ಶಿವಮೊಗ್ಗ ಲೈವ್.ಕಾಂ | SHIMOGA NEWS | 15 ಜುಲೈ 2020
ಶಿವಮೊಗ್ಗ ಜಿಲ್ಲೆಯಲ್ಲಿ ಕರೋನ ಸೋಂಕಿತರ ಸಂಖ್ಯೆ ಮತ್ತಷ್ಟು ಹೆಚ್ಚಳವಾಗುತ್ತಿದೆ. ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತು 46 ಮಂದಿಗೆ ಕರೋನ ಪಾಸಿಟಿವ್ ಬಂದಿದೆ. ಇದರಿಂದ ಒಟ್ಟು ಸೋಂಕಿತರ ಸಂಖ್ಯೆ 644ಕ್ಕೆ ಏರಿಕೆಯಾಗಿದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಯಾವ್ಯಾವ ತಾಲೂಕಲ್ಲಿ ಎಷ್ಟು ಸೋಂಕಿತರು?
ಶಿವಮೊಗ್ಗ ತಾಲೂಕಿನಲ್ಲಿ ಅತಿ ಹೆಚ್ಚು ಸೋಂಕಿತರು ಪತ್ತೆಯಾಗಿದ್ದಾರೆ. ಶಿವಮೊಗ್ಗ ತಾಲೂಕಿನಲ್ಲಿ 37, ಭದ್ರಾವತಿಯಲ್ಲಿ 5, ಸಾಗರದಲ್ಲಿ 1, ಶಿಕಾರಿಪುರದಲ್ಲಿ 3 ಪ್ರಕರಣಗಳು ಪತ್ತೆಯಾಗಿವೆ.
250 ಮಂದಿಗೆ ನೆಗೆಟಿವ್
ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತು 379 ಮಂದಿಯ ಗಂಟಲು ದ್ರವ ಪರೀಕ್ಷೆ ನಡೆಸಲಾಗಿದೆ. 250 ಮಂದಿಯ ವರದಿ ನೆಗೆಟಿವ್ ಬಂದಿದೆ. ಜಿಲ್ಲೆಯಲ್ಲಿ ಈವರೆಗೂ ಪರೀಕ್ಷೆಗೆ ಒಳಗಾದವರ ಸಂಖ್ಯೆ 22220ಗೆ ಏರಿಕೆಯಾಗಿದೆ. ನೆಗೆಟಿವ್ ಬಂದಿರುವವರ ಸಂಖ್ಯೆ 20511ಗೆ ಏರಿಕೆಯಾಗಿರುವುದು ನೆಮ್ಮದಿ ಮೂಡಿಸಿದೆ.
ಐವರು ಗುಣ, ಒಬ್ಬರು ಸಾವು
ಜಿಲ್ಲೆಯಲ್ಲಿ ಇವತ್ತು ಐವರು ಸೋಂಕಿತರು ಗುಣವಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇದರಿಂದ ಈವೆರೆಗೂ ಗುಣವಾದವರ ಸಂಖ್ಯೆ 244ಕ್ಕೆ ಹೆಚ್ಚಳವಾಗಿದೆ. ಮತ್ತೊಂದೆಡೆ ಇವತ್ತು ಮತ್ತೊಬ್ಬ ಸೋಂಕಿತರು ಮೃತರಾಗಿದ್ದು, ಸಾವಿನ ಸಂಖ್ಯೆ 12ಕ್ಕೆ ಏರಿಕೆಯಾಗಿದ್ದು, ಆತಂಕ ಮೂಡಿಸಿದೆ.
ಕೇರ್ ಸೆಂಟರ್‍ನಲ್ಲೇ ಹೆಚ್ಚಿನ ಮಂದಿಗೆ ಚಿಕಿತ್ಸೆ
ಜಿಲ್ಲೆಯ ಕೋವಿಡ್ ಆಸ್ಪತ್ರೆಯಲ್ಲಿ 165 ಮಂದಿಗೆ ಚಿಕಿತ್ಸೆ ನಡೆಯುತ್ತಿದೆ. 211 ಮಂದಿಗೆ ಕೋವಿಡ್ ಕೇರ್ ಸೆಂಟರ್‍ನಲ್ಲಿ ಚಿಕಿತ್ಸೆ ನಡೆಯುತ್ತಿದೆ. ಇನ್ನು, 12 ಮಂದಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಆಗುತ್ತಿದೆ. ಮತ್ತೊಂದೆಡೆ ಕಂಟೈನ್ಮೆಂಟ್ ಜೋನ್‍ಗಳ ಸಂಖ್ಯೆ 195ಕ್ಕೆ ಏರಿಕೆಯಾಗಿದೆ. ಈವೆರೆಗೂ ಡಿನೋಟಿಫೈ ಮಾಡಿರುವ ಕಂಟೈನ್ಮೆಂಟ್ ಜೋನ್‍ಗಳ ಸಂಖ್ಯೆ 31ಕ್ಕೆ ಹೆಚ್ಚಳವಾಗಿದೆ.
ರಾಜ್ಯ ಸರ್ಕಾರದ ಬುಲೆಟಿನ್ ಲೇಟ್ ಲೇಟ್
ರಾಜ್ಯ ಸರ್ಕಾರ ಬಿಡುಗಡೆಯ ಮಾಡುತ್ತಿರುವ ಹೆಲ್ತ್ ಬುಲೆಟಿನ್‍ನಲ್ಲಿ ಸೋಂಕಿತರ ವಿವರಗಳನ್ನ ತಡವಾಗಿ ಪ್ರಕಟಿಸಲಾಗುತ್ತಿದೆ. ಆದರೆ ಜಿಲ್ಲಾಡಳಿತ ಸಂಪೂರ್ಣ ಅಪ್‍ಡೇಟ್ ವರದಿ ಪ್ರಕಟಿಸುತ್ತಿದೆ. ಇದರಿಂದಾಗಿ ಜನರು ಗೊಂದಲಕ್ಕೀಡಾಗಿದ್ದಾರೆ. ಅಲ್ಲದೆ ಅನುಮಾನ ಮೂಡಿಸುತ್ತಿದೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]