ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA NEWS | 23 ಜುಲೈ 2020
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ತೀವ್ರ ವಿರೋಧಕ್ಕೆ ಕಾರಣವಾಗಿದ್ದ ಹಳೆ ಶಿವಮೊಗ್ಗ ಸೀಲ್ಡೌನ್ ನಿರ್ಧಾರದಿಂದ ಜಿಲ್ಲಾಡಳಿತ ಹಿಂದೆ ಸರಿದಿದೆ. ತಕ್ಷಣದಿಂದ ಜಾರಿಗೆ ಬರುವಂತೆ ಹಳೆ ಶಿವಮೊಗ್ಗ ಸೀಲ್ ಡೌನ್ ತೆರವುಗೊಳಿಸಲಾಗಿದೆ.
ದಿಢೀರ್ ಸುದ್ದಿಗೋಷ್ಠಿ ಕರೆದ ಮಿನಿಸ್ಟರ್
ಮೊದಲ ದಿನವೇ ಕ್ಲಸ್ಟರ್ ಕಂಟೈನ್ಮೆಂಟ್ ಜೋನ್ ವಿರುದ್ಧ ಈ ಭಾಗದ ಜನರು ವಿರೋಧ ವ್ಯಕ್ತಪಡಿಸಿದ್ದರು. ಇದರಿಂದ ರಾತ್ರಿ ದಿಢೀರ್ ಸುದ್ದಿಗೋಷ್ಠಿ ಕರೆದ ಸಚಿವ ಕೆ.ಎಸ್.ಈಶ್ವರಪ್ಪ, ಶಿವಮೊಗ್ಗ ನಗರದ ಕೆಲವು ವಾರ್ಡ್ಗಳಲ್ಲಿ ಜಾರಿಗೊಳಿಸಲಾಗಿದ್ದ ಒಂದು ವಾರಗಳ ಕ್ಲಸ್ಟರ್ ಕಂಟೈನ್ಮೆಂಟ್ ಜೋನ್ ಆದೇಶ ಹಿಂತೆಗೆದುಕೊಳ್ಳಲಾಗಿದೆ ಎಂದು ತಿಳಿಸಿದರು.
ಯು ಟರ್ನ್ಗೆ ಕಾರಣವೇನು?
ರಾಜ್ಯದ ಎಲ್ಲೆಡೆ ಲಾಕ್ಡೌನ್ ತೆರವುಗೊಳಿಸಿರುವ ಹಿನ್ನೆಲೆಯಲ್ಲಿ ಹಾಗೂ ಸ್ಥಳೀಯರು ತಾವೇ ಕರೋನಾ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಸೀಲ್ಡೌನ್ ತೆರವುಗೊಳಿಸಲು ನಿರ್ಧರಿಸಲಾಗಿದೆ ಎಂದು ಸಚಿವ ಈಶ್ವರಪ್ಪ ಹೇಳಿದರು.
ಇನ್ಮುಂದೆ ಮನೆಗಳಷ್ಟೆ ಸೀಲ್ಡೌನ್
ಇನ್ನು ಮುಂದೆ ಕರೋನಾ ಪಾಸಿಟಿವ್ ಪ್ರಕರಣಗಳು ಕಂಡು ಬರುವ ಮನೆಗಳನ್ನು ಮಾತ್ರ ಸೀಲ್ಡೌನ್ ಮಾಡಲು ನಿರ್ಧರಿಸಲಾಗಿದೆ. ಶಿವಮೊಗ್ಗ ನಗರದಲ್ಲಿ ಪಾಸಿಟಿವ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರ ಜವಾಬ್ದಾರಿ ಹೆಚ್ಚಾಗಿದೆ. ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರವನ್ನು ಕಟ್ಟುನಿಟ್ಟಿನಿಂದ ಪಾಲಿಸುವುದು, ಗುಂಪು ಸೇರದಿರುವುದು, ಅಗತ್ಯ ಸಂದರ್ಭದಲ್ಲಿ ಮಾತ್ರ ಮನೆಯಿಂದ ಹೊರಬರುವುದು ಮುಂತಾದ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಿನಿಂದ ಪಾಲಿಸಬೇಕು ಎಂದು ಅವರು ಹೇಳಿದರು.
ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್, ಜಿಲ್ಲಾ ರಕ್ಷಣಾಧಿಕಾರಿ ಕೆ.ಎಂ.ಶಾಂತರಾಜು, ಜಿಲ್ಲಾ ಪಂಚಾಯತ್ ಸ್ಥಾಯಿ ಸಮಿತಿ ಅಧ್ಯಕ್ಷ ಕಾಂತೇಶ್ ಉಪಸ್ಥಿತರಿದ್ದರು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]