ಶಿವಮೊಗ್ಗ ಲೈವ್.ಕಾಂ | SHIMOGA NEWS | 6 ಜುಲೈ 2020
ಶಿವಮೊಗ್ಗದಲ್ಲಿ ಕರೋನಾಗೆ ಮತ್ತೊಂದು ಬಲಿಯಾಗಿದೆ. ಮೃತ ಮಹಿಳೆಗೆ ಸೋಂಕು ತಗುಲಿತ್ತು ಎಂಬ ಶಂಕೆ ಇದೆ. ಈ ಪ್ರಕರಣ ಜಿಲ್ಲೆಯಲ್ಲಿ ಮತ್ತಷ್ಟು ಆತಂಕ ಮೂಡಿಸಿದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಶಿವಮೊಗ್ಗ ಸಿಟಿಯ ಸೀಗೆಹಟ್ಟಿಯ 68 ವರ್ಷದ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ. ಅವರು ಸಕ್ಕರೆ ಕಾಯಿಲೆಯಿಂದ ಬಳಲುತ್ತಿದ್ದರು. ಕಾಯಿಲೆ ಉಲ್ಬಣಗೊಂಡ ಹಿನ್ನೆಲೆ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.
ಮಹಿಳೆ ಶನಿವಾರ ಮೃತರಾಗಿದ್ದಾರೆ. ಅವರ ಗಂಟಲು ದ್ರವ ಪರೀಕ್ಷೆಗೆ ಮಾಡಲಾಗಿದ್ದು, ಸೋಂಕು ತಗುಲಿರುವ ಶಂಕೆ ವ್ಯಕ್ತವಾಗಿದೆ.
ಈವರೆಗೂ ನಾಲ್ಕು ಸಾವು ಆಗಿತ್ತು
ಕರೋನಾಗೆ ಶಿವಮೊಗ್ಗ ಜಿಲ್ಲೆಯಲ್ಲಿ ಈವರೆಗೂ ನಾಲ್ಕು ಮಂದಿ ಮೃತರಾಗಿದ್ದಾರೆ. ಜಿಲ್ಲೆಯ ಇಬ್ಬರು ಮತ್ತು ಹೊರ ಜಿಲ್ಲೆಯ ಇಬ್ಬರು ಶಿವಮೊಗ್ಗದಲ್ಲಿ ಕರೋನಾಗೆ ಬಲಿಯಾಗಿದ್ದಾರೆ. ಈಗ ಸೀಗೆಹಟ್ಟಿಯ ಮಹಿಳೆಗೆ ಸೋಂಕು ತಗುಲಿರುವ ಶಂಕೆ ಇರುವುದರಿಂದ ಮೃತರ ಸಂಖ್ಯೆ ಐದಕ್ಕೆ ಏರಿಕೆಯಾಗಲಿದೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]