ಶಿವಮೊಗ್ಗ ಲೈವ್.ಕಾಂ | SHIMOGA NEWS | 8 ಜುಲೈ 2020
ಕರೋನ ಸೋಂಕು ಹರಡುವುದನ್ನು ತಡೆಯುವ ಸಲುವಾಗಿ ಶಿವಮೊಗ್ಗದ ಬಟ್ಟೆ ಮಾರ್ಕೆಟ್ ಬಂದ್ ಮಾಡಲಾಗಿದೆ. ಸಿನಿಮಾ ರಸ್ತೆಯಲ್ಲಿರುವ ಬಟ್ಟೆ ಮಾರ್ಕೆಟನ್ನು ತಾತ್ಕಾಲಿಕವಾಗಿ ಬಂದ್ ಮಾಡಲು ವ್ಯಾಪಾರಿಗಳು ಸ್ವಯಂ ಪ್ರೇರಿತವಾಗಿ ನಿರ್ಧಾರಿಸಿದ್ದಾರೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಇವತ್ತಿಂದಲೇ ಬಟ್ಟೆ ಮಾರ್ಕೆಟ್ ಬಂದ್ ಆಗಿದೆ. ಜುಲೈ 12ರವರೆಗೆ ಮಾರುಕಟ್ಟೆಯಲ್ಲಿ ಯಾವುದೇ ವ್ಯಾಪಾರ ನಡೆಯುವುದಿಲ್ಲ. ಜುಲೈ 13ರಿಂದ ವ್ಯಾಪಾರ ಶುರುವಾಗಲಿದೆ ಎಂದು ಬಟ್ಟೆ ಮಾರುಕಟ್ಟೆ ಜವಳಿ ವರ್ತಕರ ಸಂಘದ ಅಧ್ಯಕ್ಷ ಶಿವಕುಮಾರ್ ಶಿವಮೊಗ್ಗ ಲೈವ್.ಕಾಂಗೆ ತಿಳಿಸಿದ್ದಾರೆ.
ಬಟ್ಟೆ ಮಾರುಕಟ್ಟೆಯಲ್ಲಿ ಸುಮಾರು 300 ಮಳಿಗೆಗಳಿವೆ. ಬಟ್ಟೆ ಖರೀದಿಗೆ ಇಲ್ಲಿ ದೊಡ್ಡ ಸಂಖ್ಯೆಯಲ್ಲಿ ಜನರು ಬರುತ್ತಾರೆ. ಈಗಾಗಲೇ ಮಾರುಕಟ್ಟೆಯ ಸುತ್ತಲು ಒಂದೆರಡು ಬೀದಿಗಳು ಸೀಲ್ ಡೌನ್ ಆಗಿದೆ. ಹಾಗಾಗಿ ಮುನ್ನೆಚ್ಚರಿಕೆ ಕ್ರಮವಾಗಿ ಮಾರುಕಟ್ಟೆಯನ್ನು ಬಂದ್ ಮಾಡಲು ವರ್ತಕರು ಸ್ವಯಂ ನಿರ್ಧಾರ ಕೈಗೊಂಡಿದ್ದಾರೆ.
ಮಾರಾಟ ಪುನಾರಂಭದ ಬಳಿಕ ಮಾರುಕಟ್ಟೆಗೆ ಬರುವ ವರ್ತಕರು ಮತ್ತು ಗ್ರಾಹಕರಿಗೆ ಸ್ಯಾನಿಟೈಸರ್ ಮತ್ತು ಥರ್ಮಲ್ ಸ್ಕ್ಯಾನಿಂಗ್ ಕಡ್ಡಾಯಗೊಳಿಸಲಾಗುತ್ತದೆ ಎಂದು ಶಿವಕುಮಾರ್ ಸ್ಪಷ್ಪಪಡಿಸಿದರು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]