ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 3 ಆಗಸ್ಟ್ 2020
ಶಿವಮೊಗ್ಗದ ಹೊಸಮನೆ ಬಡಾವಣೆಯಲ್ಲಿ ಮೂರು ದಿನದ ಕರೋನ ತಪಾಸಣಾ ಶಿಬಿರ ಆಯೋಜಿಸಲಾಗಿದೆ. ಬಡಾವಣೆಯಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾಗಿರುವುದರಿಂದ ತಪಾಸಣಾ ಶಿಬಿರ ಮಾಡಲಾಗುತ್ತಿದೆ.
ಮಹಾನಗರ ಪಾಲಿಕೆ, ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ಸಹಯೋಗದಲ್ಲಿ ಈ ಶಿಬಿರ ಆಯೋಜಿಸಲಾಗಿದೆ. ಹೊಸಮನೆ ಬಡಾವಣೆಯ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ತಪಾಸಣೆ ನಡೆಸಲಾಗುತ್ತಿದೆ. ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 2 ಗಂಟೆವರೆಗೆ ಕರೋನ ಟೆಸ್ಟ್ ಮಾಡಲಾಗುತ್ತದೆ.
ಕೆಮ್ಮು, ಶೀತ, ಜ್ವರದ ಲಕ್ಷಣಗಳು ಇರುವಂತಹ ಬಡಾವಣೆಯ ನಿವಾಸಿಗಳು ಕೊರೋನ ಟೆಸ್ಟ್ ಮಾಡಿಸಿ, ಆರೋಗ್ಯ ಜಾಗೃತಿ ವಹಿಸಬೇಕೆಂದು ಮಹಾನಗರ ಪಾಲಿಕೆ ಸದಸ್ಯೆ ರೇಖಾ ರಂಗನಾಥ್ ತಿಳಿಸಿದರು
ನಗರ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಶ್ರೀಧರ್, ಕಾಂಗ್ರೆಸ್ ಮುಖಂಡ ಕೆ.ರಂಗನಾಥ್ , ಪ್ರಾಥಮಿಕ ಆರೋಗ್ಯ ಕೇಂದ್ರದ ಮಹಿಳಾ ಸಹಾಯಕಿ ವಿಜಯಾ ಮತ್ತು ಸಿಬ್ಬಂದಿಗಳು ಈ ವೇಳೆ ಇದ್ದರು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
LATEST NEWS
- ಸರ್ವೆಗೆ ಹೋದಾಗ ಇಂಜಿನಿಯರ್, ಸರ್ವೇಯರ್ ಮೇಲೆ ಕೋಲು, ಕಲ್ಲುಗಳಿಂದ ದಾಳಿ

- ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

- ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

- ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್ ವಿಚಾರ

- ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್ ಅಪ್‌ಡೇಟ್

About The Editor
ನಿತಿನ್ ಆರ್.ಕೈದೊಟ್ಲು
















