ಶಿವಮೊಗ್ಗ ಲೈವ್.ಕಾಂ | BHADRAVATHI NEWS | 7 ಜುಲೈ 2020
ಎಂಪಿಎಂ ಕ್ವಾರ್ಟರ್ಸ್ನಲ್ಲಿ ನಗರಸಭೆ ವತಿಯಿಂದ ನಿರ್ಮಿಸಲಾಗಿರುವ ಅಂಗಡಿಗಳನ್ನು ತೆರವುಗೊಳಿಸುವಂತೆ, ಕಾರ್ಖಾನೆ ಆಡಳಿತ ಮಂಡಳಿ ವತಿಯಿಂದ ನೊಟೀಸ್ ನೀಡಲಾಗಿದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಕಾಗದ ನಗರದಲ್ಲಿ ಎಂಪಿಎಂ ವಸತಿ ಪ್ರದೇಶದಲ್ಲಿ ಭದ್ರಾವತಿ ನಗರಸಭೆ ವತಿಯಿಂದ ಕೆಲವು ಮಳಿಗೆಗಳನ್ನು ನಿರ್ಮಿಸಲಾಗಿದೆ. ಇವುಗಳನ್ನು ಬಾಡಿಗೆಗೆ ನೀಡಲಾಗಿದೆ. ಈಗ ಈ ಮಳಿಗೆಗಳನ್ನು ತೆರವು ಮಾಡುವಂತೆ ಸೂಚಿಸಲಾಗಿದೆ.
ಇತ್ತೀಚೆಗೆ ಸಚಿವ ಜಗದೀಶ್ ಶೆಟ್ಟರ್ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಅಂಗಡಿಗಳನ್ನು ತೆರವು ಮಾಡುವಂತೆ ಸೂಚಿಸಲಾಗಿತ್ತು. ಅದರಂತೆ ನೊಟೀಸ್ ಜಾರಿಗೊಳಿಸಲಾಗಿದೆ.
ಇನ್ನು, ಕಂದಾಯ ಅಧಿಕಾರಿಗಳು ವರದಿ ಸಿದ್ಧಪಡಿಸುವಂತೆ ಭದ್ರಾವತಿ ನಗರಸಭೆ ಆಯುಕ್ತರು ಸೂಚನೆ ನೀಡಿದ್ದಾರೆ. ವರದಿ ಬಳಿಕ ಶೀಘ್ರ ಕ್ರಮ ಕೈಗೊಳ್ಳಲು ತೀರ್ಮಾನಿಸಲಿದೆ. ಸದ್ಯ ಎಂಪಿಎಂ ವಸತಿ ಪ್ರದೇಶದಲ್ಲಿ ನಾಲ್ಕರಿಂದ ಐದು ಮಳಿಗೆಗಳಿವೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]