ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIRALAKOPPA NEWS | 3 ಆಗಸ್ಟ್ 2020
ಶಿರಾಳಕೊಪ್ಪ ಪಟ್ಟಣದಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಶಿರಾಳಕೊಪ್ಪದ ಪೊಲೀಸ್ ಸಿಬ್ಬಂದಿಯೊಬ್ಬರು ಗಂಭೀರ ಗಾಯಗೊಂಡು ಸಾವನ್ನಪ್ಪಿದ್ದಾರೆ. ಮತ್ತೊಬ್ಬ ವ್ಯಕ್ತಿಯ ಸ್ಥಿತಿ ಗಂಭೀರವಾಗಿದ್ದು, ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ತಿಳಿದು ಬಂದಿದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಎರಡು ಬೈಕ್ಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಶಿರಾಳಕೊಪ್ಪ ಠಾಣೆಯ ಮುಖ್ಯ ಪೇದೆ ಪ್ರವೀಣ್ ಮೃತಪಟ್ಟಿದ್ದಾರೆ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಪ್ರವೀಣ್, ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.
ಹೇಗಾಯ್ತು ಅಪಘಾತ?
ಶಿರಾಳಕೊಪ್ಪದ ಪೆಟ್ರೋಲ್ ಬಂಕ್ ಒಂದರಲ್ಲಿ ಪೆಟ್ರೋಲ್ ಭರ್ತಿ ಮಾಡಿಕೊಂಡು ಮನೆ ಕಡೆಗೆ ತೆರಳುತ್ತಿದ್ದಾಗ ಪ್ರವೀಣ್ ಅವರ ಬೈಕ್ಗೆ ಮತ್ತೊಂದು ಬೈಕ್ ಡಿಕ್ಕಿಯಾಗಿದೆ. ಈ ವೇಳೆ ಪ್ರವೀಣ್ ಗಂಭೀರವಾಗಿ ಗಾಯಗೊಂಡಿದ್ದಾರೆ. ಕೂಡಲೆ ಅವರನ್ನು ಶಿರಾಳಕೊಪ್ಪದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಯಿತು. ಚಿಕಿತ್ಸೆ ಫಲಕಾರಿ ಆಗದೆ ಮೃತಪಟ್ಟಿದ್ದಾರೆ.
ಮತ್ತೊಂದು ಬೈಕ್ನಲ್ಲಿದ್ದ ಮಾಲತೇಶ್ ಎಂಬಾತ ಗಂಭೀರವಾಗಿ ಗಾಯಗೊಂಡಿದ್ದಾರೆ. ಶಿರಾಳಕೊಪ್ಪದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ಮಾಲತೇಶ್ನನ್ನು ಶಿವಮೊಗ್ಗದ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]