ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 18 ಜುಲೈ 2020
ಶಿವಮೊಗ್ಗ ನಗರದಲ್ಲಿ ಹಾದು ಹೋಗಿರುವ ರಾಜಕಾಲುವೆಯು ಶಿಥಿಲಗೊಂಡಿದ್ದು, ಅದನ್ನೂ ಕೂಡಲೇ ರಿಪೇರಿ ಮಾಡಿಸಬೇಕು ಎಂದು ಒತ್ತಾಯಿಸಿ, ಯುವ ಕಾಂಗ್ರೆಸ್ ಕಾರ್ಯಕರ್ತರು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ‍್ವರಪ್ಪ ಅವರಿಗೆ ಮನವಿ ಸಲ್ಲಿಸಿದರು.

ಈ ರಾಜಕಾಲುವೆಯು ಶರಾವತಿ ನಗರದಿಂದ ಸವಳಂಗ ರಸ್ತೆಯ ಮೂಲಕ ಬಸವನಗುಡಿ, ಜಯನಗರದಲ್ಲಿ ಹಾದು ಹೋಗಿದೆ. ಇದು ಸಂಪೂರ್ಣ ಶಿಥಿಲಗೊಂಡಿದೆ. ಮಳೆ ಬಂದರೆ ಸುತ್ತಮುತ್ತಲ ಮನೆಗಳಿಗೆ ನೀರು ನುಗ್ಗಲಿದೆ. ಇದರಿಂದ ಆತಂಕಕ್ಕೀಡಾದ ಜನರು ಮನೆ ಖಾಲಿ ಮಾಡುತ್ತಿದ್ದಾರೆ.
ಕರೋನ ಸೋಂಕು ಭೀತಿಯಲ್ಲಿರುವ ಜನರಿಗೆ ಈ ರಾಜ ಕಾಲುವೆಯಿಂದ ಮತ್ತಷ್ಟು ಕಾಯಿಲೆಗಳು ಹರಡಬಹುದು ಎಂಬ ಆತಂಕವಿದೆ. ಇದೇ ಕಾರಣಕ್ಕೆ ಮಹಾನಗರ ಪಾಲಿಕೆ, ಜಿಲ್ಲಾಧಿಕಾರಿ ಸೇರಿ ಹಲವರಿಗೆ ಮನವಿ ಸಲ್ಲಿಸಲಗಿದೆ. ಆದರೂ ಯಾರೂ ಈ ಬಗ್ಗೆ ಗಮನ ವಹಿಸಿಲ್ಲ. ಕೂಡಲೇ ರಾಜಕಾಲುವೆ ಕುರಿತು ಗಮನ ವಹಿಸುವಂತೆ ಸಚಿವ ಈಶ್ವರಪ್ಪ ಅವರಿಗೆ ಮನವಿ ಮಾಡಿದರು.
ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಪ್ರವೀಣ್ ಕುಮಾರ್, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ರಂಗನಾಥ್, ಶಿವಮೊಗ್ಗ ನಗರಾಧ್ಯಕ್ಷ ಎಚ್ ಪಿ ಗಿರೀಶ್, ರಾಜ್ಯ ಕಾರ್ಯದರ್ಶಿ ಆರ್.ಕಿರಣ್, ಗ್ರಾಮಾಂತರ ಅಧ್ಯಕ್ಷ ನಿತಿನ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಿ.ಲೋಕೇಶ್ ಇತರರು ಇದ್ದರು.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
LATEST NEWS
- ಸರ್ವೆಗೆ ಹೋದಾಗ ಇಂಜಿನಿಯರ್, ಸರ್ವೇಯರ್ ಮೇಲೆ ಕೋಲು, ಕಲ್ಲುಗಳಿಂದ ದಾಳಿ

- ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

- ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

- ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್ ವಿಚಾರ

- ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್ ಅಪ್‌ಡೇಟ್

About The Editor
ನಿತಿನ್ ಆರ್.ಕೈದೊಟ್ಲು
















