ಶಿವಮೊಗ್ಗ ಲೈವ್.ಕಾಂ | SAGARA NEWS | 4 ಆಗಸ್ಟ್ 2020
ಸಾಗರದ ಪಟ್ಟಣ ವ್ಯಾಪ್ತಿಯ ಸೀಲ್‍ಡೌನ್ ಪ್ರದೇಶದಲ್ಲಿ ಸಾರ್ವಜನಿಕರಿಗೆ ಆಗುತ್ತಿರುವ ಅನಾನುಕೂಲವನ್ನು ಕೂಡಲೇ ಸರಿಪಡಿಸಬೇಕು ಎಂದು ಒತ್ತಾಯಿಸಿ ಮಲೆನಾಡು ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ತಹಶೀಲ್ದಾರ್ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ ವೇದಿಕೆ ಕಾರ್ಯಕರ್ತರು, ಪಟ್ಟಣ ವ್ಯಾಪ್ತಿಯಲ್ಲಿ ವೈಜ್ಞಾನಿಕವಾಗಿ ಸೀಲ್ ಡೌನ್ ಮಾಡುತ್ತಿಲ್ಲ. ಸೀಲ್ ಡೌನ್ ಪ್ರದೇಶದ ಅಕ್ಕಪಕ್ಕದಲ್ಲೂ ಅಂಗಡಿ ಬಾಗಿಲು ತೆಗೆಯಲು ಅವಕಾಶ ಕೊಡುತ್ತಿಲ್ಲ. 14 ದಿನ ಸೀಲ್ ಡೌನ್ ಮಾಡುವುದರಿಂದ ಅಕ್ಕಪಕ್ಕದ ವ್ಯಾಪಾರಿಗಳು ತೀವ್ರ ಸಂಕಷ್ಟಕ್ಕೀಡಾಗುತ್ತಿದ್ದಾರೆ ಎಂದು ಆರೋಪಿಸಿದರು.
ಈ ಸಂಬಂಧ ತಹಶೀಲ್ದಾರ್ ಮೂಲಕ ಮುಖ್ಯಮಂತ್ರಿ ಅವರಿಗೆ ಮನವಿ ಸಲ್ಲಿಸಲಾಯಿತು.
ವೇದಿಕೆ ಕಾರ್ಯಾಧ್ಯಕ್ಷ ವಿ.ಕೆ.ವಿಜಯ ಕುಮಾರ್, ನಗರದ ಘಟಕದ ಅಧ್ಯಕ್ಷ ರಾಜು ಬಿ.ಮಡಿವಾಳ, ಗೌರವಾಧ‍್ಯಕ್ಷ ಪುರುಷೋತ್ತಮ್, ಪ್ರಧಾನ ಕಾರ್ಯದರ್ಶಿ ಶ್ರೀಧರ್ ಸಾಗರ, ಲಿಂಗರಾಜ್ ಆರೋಡಿ, ಸಾವಿತ್ರಮ್ಮ, ಸೌಭಾಗ್ಯ ಸೇರಿದಂತೆ ಹಲವರು ಇದ್ದರು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]