ಶಿವಮೊಗ್ಗ ಲೈವ್.ಕಾಂ | ANANDAPURA NEWS | 9 ಜುಲೈ 2020
ಅಕ್ಕಪಕ್ಕದ ಪಟ್ಟಣಗಳಲ್ಲಿ ಕರೋನ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಆನಂದಪುರದಲ್ಲಿ ಅರ್ಧದಿನ ಮಾತ್ರ ವ್ಯಾಪಾರಕ್ಕೆ ಅವಕಾಶ ನೀಡಬೇಕು ಎಂದು ಒತ್ತಾಯಿಸಿ ಗ್ರಾಮಸ್ಥರು ಗ್ರಾಮ ಪಂಚಾಯಿತಿಗೆ ಮನವಿ ಸಲ್ಲಿಸಿದ್ದಾರೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಸಾಗರ, ರಿಪ್ಪನ್ಪೇಟೆ, ಶಿಕಾರಿಪುರ, ಸೊರಬ, ಹೊಸನಗರದಲ್ಲಿ ಪ್ರತಿನಿತ್ಯ ಕರೋನ ಪಾಸಿಟಿವ್ ಪ್ರಕರಣಗಳು ಪತ್ತೆಯಾಗುತ್ತಿವೆ. ಹಾಗಾಗಿ ಆನಂದಪುರದಲ್ಲಿ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕಿದೆ. ಬೆಳಗ್ಗೆ 8 ರಿಂದ ಮಧ್ಯಾಹ್ನ 3 ಗಂಟೆವರೆಗೆ ಮಾತ್ರೆ ವ್ಯಾಪಾರಕ್ಕೆ ಅವಕಾಶ ಕಲ್ಪಿಸಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.
ಗ್ರಾಮ ಪಂಚಾಯಿತಿ ಆಡಳಿತಾಧಿಕಾರಿ ಡಾ.ಮೋಹನ್ ಮತ್ತು ಪಿಡಿಒ ಇಂದಿರಾಜ್ಯೋತಿ ಅವರಿಗೆ ಮನವಿ ಸಲ್ಲಿಸಿದರು. ವರ್ತಕ ಶ್ರೀಕಾಂತ್, ಭರತ್, ಅಶೋಕ್, ಎಂ.ಎಸ್.ರಾಘವೇಂದ್ರ, ಮದನ್, ಚಂದ್ರಶೇಖರ್ ಇದ್ದರು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]