ಶಿವಮೊಗ್ಗ ಲೈವ್.ಕಾಂ | SHIMOGA NEWS | 11 ಜುಲೈ 2020
ಕರೋನ ಸೋಂಕು ಹರಡುವುದನ್ನು ತಡೆಯುವ ಸಲುವಾಗಿ ಶಿವಮೊಗ್ಗದ ಗಾಂಧಿ ಬಜಾರ್ನಲ್ಲಿ ವರ್ತಕರು ಸ್ವಯಂ ಪ್ರೇರಿತವಾಗಿ ಬಂದ್ ಮಾಡಲು ನಿರ್ಧರಿಸಿದ್ದಾರೆ. ಜುಲೈ 12ರಿಂದ ಪ್ರತಿದಿನ ಮಧ್ಯಾಹ್ನ 3 ಗಂಟೆಯ ಬಳಿಕ ಗಾಂಧಿ ಬಜಾರ್ನಲ್ಲಿ ಬಂದ್ ಮಾಡಲು ನಿರ್ಧರಿಸಲಾಗಿದೆ.
ಒಂದು ತಿಂಗಳು ಸ್ವಯಂ ನಿರ್ಬಂಧ
ಕೋರನ ಹಿನ್ನೆಲೆಯಲ್ಲಿ ಗಾಂಧಿ ಬಜಾರ್ನ ವರ್ತಕರು ಸ್ವಯಂ ನಿರ್ಬಂಧಕ್ಕೆ ನಿರ್ಧಿರಿಸಿದ್ದಾರೆ. ಜುಲೈ 13 ರಿಂದ ಆಗಸ್ಟ್ 12ರವರೆಗೆ ಮಧ್ಯಾಹ್ನ 3 ಗಂಟೆಯ ಬಳಿಕ ಗಾಂಧಿ ಬಜಾರ್ನ ಎಲ್ಲ ಅಂಗಡಿಗಳನ್ನು ಬಂದ್ ಮಾಡಲು ನಿರ್ಧರಿಸಲಾಗಿದೆ ಎಂದು ವರ್ತಕರ ಸಂಘದ ಅಧ್ಯಕ್ಷ ವಿಜಯ್ ಕುಮಾರ್ ದಿನಕರ್ ತಿಳಿಸಿದ್ದಾರೆ.
ಔಷಧಿ, ಹಾಲು ಇರತ್ತೆ, ಫುಟ್ ಪಾತ್ ವ್ಯಾಪರವಿಲ್ಲ
ಸ್ವಯಂ ನಿರ್ಬಂಧ ವಿಧಿಸಿಕೊಂಡರೂ, ಗಾಂಧಿ ಬಜಾರ್ನಲ್ಲಿ ಔಷಧಿ ಮತ್ತು ಹಾಲು ಮಾರಾಟಕ್ಕೆ ಅವಕಾಶ ಇರಲಿದೆ. ಅಗತ್ಯ ವಸ್ತುಗಳಾಗಿರೋದರಿಂದ ಹಾಲು ಮತ್ತು ಓಷಧ ಮಾರಾಟ ಮಾಡುವ ಅಂಗಡಿಗಳ ಬಾಗಿಲು ತೆಗೆಯಲಾಗುತ್ತದೆ ಎಂದು ವಿಜಯ್ ಕುಮಾರ್ ದಿನಕರ್ ಸ್ಪಷ್ಟಪಡಿಸಿದ್ದಾರೆ. ಮತ್ತೊಂದೆಡೆ ಫುಟ್ ಪಾತ್ ವ್ಯಾಪಾರವನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ ಎಂದು ತಿಳಿಸಿದರು.
ಸಂತೆಯೂ ಬಂದ್
ಗಾಂಧಿ ಬಜಾರ್ನಲ್ಲಿ ಪ್ರತಿ ಮಂಗಳವಾರ ಸಂತೆ ನಡೆಯುತ್ತದೆ. ಆದರೆ ಸ್ವಯಂ ನಿರ್ಬಂಧದ ಕಾರಣ ಸಂತೆ ನಡೆಸುವುದಕ್ಕೆ ಅವಕಾಶವಿಲ್ಲ. ಸಂತೆಯನ್ನು ಕಡ್ಡಾಯವಾಗಿ ರದ್ದುಪಡಿಸಲಾಗಿದೆ. ಇನ್ನು, ಗಾಂಧಿ ಬಜಾರ್ನಲ್ಲಿ ಪ್ರತಿ ಅಂಗಡಿಯವರು ಮಾಸ್ಕ್ ಮತ್ತು ಸ್ಯಾನಿಟೈಸರ್ ಕಡ್ಡಾಯಗೊಳಿಸಲಾಗಿದೆ ಎಂದು ತಿಳಿಸಿದರು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
- ಶಿವಮೊಗ್ಗದ ಒಂದು ರೈಲು ಎರಡು ದಿನ ಭಾಗಶಃ ರದ್ದು, ಕಾರಣವೇನು?
- ಅಡಿಕೆ ಧಾರಣೆ | 20 ಜನವರಿ 2025 | ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್?
- ಮೆಗ್ಗಾನ್ ಆಸ್ಪತ್ರೆ ಬಳಿ ATMನಲ್ಲಿ ಹಣ ಬಿಡಿಸಿದ ರೈತ, ಮರುದಿನ ಕಾದಿತ್ತು ಆಘಾತ, ಆಗಿದ್ದೇನು?
- ಕುವೆಂಪು ವಿವಿಯಿಂದ ಮೂವರಿಗೆ ಗೌರವ ಡಾಕ್ಟರೇಟ್, ಯಾರಿಗೆಲ್ಲ ಪ್ರದಾನ ಮಾಡಲಾಗ್ತಿದೆ?
- ಶಿವಮೊಗ್ಗ ಜಿಲ್ಲೆ, ಇವತ್ತು ಯಾವ್ಯಾವ ತಾಲೂಕಿನಲ್ಲಿ ಎಷ್ಟಿರುತ್ತೆ ತಾಪಮಾನ?
- ಮಕ್ಕಳಿಗೆ ಚಿನ್ನದ ಸರ ಹಾಕುವ ಪೋಷಕರೆ ಹುಷಾರ್, ಶಿವಮೊಗ್ಗದಲ್ಲಿ ಎರಡು ಪ್ರತ್ಯೇಕ ಕೇಸ್ ದಾಖಲು