ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 21 ಜುಲೈ 2020
ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಕಾರ್ಯಕ್ಕೆ ಆಗಸ್ಟ್ 5ರಂದು ಅಡಿಗಲ್ಲು ಇಡಲಾಗುತ್ತಿದೆ. ಭೂಮಿ ಪೂಜೆ ವೇಳೆ ತುಂಗಾ ಮತ್ತು ಭದ್ರಾ ನದಿಯ ನೀರು ಬಳಸಲಾಗುತ್ತದೆ. ಹಾಗಾಗಿ ಇವತ್ತು ಇವೆರಡು ನದಿಗಳ ನೀರನ್ನು ಅಯೋಧ್ಯೆಗೆ ಕಳುಹಿಸಲಾಯಿತು.
ಎರಡು ನದಿಯ ನೀರಿನ್ನು ಸಂಗ್ರಹಿಸಿ ತರಲಾಗಿದ್ದು, ವಿಶ್ವ ಹಿಂದೂ ಪರಿಷತ್ ವತಿಯಿಂದ ಕೋಟೆ ಶ್ರೀ ಸೀತಾರಾಮಾಂಜನೇಯ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು. ಪ್ರಮುಖರ ಸಮ್ಮುಖದಲ್ಲಿ ನೀರನ್ನು ವಿಶೇಷವಾಗಿ ಪ್ಯಾಕ್ ಮಾಡಿ ಅಯೋಧ್ಯೆಗೆ ಕಳುಹಿಸಲಾಯಿತು.
ಭೂಮಿ ಪೂಜೆ ವೇಳೆ ದೇಶದ ಎಲ್ಲ ಪವಿತ್ರ ನದಿಗಳ ನೀರನ್ನು ಬಳಸಲು ಯೋಜಿಸಲಾಗಿದೆ. ಇದೇ ಕಾರಣಕ್ಕೆ ಶಿವಮೊಗ್ಗ ಜಿಲ್ಲೆಯ ಎರಡು ನದಿಯ ನೀರನ್ನು ಕಳುಹಿಸಲಾಗುತ್ತಿದೆ ಎಂದು ವಿಶ್ವ ಹಿಂದೂ ಪರಿಷತ್ ಜಿಲ್ಲಾಧ್ಯಕ್ಷ ರಮೇಶ್ ಬಾಬು ತಿಳಿಸಿದ್ದಾರೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
LATEST NEWS
- ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್

- ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್ ಲಾರಿ, ಇಲ್ಲಿದೆ ಡಿಟೇಲ್ಸ್

- ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

- ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್ ವಾಪಸ್

- ಸರ್ಕಾರಿ ಕೆಲಸ ಕೊಡಿಸುವುದಾಗಿ ಲಕ್ಷ ಲಕ್ಷ ಪಡೆದ ದಂಪತಿ, ಆಗಿದ್ದೇನು?

About The Editor
ನಿತಿನ್ ಆರ್.ಕೈದೊಟ್ಲು





