ಶಿವಮೊಗ್ಗದ ಪ್ರತಿಷ್ಠಿತ ಸೂಪರ್ ಮಾರ್ಕೆಟ್, ಎರಡು ಆಸ್ಪತ್ರೆಗಳ ಸಿಬ್ಬಂದಿಗಳಲ್ಲಿ ಕರೋನ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 23 ಜುಲೈ 2020

ಶಿವಮೊಗ್ಗ ಸೂಪರ್ ಮಾರ್ಕೆಟ್ ಒಂದರಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಯೊಬ್ಬರಲ್ಲಿ ಕರೋನ ಸೋಂಕು ಕಾಣಿಸಿಕೊಂಡಿದೆ. ಆತನೊಂದಿಗೆ ಕೆಲಸ ಮಾಡುತ್ತಿದ್ದವರಲ್ಲಿ ಈಗ ಆತಂಕ ಸೃಷ್ಟಿಯಾಗಿದೆ.

ಎಎ ಸರ್ಕಲ್‍ ಬಳಿಯ ಸೂಪರ್ ‍ಮಾರ್ಕೆಟ್‍ ಒಂದರಲ್ಲಿ ಕೆಲಸ ಮಾಡುತ್ತಿದ್ದ 23 ವರ್ಷದ ಯುವಕನಲ್ಲಿ ಕರೋನ ಸೋಂಕು ಪತ್ತೆಯಾಗಿದೆ. ಈತನೊಂದಿಗೆ ಕೆಲಸ ಮಾಡುತ್ತಿದ್ದ ಹಲವರನ್ನು ಈಗಾಗಲೇ ಕ್ವಾರಂಟೈನ್‍ಗೆ ಒಳಪಡಿಸಲಾಗಿದೆ.

ಸೂಪರ್ ಮಾರ್ಕೇಟನ್ನು ಎರಡು ದಿನದ ಬಂದ್ ಮಾಡಲಾಗುತ್ತದೆ ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ತಿಳಿಸಿದ್ದಾರೆ.

ಮತ್ತೊಂದೆಡೆ ಶಿವಮೊಗ್ಗ ನಗರದ ಎರಡು ಪ್ರತಿಷ್ಠಿತ ಆಸ್ಪತ್ರೆಯ ಸಿಬ್ಬಂದಿಯಲ್ಲೂ ಸೋಂಕು ಪತ್ತೆಯಾಗಿದೆ. ಆಸ್ಪತ್ರೆಯೊಂದರ ಅಕೌಂಟ್ ಎಗ್ಸಿಕ್ಯೂಟಿವ್ 30 ವರ್ಷದ ಮಹಿಳೆಯಲ್ಲಿ ಸೋಂಕು ಪತ್ತೆಯಾಗಿದೆ. ಮತ್ತೊಂದು ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ 23 ವರ್ಷದ ಮಹಿಳೆಯಲ್ಲೂ ಸೋಂಕು ಇರುವುದು ದೃಢವಾಗಿದೆ. ಈಕೆ ಚನ್ನಪ್ಪಲೇಔಟ್‍ನ ಪಿಜಿ ಒಂದರಲ್ಲಿ ಉಳಿದ್ದುಕೊಂಡಿದ್ದಾರೆ.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment