ಶಿವಮೊಗ್ಗ ಲೈವ್.ಕಾಂ | SHIMOGA NEWS | 21 ಜುಲೈ 2020
ಲಾರಿ ಮತ್ತು ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿ, ಇಬ್ಬರು ಬೈಕ್ ಸಾವರರು ಮೃತರಾಗಿದ್ದಾರೆ. ವಿದ್ಯಾನಗರದ ದುರ್ಗಮ್ಮ ಬೀದಿ ಬಳಿ ಬಿ.ಹೆಚ್.ರಸ್ತೆಯಲ್ಲಿ ಘಟನೆ ಸಂಭವಿಸಿದೆ.
ಹೇಗಾಯ್ತು ಅಪಘಾತ?
ತುಂಗಾ ನದಿ ಸೇತುವೆ ಕಡೆಯಿಂದ ತೆರಳುತ್ತಿದ್ದ ಬೈಕ್ ಮತ್ತು ಭದ್ರಾವತಿ ಕಡೆಯಿಂದ ಬರುತ್ತಿದ್ದ ಲಾರಿ ನಡುವೆ ಅಪಘಾತ ಸಂಭವಿಸಿದೆ. ಡಬಲ್ ರೋಡ್ ಇದ್ದರೂ ಲಾರಿ ಮತ್ತು ಬೈಕ್ ಒಂದೇ ಬದಿಯಲ್ಲಿ ಬಂದಿದ್ದರಿಂದ ಮುಖಾಮುಖಿ ಡಿಕ್ಕಿಯಾಗಿವೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಲಾಕ್ ಡೌನ್ ಹಿನ್ನೆಲೆಯಲ್ಲಿ ಒಂದು ಬದಿಯ ರಸ್ತೆಯನ್ನು ಬಂದ್ ಮಾಡಿದ್ದೇ ಅಪಘಾತಕ್ಕೆ ಕಾರಣ ಎನ್ನಲಾಗುತ್ತಿದೆ.

ಒಬ್ಬ ಸ್ಥಳದಲ್ಲೇ, ಮತ್ತೊಬ್ಬ ಆಸ್ಪತ್ರೆಯಲ್ಲಿ ಸಾವು
ಡಿಕ್ಕಿಯ ರಭಸಕ್ಕೆ ಪಲ್ಸರ್ ಬೈಕ್‍ನಲ್ಲಿದ್ದ ಒಬ್ಬ ಯುವಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಮತ್ತೊಬ್ಬನ ಸ್ಥಿತಿ ಗಂಭೀರವಾಗಿತ್ತು. ಕೂಡಲೇ ಅತನನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೂ, ಕೊನೆ ಉಸಿರೆಳೆದಿದ್ದಾನೆ. ಮೃತರನ್ನು ಗೋಂದಿ ಚಟ್ನಹಳ್ಳಿಯ ನವೀನ್ (30) ಮತ್ತು ವಿಜಯ್ (33) ಎಂದು ಗುರುತಿಸಲಾಗಿದೆ.
ಉಂಬ್ಳೆಬೈಲಿಗೆ ಮೀನು ಹಿಡಿಯಲು ಹೊರಟಿದ್ದರು
ಬೈಕ್ ಸವಾರರು ಉಂಬ್ಳೆಬೈಲಿಗೆ ತೆರಳುತ್ತಿದ್ದರು ಎಂದು ತಿಳಿದು ಬಂದಿದೆ. ಉಂಬ್ಳೆಬೈಲಿನಲ್ಲಿ ಭದ್ರಾ ಜಲಾಶಯದ ಹಿನ್ನೀರು ಭಾಗದಲ್ಲಿ ಮೀನು ಹಿಡಿಯಲು ತೆರಳುತ್ತಿದ್ದರು. ಈ ವೇಳೆ ಎದುರಿನಿಂದ ಬಂದ ಲಾರಿಗೆ ಡಿಕ್ಕಿಯಾಗಿದೆ. ಇನ್ನು, ಲಾರಿಯ ಒಂದು ಭಾಗ ಜಖಂ ಆಗಿದೆ. ಬೈಕ್ ಸಂಪೂರ್ಣ ನುಜ್ಜುಗುಜ್ಜಾಗಿದ್ದು, ಅಪಘಾತದ ತೀವ್ರತೆಗೆ ಸಾಕ್ಷಿಯಾಗಿದೆ. ಪೂರ್ವ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200