ಶಿವಮೊಗ್ಗಕ್ಕೆ ಬರ್ತಿದ್ದಾರೆ ಮಾಜಿ ಸಿಎಂ ಸಿದ್ದರಾಮಯ್ಯ, ಜಿಲ್ಲೆಯ ಮುಖಂಡರ ಜೊತೆ ಮಹತ್ವದ ಸಭೆ

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

ಶಿವಮೊಗ್ಗ ಲೈವ್.ಕಾಂ | SHIMOGA NEWS | 1 ಆಗಸ್ಟ್ 2020

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಗಸ್ಟ್ 4 ರಂದು ಶಿವಮೊಗ್ಗ ನಗರಕ್ಕೆ ಭೇಟಿ ನೀಡಲಿದ್ದಾರೆ ಎಂದು ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಹೆಚ್.ಎಸ್.ಸುಂದರೇಶ್ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಸಿದ್ದರಾಮಯ್ಯ ಅವರ ಜೊತೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮ್ಮದ್ ಕೂಡ ಇರುತ್ತಾರೆ. ಇವರ ಜೊತೆಗೆ ಜಿಲ್ಲೆಯ ಕಾಂಗ್ರೆಸ್ ನಾಯಕರು ಇರಲಿದ್ದು, ಲಗಾನ್ ಕಲ್ಯಾಣ ಮಂದಿರದಲ್ಲಿ ಮುಖಂಡರ ಸಭೆ ನಡೆಯಲಿದ್ದು, ಯಾವುದೇ ಬಹಿರಂಗ ಸಭೆ ಇರುವುದಿಲ್ಲ ಎಂದರು.

112754364 1179775075717244 3481518913399776072 o.jpg? nc cat=109& nc sid=8024bb& nc ohc=WLJvvs7CdzAAX9RdEf4& nc ht=scontent.fblr11 1

ಕರೋನ ನಿಯಂತ್ರಣದಲ್ಲಿ ಸರ್ಕಾರ ವಿಫಲ

ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕರೋನಾ ಕಾಯಿಲೆ ತಡೆಯಲು ಸಂಪೂರ್ಣ ವಿಫಲವಾಗಿವೆ. ಪ್ರಧಾನಿ ಮೋದಿ ಮತ್ತು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಕರೋನಾ ಸೋಂಕನ್ನು ಹರಡುವುದನ್ನು ನಿಯಂತ್ರಿಸುತ್ತಿಲ್ಲ. ಅದರ ಬದಲು ಜನರ ಗಮನವನ್ನು ಬೇರೆ ಕಡೆಗೆ ಸೆಳೆಯುತ್ತ ದಿಕ್ಕು ತಪ್ಪಿಸುತ್ತಿದ್ದಾರೆ ಎಂದು ಆರೋಪಿಸಿದರು.

ಕರೋನಾದ ಸಂದರ್ಭದಲ್ಲಿಯೇ ಸುಗ್ರಿವಾಜ್ಞೆಗಳ ಮೂಲಕ ಜನ ವಿರೋಧಿ ಕಾಯ್ದೆಗಳನ್ನು ಜಾರಿ ತರಲಾಗುತ್ತಿದೆ. ವಲಸೆ ಕಾರ್ಮಿಕರ ಕುರಿತಾಗಿ ಯಾವ ಕ್ರಮವನ್ನು ತೆಗೆದುಕೊಂಡಿಲ್ಲ. ಇಡೀ ದೇಶದ ಆರ್ಥಿಕ ವ್ಯವಸ್ಥೆಯೇ ಕುಸಿದು ಬಿದ್ದಿದೆ. ಈ ಎಲ್ಲಾ ವಿಷಯಗಳನ್ನು ಕಾಂಗ್ರೆಸ್ ಚರ್ಚಿಸುತ್ತದೆ ಎಂದರು.

ಉಪಕರಣ ಖರೀದಿಯಲ್ಲಿ ಹಗರಣ

ಪ್ರಮುಖವಾಗಿ ಕರೋನಾ ಉಪಕರಣಗಳ ಖರೀದಿಯಲ್ಲಿ ಕೋಟ್ಯಾಂತರ ರೂ. ಹಗರಣವಾಗಿದೆ. ಈ ವಿಷಯವನ್ನು ಕೂಡ ಚರ್ಚಿಸಲಾಗುವುದು. ಶಿವಮೊಗ್ಗ ಜಿಲ್ಲೆಗೆ ಸಂಬಂಧಿಸಿದಂತೆ ಮೆಗ್ಗಾನ್ ಆಸ್ಪತ್ರೆಯ ದೋಷಗಳ ವಿರುದ್ಧ ಮತ್ತಷ್ಟು ಹೋರಾಟ ರೂಪಿಸಲಾಗುವುದು. ಅಲ್ಲಿ ಕರೋನಾ ರೋಗಿಗಳನ್ನು ಸಂಪೂರ್ಣವಾಗಿ ನಿರ್ಲಕ್ಷ್ಯ ಮಾಡಲಾಗುತ್ತಿದೆ. ಈ ಬಗ್ಗೆ ಈಗಾಗಲೇ ಕಾಂಗ್ರೆಸ್ ತನ್ನ ಹೋರಾಟ ಆರಂಭಿಸಿದ್ದು, ಮತ್ತಷ್ಟು ವಿಸ್ತರಿಸಲಾಗುವುದು ಎಂದರು.

ಪತ್ರಿಕಾಗೋಷ್ಠಿಯಲ್ಲಿ ಪ್ರಮುಖರಾದ ಮಾಜಿ ಶಾಸಕ ಕೆ.ಬಿ.ಪ್ರಸನ್ನಕುಮಾರ್, ಪಾಲಿಕೆ ವಿರೋಧ ಪಕ್ಷದ ನಾಯಕ ಹೆಚ್.ಸಿ.ಯೋಗೀಶ್, ಚಂದ್ರಭೂಪಾಲ್, ವಿಶ್ವನಾಥ್ ಕಾಶಿ, ಯಮುನಾ ರಂಗೇಗೌಡ, ನಾಗರಾಜ್, ಆರ್.ಸಿ.ನಾಯಕ್, ದೀಪಕ್‍ಸಿಂಗ್, ಮಧು ಸೇರಿದಂತೆ ಹಲವರಿದ್ದರು.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment