ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 7 ಜುಲೈ 2020
ಸಾಮಾಜಿಕ ಅಂತರ, ಕೋವಿಡ್ ನಿಯಂತ್ರಣ ಕುರಿತು ಸರ್ಕಾರದ ಮಾರ್ಗಸೂಚಿ ಪಾಲಿಸಬೇಕು ಅನ್ನುವ ಕಾರಣಕ್ಕೆ ಜಿಲ್ಲಾ ಕಾಂಗ್ರೆಸ್ ವತಿಯಿಂದ ಆನ್ ಲೈನ್ ಪತ್ರಿಕಾಗೋಷ್ಠಿ ಆಯೋಜಿಸಲಾಗಿತ್ತು. ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಆನ್ ಲೈನ್ ಮೂಲಕ ಪತ್ರಿಕಾಗೋಷ್ಠಿ ನಡೆಸಲಾಗಿದೆ.

ಆನ್ ಲೈನ್ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹೆಚ್.ಎಸ್.ಸುಂದರೇಶ್ ಅವರು, ಕರೋನಾದಿಂದಾಗಿ ರಾಜ್ಯ ಹಾಗೂ ದೇಶದಲ್ಲಿ ಜನ ಸಂಕಷ್ಟ ಅನುಭವಿಸುತ್ತಿದ್ದಾರೆ. ಕರೋನಾದ ಸಂದರ್ಭದಲ್ಲಿಯೂ ಪಿಪಿಇ ಕಿಟ್ ಹಾಗೂ ಔಷಧ ಖರೀದಿಯಲ್ಲಿ ಆರೋಗ್ಯ ಸಚಿವರು ಹಾಗೂ ವೈದ್ಯಕೀಯ ಶಿಕ್ಷಣ ಸಚಿವರು ಭ್ರಷ್ಟಾಚಾರ ನಡೆಸಿದ್ದು, ಅವರನ್ನು ಕೂಡಲೇ ಸಂಪುಟದಿಂದ ಕೈಬಿಡಬೇಕು ಎಂದು ಆಗ್ರಹಿಸಿದರು.
ಕಳಪೆ ದರ್ಜೆಯ ಪಿಪಿಇ ಕಿಟ್ ಗಳನ್ನು ಖರೀದಿ ಮಾಡಿ ಭ್ರಷ್ಟಾಚಾರ ನಡೆಸಲಾಗಿದೆ. ಇದನ್ನು ಕ್ಷಮಿಸಲು ಸಾಧ್ಯವೇ. ಇದೊಂದು ಹೇಯ ಕೃತ್ಯ ಎಂದು ಆಕ್ರೋಶ ವ್ಯಕ್ತಪಡಿಸಿದರು. ಯಾವ ರಾಜ್ಯದಲ್ಲಿ ಬಿಜೆಪಿ ಅಧಿಕಾರದಲ್ಲಿದೆಯೋ ಅಲ್ಲಿ ಕರೋನಾ ರಣಕೇಕೆ ಹೆಚ್ಚಾಗುತ್ತಿದೆ ಎಂದು ಆರೋಪಿಸಿದರು.
ಇದು ಬಿಜೆಪಿಯವರಿಗೆ ಜನರ ಬಗ್ಗೆ ಇರುವ ಕಾಳಜಿ ತೋರಿಸುತ್ತಿದೆ. ಕೂಡಲೇ ಸರ್ಕಾರ ಪ್ರತಿ ಜಿಲ್ಲೆಗಳಿಗೆ ಕನಿಷ್ಟ 20 ಆಂಬುಲೆನ್ಸ್ಗಳ ವ್ಯವಸ್ಥೆ ಮಾಡಬೇಕು. ಕರೋನಾ ಚಿಕಿತ್ಸೆ ವೆಚ್ಚವನ್ನು ಸರ್ಕಾರವೇ ಭರಿಸಬೇಕು ಎಂದು ಆಗ್ರಹಿಸಿದರು.
ಜನ ಒಟ್ಟಿಗೆ ಸೇರಬಾರದು ಎಂಬ ಕಾರಣಕ್ಕೆ ಇನ್ನು ಮುಂದೆ ಪತ್ರಿಕಾಗೋಷ್ಟಿ ಹಾಗೂ ಕಾಂಗ್ರೆಸ್ ಕಾರ್ಯಕ್ರಮಗಳನ್ನು ಆನ್ಲೈನ್ ಮೂಲಕವೇ ನಡೆಸಲಾಗುವುದು ಎಂದರು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು






