ಶಿವಮೊಗ್ಗ ಲೈವ್.ಕಾಂ | ANANDAPURA NEWS | 4 ಆಗಸ್ಟ್ 2020
ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಮರಗಳು ಧರೆಗುರುಳಿದ ವರದಿಯಾಗುತ್ತಿದೆ. ಆನಂದಪುರ ಮತ್ತು ರಿಪ್ಪನ್ಪೇಟೆ ರಸ್ತೆಯಲ್ಲಿ ಮರ ಉರುಳಿದ್ದು, ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ದೊಡ್ಡ ಮರವೊಂದು ರಸ್ತೆಗೆ ಉರುಳಿತ್ತು. ಇದರಿಂದ ವಾಹನ ಸಂಚಾರಕ್ಕೆ ಅಡೆಚಣೆ ಉಂಟಾಗಿತ್ತು. ರಸ್ತೆಯ ಒಂದು ಬದಿಯಲ್ಲಿ ಸ್ವಲ್ಪ ಜಾಗವಿತ್ತು. ಈ ಜಾಗದಲ್ಲಿ ವಾಹನಗಳು ಸಂಚರಿಸುತ್ತಿದ್ದವು.
ಈ ಜಾಗದಲ್ಲಿ ಗ್ಯಾಸ್ ಸಿಲಿಂಡರ್ ಲಾರಿಯೊಂದು ಸಂಚರಿಸಲು ಮುಂದಾಯಿತು. ಈ ವೇಳೆ ಲಾರಿ ಸಿಕ್ಕಿ ಹಾಕಿಕೊಂಡಿದೆ. ಇದರಿಂದ ರಸ್ತೆ ಸಂಚಾರ ಸಂಪೂರ್ಣವಾಗಿ ಸ್ಥಗಿತಗೊಂಡಿದೆ. ಮರ ತೆರವು ಕಾರ್ಯ ನಡೆಯುತ್ತಿದೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]