ಶಿವಮೊಗ್ಗ ಲೈವ್.ಕಾಂ | SHIKARIPURA NEWS | 10 ಜುಲೈ 2020
ಕಳ್ಳನೊಬ್ಬನಿಗೆ ಕರೋನ ಸೋಂಕು ತಗುಲಿದ್ದು ಆತನನ್ನು ಹಿಡಿದು ತಂದ ಮೂವರು ಪೊಲೀಸರು ಕ್ವಾರಂಟೈನ್ಗೆ ಒಳಗಾಗಿದ್ದಾರೆ. ಪೊಲೀಸ್ ಠಾಣೆಯನ್ನು ಸ್ಯಾನಿಟೈಸ್ ಮಾಡಲಾಗಿದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಕಳ್ಳನನ್ನು ಹೊನ್ನಾಳಿಯಿಂದ ಬಂಧಿಸಿ ಶಿಕಾರಿಪುರ ಠಾಣೆಗೆ ಕರೆದುಕೊಂಡು ಬಂದು ವಿಚಾರಣೆ ನಡೆಸಿ, ನ್ಯಾಯಾಲಯಕ್ಕೆ ಹಾಜರುಪಡಿಸಲು ಸಿದ್ಧತೆ ನಡೆಸಿದ್ದರು. ಇದಕ್ಕೂ ಮೊದಲು ಆರೋಗ್ಯ ತಪಾಸಣೆಗೆ ಕರೆದೊಯ್ಯಲಾಗಿತ್ತು.
ಈ ವೇಳೆ ಸ್ವ್ಯಾಬ್ ಟೆಸ್ಟ್ ಮಾಡಲಾಗಿತ್ತು. ಕಳ್ಳನಿಗೆ ಕರೋನ ಪಾಸಿಟಿವ್ ಬಂದಿದೆ. ಹಾಗಾಗಿ ಮೂವರು ಪೊಲೀಸರನ್ನು ಕ್ವಾರಂಟೈನ್ಗೆ ಕಳುಹಿಸಲಾಗಿದೆ. ಶಿಕಾರಿಪುರ ಟೌನ್ ಪೊಲೀಸ್ ಠಾಣೆಯನ್ನು ಸ್ಯಾನಿಟೈಸ್ ಮಾಡಲಾಗಿದೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]