಗುಂಬೆ ಘಾಟಿಯಲ್ಲಿ ರಸ್ತೆಗೆ ಬಿದ್ದ ಮರ, ಕೆಲ ಹೊತ್ತು ಟ್ರಾಫಿಕ್‌ ಜಾಮ್

ಆಗುಂಬೆ ಘಾಟಿಯಲ್ಲಿ ರಸ್ತೆಗೆ ಬಿದ್ದ ಮರ, ಕೆಲ ಹೊತ್ತು ಟ್ರಾಫಿಕ್‌ ಜಾಮ್

ಕುಟುಂಬದ ಜೊತೆ ಊಟ ಮುಗಿಸಿ, ಮಾತನಾಡಿ ಮಲಗಲು ತೆರಳಿದ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಕುಟುಂಬದ ಜೊತೆ ಊಟ ಮುಗಿಸಿ, ಮಾತನಾಡಿ ಮಲಗಲು ತೆರಳಿದ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಶಿವಮೊಗ್ಗದಲ್ಲಿ ಶ್ರೀಕಾಂತಣ್ಣ ಕಪ್‌ ಕ್ರಿಕೆಟ್‌ ಪಂದ್ಯಾವಳಿ, ಟ್ರೋಫಿ, ಟೀ ಶರ್ಟ್‌ಗಳ ಅನಾವರಣ

ಶಿವಮೊಗ್ಗದಲ್ಲಿ ಶ್ರೀಕಾಂತಣ್ಣ ಕಪ್‌ ಕ್ರಿಕೆಟ್‌ ಪಂದ್ಯಾವಳಿ, ಟ್ರೋಫಿ, ಟೀ ಶರ್ಟ್‌ಗಳ ಅನಾವರಣ

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

Leave a Comment