ಶಿವಮೊಗ್ಗ ಲೈವ್.ಕಾಂ | SHIMOGA NEWS | 12 ಜುಲೈ 2020
ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತು ಒಂದೇ ದಿನ 56 ಮಂದಿಗೆ ಕರೋನ ಪಾಸಿಟಿವ್ ದೃಢವಾಗಿದೆ. ಈ ನಡುವೆ ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 500ರ ಗಡಿ ದಾಟಿದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಇವತ್ತು ಬಿಡುಗಡೆಯಾಗಿರುವ ಜಿಲ್ಲಾ ಹೆಲ್ತ್ ಬುಲೆಟಿನ್ ಪ್ರಕಾರ, ಶಿವಮೊಗ್ಗ ಜಿಲ್ಲೆಯಲ್ಲಿ 56 ಮಂದಿಗೆ ಪಾಸಿಟಿವ್ ಬಂದಿದೆ. ಇದರಿಂದ ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 541ಕ್ಕೆ ಏರಿಕೆ ಆಗಿದೆ.
170 ಸ್ಯಾಂಪಲ್ ಸಂಗ್ರಹ
ಶಿವಮೊಗ್ಗ ಜಿಲ್ಲೆಯಲ್ಲಿ ಈವರೆಗೂ 20,845 ಮಂದಿ ಸ್ವ್ಯಾಬ್ ಟೆಸ್ಟ್ ಮಾಡಲಾಗಿದೆ. ಇವತ್ತು 170 ಮಂದಿ ಪರೀಕ್ಷೆಗೆ ಒಳಗಾಗಿದ್ದಾರೆ. ಈ ಪೈಕಿ 19,146 ಮಂದಿಯ ವರದಿಯ ನೆಗೆಟಿವ್ ಬಂದಿದೆ. ಇವತ್ತು 218 ಮಂದಿಯ ವರದಿ ನೆಗೆಟಿವ್ ಬಂದಿದೆ.
18 ಮಂದಿ ಗುಣ, ಮನೆಗೆ
ಶಿವಮೊಗ್ಗದಲ್ಲಿ ಇವತ್ತು 18 ಮಂದಿ ಗುಣವಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇವರನ್ನು ಹೋಂ ಕ್ವಾರಂಟೈನ್ಗೆ ಒಳಪಡಿಸಲಾಗಿದೆ. ಈವರೆಗೂ ಜಿಲ್ಲೆಯಲ್ಲಿ 198 ಮಂದಿಯಷ್ಟೇ ಗುಣವಾಗಿ ಬಿಡುಗಡೆಯಾಗಿದ್ದಾರೆ.
334 ಮಂದಿಗೆ ಚಿಕಿತ್ಸೆ
ಜಿಲ್ಲೆಯಲ್ಲಿ ಈಗ 144 ಮಂದಿಗೆ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನಡೆಯುತ್ತಿದೆ. ಖಾಸಗಿ ಆಸ್ಪತ್ರೆಯಲ್ಲಿ 8 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನು, ಕೋವಿಡ್ ಕೇರ್ ಸೆಂಟರ್ಗಳಲ್ಲಿ 182 ಮಂದಿಯನ್ನು ಐಸೊಲೇಷನ್ ಮಾಡಲಾಗಿದೆ.
18 ಕಡೆ ಕಂಟೈನ್ಮೆಂಟ್ ಜೋನ್ ವಾಪಸ್
ಜಿಲ್ಲೆಯಲ್ಲಿ 124 ಕಡೆ ಕಂಟೈನ್ಮೆಂಟ್ ಜೋನ್ ರಚಿಸಲಾಗಿದೆ. ಈ ಭಾಗದಲ್ಲಿ ನೂರು ಮೀಟರ್ ವ್ಯಾಪ್ತಿಯಲ್ಲಿ ಬ್ಯಾರಿಕೇಡ್ ಹಾಕಲಾಗಿದೆ. 18 ಕಡೆ ಕಂಟೈನ್ಮೆಂಟ್ ಜೋನ್ಗಳನ್ನು ಮುಕ್ತಗೊಳಿಸಲಾಗಿದೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]