ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 22 ಜುಲೈ 2020
ವೇಗವಾಗಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದಿದೆ. ರಸ್ತೆ ಬದಿಯಲ್ಲಿ ಹೋಗುತ್ತಿದ್ದ ವ್ಯಕ್ತಿಯೊಬ್ಬರು ಪಲ್ಟಿಯಾದ ಲಾರಿ ಅಡಿ ಸಿಲುಕಿ ಮೃತಪಟ್ಟಿದ್ದಾರೆ. ಘಟನೆಯಲ್ಲಿ ಚಾಲಕನಿಗೂ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಹೇಗಾಯ್ತು ಘಟನೆ?
ಶಿವಮೊಗ್ಗ ರೈಲ್ವೆ ನಿಲ್ದಾಣ ಸಮೀಪದ ಕೆಇಬಿ ಸರ್ಕಲ್ನಲ್ಲಿ ಘಟನೆ ಸಂಭವಿಸಿದೆ. ಬಾಲರಾಜ್ ಅರಸ್ ರಸ್ತೆಯಲ್ಲಿ ವೇಗವಾಗಿ ಬಂದ ಲಾರಿ, ಸರ್ಕಲ್ನಲ್ಲಿ ಬಲಕ್ಕೆ ತಿರುಗಿದೆ. ವೇಗ ಹೆಚ್ಚದ್ದರಿಂದ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದಿದೆ.
ವ್ಯಕ್ತಿ ಮೇಲೆ ಪಲ್ಟಿ
ಲಾರಿ ಪಲ್ಟಿಯಾದ ವೇಳೆ ವ್ಯಕ್ತಿಯೊಬ್ಬರು ರಸ್ತೆ ಬದಿಯಲ್ಲಿ ಹೋಗುತ್ತಿದ್ದರು. ಅವರ ಮೇಲೆಯೇ ಲಾರಿ ಪಲ್ಟಿಯಾಗಿದೆ. ಲಾರಿಯಡಿ ಸಿಲುಕಿ ವ್ಯಕ್ತಿ ಮೃತರಾಗಿದ್ದಾರೆ. ಮೃತರು ಗೋಂದಿ ಚಟ್ನಳ್ಳಿಯ ಗ್ರಾಮದವರು ಎಂದು ಹೇಳಲಾಗುತ್ತಿದೆ.

ಜೋಳ ಚೆಲ್ಲಾಪಿಲ್ಲಿ
ಲಾರಿಯಲ್ಲಿ ಜೋಳದ ಮೂಟೆಗಳಿದ್ದವು. ಪಲ್ಟಿಯಾಗುತ್ತಿದ್ದಂತೆ ಮೂಟೆಗಳು ಒಡೆದು, ರಸ್ತೆಯ ಮೇಲೆ ಮೆಕ್ಕೆ ಜೋಳದ ರಾಶಿ ಹರಡಿತ್ತು. ಲಾರಿ ಚಿತ್ರದುರ್ಗದ ಕಡೆಗೆ ತೆರಳುತ್ತಿದ್ದು ಎಂದು ತಿಳಿದು ಬಂದಿದೆ. ಅಪಘಾತ ಹಿನ್ನೆಲೆ ಕೆಲಕಾಲ ಈ ರಸ್ತೆಯಲ್ಲಿ ವಾಹನ ಸಂಚಾರ ಬಂದ್ ಆಗಿತ್ತು. ಪೂರ್ವ ಸಂಚಾರಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
LATEST NEWS
- ಶಿವಮೊಗ್ಗದಲ್ಲಿ ಏರ್ಟೆಲ್ ಮೊಬೈಲ್ ಟವರ್ನ ಉಪಕರಣ ಕಳವು, ಆಗಿದ್ದೇನು?

- ಶಿವಮೊಗ್ಗ ಕಾಂಗ್ರೆಸ್ ಕಾರ್ಯದರ್ಶಿ ಸೇರಿ ಇಬ್ಬರು 6 ವರ್ಷ ಪಕ್ಷದಿಂದ ಉಚ್ಛಾಟನೆ, ಕಾರಣವೇನು?

- ಬೇಡರ ಹೊಸಹಳ್ಳಿ ಬಳಿ ಚಲಿಸುತ್ತಿದ್ದ ಬಸ್ಸಿನ ಸೀಟಿನಿಂದಲೇ ಹೊರಗೆ ಬಿದ್ದ ಪ್ರಯಾಣಿಕ

- ಸಿದ್ಲೀಪುರದಲ್ಲಿ ವೈಭವದ ಬ್ರಹ್ಮರಥೋತ್ಸವ, ಏನೇನೆಲ್ಲ ಪೂಜೆಗಳು ನೆರವೇರಿದವು?

- ಕೋಟೆ ಮಾರಿಕಾಂಬ ಜಾತ್ರೆ, ದರ್ಶನ ಮುಗಿಸಿ ಹೊರಬಂದ ವೃದ್ಧೆಗೆ ಕಾದಿತ್ತು ಆಘಾತ, ದಾಖಲಾಯ್ತು ಪ್ರಕರಣ

About The Editor
ನಿತಿನ್ ಆರ್.ಕೈದೊಟ್ಲು






