ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 13 ಜುಲೈ 2020
ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತು 21 ಮಂದಿಗೆ ಕರೋನ ಪಾಸಿಟಿವ್ ಬಂದಿದೆ ಎಂದು ಶಿವಮೊಗ್ಗ ಜಿಲ್ಲಾಡಳಿತ ಬಿಡುಗಡೆ ಮಾಡಿರುವ ಹೆಲ್ತ್ ಬುಲೆಟಿನ್‍ನಲ್ಲಿ ತಿಳಿಸಲಾಗಿದೆ. ಇದರಿಂದ ಒಟ್ಟು ಸೋಂಕಿತರ ವಿವರ 568ಕ್ಕೆ ಏರಿಕೆಯಾಗಿದೆ.
487 ಮಂದಿಗೆ ನೆಗೆಟಿವ್
ಇವತ್ತು ಪರಿಶೀಲನೆಗೆ ಒಳಪಡಿಸಿದ 487 ಮಂದಿಯ ಸ್ವ್ಯಾಬ್‍ಗಳ ರಿಪೋರ್ಟ್ ನೆಗೆಟಿವ್ ಬಂದಿದೆ. ಈವರೆಗು ಜಿಲ್ಲೆಯಲ್ಲಿ 21,298 ಮಂದಿ ಕರೋನ ಪರೀಕ್ಷೆ ಮಾಡಿಸಿಕೊಂಡಿದ್ದಾರೆ. ಈ ಪೈಕಿ 19,931 ಮಂದಿಗೆ ನೆಗೆಟಿವ್ ರಿಪೋರ್ಟ್ ಬಂದಿದೆ. ಇವತ್ತು 353 ಮಂದಿ ಕರೋನ ಪರೀಕ್ಷೆಗೆ ಒಳಗಾಗಿದ್ದಾರೆ.

29 ಮಂದಿ ಗುಣ
ಕರೋನ ಸೋಂಕಿನಿಂದ ಗುಣವಾಗುವವರ ಸಂಖ್ಯೆಯು ಹೆಚ್ಚಳವಾಗಿದೆ. ಜಿಲ್ಲೆಯಲ್ಲಿ ಇವತ್ತು 29 ಮಂದಿ ಸೋಂಕಿನಿಂದ ಗುಣವಾಗಿ ಮನೆಗೆ ತೆರಳಿದ್ದಾರೆ. ಹಾಗಾಗಿ ಜಿಲ್ಲೆಯಲ್ಲಿ ಒಟ್ಟು ಗುಣವಾದವರ ಸಂಖ್ಯೆ 227ಕ್ಕೆ ಏರಿಕೆಯಾಗಿದ್ದು, ಜನರು ನೆಮ್ಮದಿಯ ನಿಟ್ಟುಸಿರು ಬಿಡುವಂತೆ ಮಾಡಿದೆ.
331 ಮಂದಿಗೆ ಚಿಕಿತ್ಸೆ
ಶಿವಮೊಗ್ಗ ಜಿಲ್ಲೆಯಲ್ಲಿ 331 ಮಂದಿಗೆ ಇನ್ನೂ ಚಿಕಿತ್ಸೆ ನಡೆಯುತ್ತಿದೆ. ಈ ಪೈಕಿ 131 ಸೋಂಕಿತರು ಮೆಗ್ಗಾನ್ ಆಸ್ಪತ್ರೆಯಲ್ಲಿ, 192 ಮಂದಿ ಕೋವಿಡ್ ಕೇರ್ ಸೆಂಟರ್‍ಗಳಲ್ಲಿ ಮತ್ತು 8 ಮಂದಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಹತ್ತಕ್ಕೇರಿದ ಸಾವಿನ ಸಂಖ್ಯೆ
ಕರೋನ ಸೋಂಕಿನಿಂದ ಆಸ್ಪತ್ರೆಗೆ ದಾಖಲಾಗಿದ್ದ ಮತ್ತೊಬ್ಬ ವ್ಯಕ್ತಿ ಸಾವನ್ನಪ್ಪಿದ್ದಾರೆ. ಇದರಿಂದ ಜಿಲ್ಲೆಯಲ್ಲಿ ಒಟ್ಟು ಸಾವಿನ ಸಂಖ್ಯೆ 10ಕ್ಕೆ ಏರಿಕೆಯಾಗಿದೆ ಎಂದು ಜಿಲ್ಲಾಡಳಿತ ಬಿಡುಗಡೆ ಮಾಡಿರುವ ಹೆಲ್ತ್ ಬುಲೆಟಿನ್‍ನಲ್ಲಿ ತಿಳಿಸಲಾಗಿದೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
LATEST NEWS
- ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

- ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

- ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್ | 20 ಮಾರ್ಚ್ 2026 | ಅಡಿಕೆ ಧಾರಣೆ

- ಕಾರು, ಬೈಕ್ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

- ಉಷಾ ನರ್ಸಿಂಗ್ ಹೋಂ ಸಿಗ್ನಲ್‌ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್ ಡಿಟೇಲ್ಸ್

About The Editor
ನಿತಿನ್ ಆರ್.ಕೈದೊಟ್ಲು
















