ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 13 ಜುಲೈ 2020
ಶಿವಮೊಗ್ಗ ಜಿಲ್ಲೆಯಲ್ಲಿ ಕರೋನ ಸೋಂಕಿತರ ಸಂಖ್ಯೆ ಹೆಚ್ಚಳವಾದಂತೆ ಕಂಟೈನ್ಮೆಂಟ್ ಜೋನ್ಗಳ ಸಂಖ್ಯೆಯಲ್ಲೂ ಏರಿಕೆ ಆಗಿದೆ. ಜಿಲ್ಲೆಯಲ್ಲಿ ಒಟ್ಟು ಕಂಟೈನ್ಮೆಂಟ್ ಜೋನ್ಗಳ ಸಂಖ್ಯೆ 124ಕ್ಕೆ ಏರಿಕೆಯಾಗಿದೆ.
ಭಾನುವಾರ ಶಿವಮೊಗ್ಗ ನಗರದ ಪ್ರಮುಖ ರಸ್ತೆಗಳಲ್ಲಿ ಸೀಲ್ ಡೌನ್ ಮಾಡಲಾಗಿದೆ. ಚನ್ನಪ್ಪ ಲೇಔಟ್ ಮೊದಲ ಅಡ್ಡರಸ್ತೆ, ಶರಾವತಿ ನಗರ ಎ ಬ್ಲಾಕ್ನ 6ನೇ ಕ್ರಾಸ್, ಹೊಸಮನೆ 1ನೇ ಕ್ರಾಸ್ ಸೇರಿದಂತೆ ವಿವಿಧೆಡೆ ಕಂಟೈನ್ಮೆಂಟ್ ಜೋನ್ ರಚಿಸಲಾಗಿದೆ.
ಈ ಕಂಟೈನ್ಮೆಂಟ್ ಜೋನ್ಗಳಲ್ಲಿ ಮಹಾನಗರ ಪಾಲಿಕೆ ವತಿಯಿಂದ ಸಂಪೂರ್ಣವಾಗಿ ಸ್ಯಾನಿಟೈಸ್ ಮಾಡಲಾಗಿದೆ. ಪೊಲೀಸರು ಬ್ಯಾರಿಕೇಡ್ಗಳನ್ನು ಅಳವಡಿಸಿದ್ದು, ನೂರು ಮೀಟರ್ ವ್ಯಾಪ್ತಿಯಲ್ಲಿ ಯಾರೂ ಸಂಚರಿಸದಂತೆ ಸೂಚಿಸಲಾಗಿದೆ.
ಜಿಲ್ಲೆಯಲ್ಲಿ ಈವರೆಗೂ 124 ಕಂಟೈನ್ಮೆಂಟ್ ಜೋನ್ ರಚಿಸಲಾಗಿದ್ದು, ಈವರೆಗೂ 18 ಕಡೆ ಕಂಟೈನ್ಮೆಂಟ್ ಜೋನ್ಗಳನ್ನು ತೆರವು ಮಾಡಲಾಗಿದೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
LATEST NEWS
- ಆಗುಂಬೆ ಘಾಟಿಯಲ್ಲಿ ರಸ್ತೆಗೆ ಬಿದ್ದ ಮರ, ಕೆಲ ಹೊತ್ತು ಟ್ರಾಫಿಕ್ ಜಾಮ್

- ಕುಟುಂಬದ ಜೊತೆ ಊಟ ಮುಗಿಸಿ, ಮಾತನಾಡಿ ಮಲಗಲು ತೆರಳಿದ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

- ಶಿವಮೊಗ್ಗದಲ್ಲಿ ಶ್ರೀಕಾಂತಣ್ಣ ಕಪ್ ಕ್ರಿಕೆಟ್ ಪಂದ್ಯಾವಳಿ, ಟ್ರೋಫಿ, ಟೀ ಶರ್ಟ್ಗಳ ಅನಾವರಣ

- ಸರ್ವೆಗೆ ಹೋದಾಗ ಇಂಜಿನಿಯರ್, ಸರ್ವೇಯರ್ ಮೇಲೆ ಕೋಲು, ಕಲ್ಲುಗಳಿಂದ ದಾಳಿ

- ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

About The Editor
ನಿತಿನ್ ಆರ್.ಕೈದೊಟ್ಲು
















