ಶಿವಮೊಗ್ಗ ಲೈವ್.ಕಾಂ | SHIMOGA NEWS | 10 ಜುಲೈ 2020
ಪ್ರತಿ ತಿಂಗಳು 12,000 ರೂ. ಗೌರವಧನ ನೀಡುವುದು ಸೇರಿದಂತೆ ಪ್ರಮುಖ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರು ಕರ್ತವ್ಯ ಬಹಿಷ್ಕರಿಸಿ ಇವತ್ತಿನಿಂದ ಪ್ರತಿಭಟನೆ ಆರಂಭಿಸಿದ್ದಾರೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ನೇತೃತ್ವದಲ್ಲಿ ಶಿವಮೊಗ್ಗ ಜಿಲ್ಲೆಯ 1324 ಆಶಾ ಕಾರ್ಯಕರ್ತೆಯರು ಇಂದಿನಿಂದ ಕರ್ತವ್ಯ ಬಹಿಷ್ಕರಿಸಿದ್ದು, ಸರ್ಕಾರ ಬೇಡಿಕೆ ಈಡೇರಿಸುವವರೆಗೂ ಕರ್ತವ್ಯಕ್ಕೆ ಹಾಜರಾಗದಿರಲು ನಿರ್ಧರಿಸಿದ್ದಾರೆ.
ಇತ್ತೀಚಿಗೆ ಕೇಂದ್ರ ಆರೋಗ್ಯ ಸಚಿವಾಲಯ ಕೊರೋನಾ ವಿರುದ್ಧದ ಹೋರಾಟದಲ್ಲಿ ಕರ್ನಾಟಕ ಉತ್ತಮ ಸಾಧನೆ ಮಾಡಿರುವುದಕ್ಕೆ ಆಶಾ ಕಾರ್ಯಕರ್ತೆಯರ ಕೊಡುಗೆ ಅಪಾರ ಎಂದು ಮೆಚ್ಚುಗೆ ವ್ಯಕ್ತಪಡಿಸಿದೆ. ಆಶಾ ಕಾರ್ಯಕರ್ತೆಯರು ರಾಜ್ಯದಾದ್ಯಂತ ಮನೆಮನೆಗೆ ತೆರಳಿ ಸಮೀಕ್ಷೆ ನಡೆಸಿ, ಅಂತರ ರಾಜ್ಯ ಪ್ರಯಾಣಿಕರು, ವಲಸೆ ಕಾರ್ಮಿಕರು ಮತ್ತು ಇತರನ್ನು ಗುರುತಿಸಿ ಸೋಂಕು ಪತ್ತೆ ಮಾಡುವಲ್ಲಿ ಸಕ್ರೀಯವಾಗಿ ಕೆಲಸ ಮಾಡಿದ್ದಾರೆ. ಆದರೇ ಸರ್ಕಾರ ಅವರಿಗೆ ಸರಿಯಾದ ಗೌರವಧನವನ್ನು ಸಹ ನೀಡುತ್ತಿಲ್ಲ ಎಂದು ಆರೋಪಿಸಿದರು.
ಕೋವಿಡ್ – 19 ವಿರುದ್ಧದ ಹೋರಾಟಕ್ಕೆ ಅಗತ್ಯವಿರುವಷ್ಟು ಸುರಕ್ಷತಾ ಸಾಮಗ್ರಿಗಳನ್ನು ನೀಡುತ್ತಿಲ್ಲ. ಸೋಂಕಿತರ ನಡುವೆ ದಿನ ನಿತ್ಯವೂ ಆಶಾ ಕಾರ್ಯಕರ್ತೆಯರು ಜೀವ ಭಯದಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಅವರ ಆರೋಗ್ಯ ರಕ್ಷಣೆಯ ಜವಾಬ್ದಾರಿ ಸರ್ಕಾರದ್ದಾಗಿದೆ. ಈ ಹಿನ್ನಲೆಯಲ್ಲಿ ರಾಜ್ಯ ಸರ್ಕಾರ ಆಶಾ ಕಾರ್ಯಕರ್ತೆಯರಿಗೆ ಸೂಕ್ತ ಗೌರವಧನ ನೀಡುವ ಜತೆಗೆ ಎಲ್ಲಾ ಬೇಡಿಕೆಗಳನ್ನು ತಕ್ಷಣವೇ ಈಡೇರಿಸಬೇಕು ಎಂದು ಜಿಲ್ಲಾ ಆರೋಗ್ಯಾಧಿಕಾರಿಗಳ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದಾರೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]