BREAKING NEWS | ಶಿವಮೊಗ್ಗ ಜಿಲ್ಲೆಯಾದ್ಯಂತ ಇವತ್ತಿಂದಲೇ ಇಲ್ಲ ಲಾಕ್ ಡೌನ್

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 22 ಜುಲೈ 2020

108201177 913463652466879 5491250964400112510 o.jpg? nc cat=100& nc sid=110474& nc ohc=4jItTT6 xksAX98rAT8& nc ht=scontent.fblr11 1

ಶಿವಮೊಗ್ಗ ಜಿಲ್ಲೆಯಾದ್ಯಂತ ವಿಧಿಸಿದ್ದ ಲಾಕ್‍ ಡೌನ್ ಆದೇಶವನ್ನು ಹಿಂಪಡೆಯಲಾಗಿದೆ. ಇವತ್ತಿಂದ ಶಿವಮೊಗ್ಗ ಜಿಲ್ಲೆಯಲ್ಲಿ ಲಾಕ್‍ ಡೌನ್ ಇರುವುದಿಲ್ಲ. ವ್ಯಾಪಾರ, ವಹಿವಾಟು ಎಂದಿನಂತೆ ನಡೆಯಲಿದೆ. ಆದರೆ ಕೇಂದ್ರ ಸರ್ಕಾರ ವಿಧಿಸಿರುವ ನೈಟ್ ಕರ್ಫ್ಯೂ ಜಾರಿಯಲ್ಲಿ ಇರಲಿದೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ‍್ವರಪ್ಪ, ಕರೋನ ಸೋಂಕು ಹರಡದಂತೆ ತಡೆಯಲು ಮಧ್ಯಾಹ್ನ 2 ಗಂಟೆಯಿಂದ ಮರುದಿನ ಬೆಳಗ್ಗೆ 5 ಗಂಟೆವರೆಗೆ ಶಿವಮೊಗ್ಗ ಜಿಲ್ಲೆಯಾದ್ಯಂತ ಲಾಕ್‍ ಡೌನ್ ವಿಧಿಸಲಾಗಿತ್ತು. ಆದರೆ ಮುಖ್ಯಮಂತ್ರಿ ಅವರು ಆದೇಶದಂತೆ ಶಿವಮೊಗ್ಗ ಜಿಲ್ಲೆಯಲ್ಲೂ ಲಾಕ್‍ ಡೌನ್ ತೆರವುಗೊಳಿಸಲಾಗಿದೆ ಎಂದು ತಿಳಿಸಿದರು.

107095610 909433912869853 8511875037471527700 o.jpg? nc cat=110& nc sid=110474& nc ohc=2c5Rp1JHkF0AX9 TF6R& nc ht=scontent.fblr1 5

ಇವತ್ತಿನಿಂದಲೇ ಲಾಕ್‍ ಡೌನ್ ಇಲ್ಲ

ಶಿವಮೊಗ್ಗ ಜಿಲ್ಲೆಯಾದ್ಯಂತ ಇವತ್ತಿನಿಂದಲೇ ಲಾಕ್‍ಡೌನ್ ಇರುವುದಿಲ್ಲ ಎಂದು ಸಚಿವ ಕೆ.ಎಸ್.ಈಶ‍್ವರಪ್ಪ ಸ್ಪಷ್ಟಪಡಿಸಿದರು. ಕಂಟೈನ್ಮೆಂಟ್ ಜೋನ್ ಹೊರತುಪಡಿಸಿ ಉಳಿದ್ಯಾವ ಭಾಗದಲ್ಲೂ ನಿರ್ಬಂಧ ಇರುವುದಿಲ್ಲ. ಆದರೆ ರಾತ್ರಿ 9 ಗಂಟೆಯಿಂದ ಬೆಳಗ್ಗ 5 ಗಂಟೆವರೆಗೆ ಕೇಂದ್ರ ಸರ್ಕಾರ ನೈಟ್ ಕರ್ಫ್ಯೂ ವಿಧಿಸಿದೆ. ಇದು ಜಾರಿಯಲ್ಲಿ ಇರಲಿದೆ ಎಂದು ಸ್ಪಷ್ಟಪಡಿಸಿದರು.

https://www.facebook.com/liveshivamogga/videos/613020162744463/?t=32

ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್, ಜಿಲ್ಲಾ ರಕ್ಷಣಾಧಿಕಾರಿ ಕೆ.ಎಂ.ಶಾಂತರಾಜು, ಜಿಲ್ಲಾ ಪಂಚಾಯಿತಿ ಸಿಇಒ ವೈಶಾಲಿ, ಅಪರ ಜಿಲ್ಲಾಧಿಕಾರಿ ಅನುರಾಧ, ಪಾಲಿಕೆ ಕಮಿಷನರ್ ಚಿದಾನಂದ ವಟಾರೆ ಉಪಸ್ಥಿತರಿದ್ದರು.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment