ಶಿವಮೊಗ್ಗ ಲೈವ್.ಕಾಂ | SHIMOGA NEWS | 5 ಜುಲೈ 2020
ಶಿವಮೊಗ್ಗ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಇವತ್ತು ಸಿಟಿ ರೌಂಡ್ಸ್ ನಡೆಸಿದರು. ಭಾನುವಾರದ ಕರ್ಫ್ಯೂ ವ್ಯವಸ್ಥೆ ಕುರಿತು ಪರಿಶೀಲನೆ ನಡೆಸಿದರು.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಜಿಲ್ಲಾಧಿಕಾರಿ ಶಿವಕುಮಾರ್, ಮುಖ್ಯ ರಸ್ತೆಗಳಲ್ಲಿ ಜನ ಸಂಚಾರ ಕಡಿಮೆ ಇದೆ. ಆದರೆ ಕೆಲವು ಬಡಾವಣೆಗಳಲ್ಲಿ ಜನರು ಓಡಾಡುತ್ತಿದ್ದಾರೆ. ಇದು ನಿಯಂತ್ರಣಕ್ಕೆ ಬರಬೇಕಿದೆ. ಈ ಕುರಿತು ಜಿಲ್ಲಾ ರಕ್ಷಣಾಧಿಕಾರಿ ಅವರಿಗೆ ಸೂಚನೆ ನೀಡಿದ್ದೇನೆ ಎಂದು ತಿಳಿಸಿದರು.
ಟೀ ಕುಡಿತಿದ್ದವರಿಗೆ ವಾರ್ನಿಂಗ್
ಜಿಲ್ಲಾಧಿಕಾರಿ ಅವರು ನಗರದ ವಿವಿಧೆಡೆ ಪರಿಶೀಲನೆಗೆ ತೆರಳಿದಾಗ ಕೆಲವರು ಅನಗತ್ಯವಾಗಿ ಓಡಾಡುವುದು ಕಂಡು ಬಂದಿದೆ. ಅವರನ್ನು ನಿಲ್ಲಿಸಿ ಪ್ರಶ್ನಿಸಿದಾಗ ಕೆಲವರು ದೇವಸ್ಥಾನಕ್ಕೆ ಹೋಗುತ್ತಿರುವುದಾಗಿ ತಿಳಿಸಿದ್ದಾರೆ. ಇನ್ನೂ ಕೆಲವರು ತರಕಾರಿ ತರುವುದಕ್ಕೆ ಹೋಗುವುದಾಗಿ ಹೇಳಿದ್ದಾರೆ. ಇವರಿಗೆಲ್ಲ ಜಿಲ್ಲಾಧಿಕಾರಿ ಅವರು ತಿಳಿ ಹೇಳಿದ್ದಾರೆ. ಮತ್ತೊಂದೆಡೆ ಟೀ ಅಂಗಡಿ ಒಂದರಲ್ಲಿ ಜನರು ಟೀ ಕುಡಿಯುತ್ತ ಇದ್ದಿದ್ದನ್ನು ಗಮನಿಸಿದ ಡಿಸಿ, ಅಗತ್ಯ ಇದ್ದವರು ಮನೆಗೆ ಕೊಂಡೊಯ್ಯಬೇಕು ಎಂದು ಎಚ್ಚರಿಕೆ ನೀಡಿದ್ದಾರೆ.
ನಗರದ ವಿವಿಧೆಡೆ ತೆರಳಿದ ಜಿಲ್ಲಾಧಿಕಾರಿ, ರಸ್ತೆಯಲ್ಲಿ ಓಡಾಡುವವರನ್ನು ತಡೆದು ವಿಚಾರಣೆ ಮಾಡಿದ್ದಾರೆ. ಸುಮ್ಮನೆ ಒಡಾಡುವವರ ವಿರುದ್ಧ ಪ್ರಕರಣ ದಾಖಲು ಮಾಡಲಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]